ಜ.12ರಂದು ಪ್ರಧಾನಿ ಮೋದಿ ಆಗಮನ; ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ರಂಗು

ಪ್ರವೇಶ ಅದೃಷ್ಟ ಪಡೆದವರು ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲಿದ್ದಾರೆ.

Team Udayavani, Jan 12, 2023, 12:21 PM IST

ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ರಂಗು

ಹುಬ್ಬಳ್ಳಿ: ಭಾರತೀಯ ಸಂಸ್ಕೃತಿ, ಪರಂಪರೆ, ಆಚರಣೆ, ಕಲೆ ಹಾಗೂ ಸಾಂಸ್ಕೃತಿಕ ಸಿರಿವಂತಿಕೆ ಲೋಕದ ಅನಾವರಣ, ವಿವಿಧತೆ ಯಲ್ಲಿ ಏಕತೆ ಭಾವದ ಯುವಶಕ್ತಿ ಸಂಗಮ, ದೇಶದ ಸಾಂಸ್ಕೃತಿಕ ರಾಯಭಾರಿಗಳಂತೆ ಇರುವ ಯುವ ಪ್ರತಿಭೆಗಳ ದಿಗ್ಧರ್ಶನಕ್ಕೆ ವೇದಿಕೆಯಾಗಲು ಹಾಗೂ ಪ್ರೀತಿಯ ಆತಿಥ್ಯ ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರ ಸಜ್ಜಾಗಿದೆ.

ಪ್ರಧಾನಿ ಉಪಸ್ಥಿತಿ ರಾಷ್ಟ್ರೀಯ ಯುವಜನೋತ್ಸವ ಸಂಭ್ರಮ ಒಂದು ಕಡೆಯಾದರೆ, ಉತ್ಸವಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವಿಕೆ ಮಹಾನಗರವನ್ನು ಪುಳಕಗೊಳ್ಳು ವಂತೆ ಮಾಡಿದೆ. ದೇಶದ ಯುವ ಸಾಂಸ್ಕೃತಿಕ ಜಗತ್ತು ಹುಬ್ಬಳ್ಳಿ- ಧಾರವಾಡದಲ್ಲಿ ಮೈದಳೆಯಲಿದ್ದು, ರಾಜ್ಯದ ಎರಡನೇ ಹಾಗೂ ಉತ್ತರ ಕರ್ನಾಟಕದ ಮೊದಲ ರಾಷ್ಟ್ರೀಯ ಯುವಜನೋತ್ಸವಕ್ಕಾಗಿ ಹುಬ್ಬಳ್ಳಿ- ಧಾರವಾಡದಲ್ಲಿ ಹಬ್ಬದ ಸಡಗರ ಸೃಷ್ಟಿಯಾಗಿದೆ.

ಉತ್ಸವ ಉದ್ಘಾಟನೆಯಲ್ಲಿ ಸ್ವತಃ ಪ್ರಧಾನಿ ಮೋದಿ ಪಾಲ್ಗೊಳ್ಳುವಿಕೆ ಸಂಭ್ರಮ-ಸಂತಸ ದುಪ್ಪಟ್ಟುಗೊಳಿಸಿದೆ. ಅವಳಿ ನಗರದೆಲ್ಲೆಡೆ ಸ್ವಾಗತ ಕೋರುವ ಫ್ಲೆಕ್ಸ್‌, ಬ್ಯಾನರ್‌ ಗಳು ರಾರಾಜಿಸುತ್ತಿವೆ. ವಿವಿಧ ಪ್ರಮುಖ ವೃತ್ತಗಳು, ಹಲವು ಕಟ್ಟಡಗಳು ವಿದ್ಯುತ್‌ ದೀಪಗಳಿಂದ ಝಗಮಗಿಸುತ್ತಿವೆ.

ಜ.12-16ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕಾಗಿ ದೇಶ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಾಂಸ್ಕೃತಿಕ ಯುವ ರಾಯಭಾರಿಗಳು ತಂಡಗಳ ರೂಪದಲ್ಲಿ ಅವಳಿನಗರಕ್ಕೆ ಬಂದಿದ್ದು, ಪ್ರತಿಭೆ ಅನಾ ವರಣಕ್ಕೆ, ನಾಡು, ದೇಶದ ಸಾಂಸ್ಕೃತಿಕ ಹಿರಿಮೆ ಪ್ರದರ್ಶನಕ್ಕೆ ತಾಲೀಮಿನಲ್ಲಿ ತೊಡಗಿದ್ದಾರೆ.

ವೀರಸನ್ಯಾಸಿ ಸ್ವಾಮಿ ವಿವೇಕಾನಂದ ಜನ್ಮದಿನ ಅಂಗ ವಾಗಿ 1995ರಿಂದ ಕೇಂದ್ರ ಯುವಜನ ವ್ಯವಹಾರ ಹಾಗೂ ಕ್ರೀಡಾ ಇಲಾಖೆಯಿಂದ ಪ್ರತಿ ವರ್ಷ ಜ.12-16ರ ವರೆಗೆ ರಾಷ್ಟ್ರೀಯ ಏಕತಾ ದಿನವಾಗಿ ಯುವಜನೋತ್ಸವ ಆಯೋಜಿಸುತ್ತ ಬಂದಿದೆ. ಆಯಾ ರಾಜ್ಯಗಳು ಕೇಂದ್ರ ಸರಕಾರದ ಸಹಯೋಗದೊಂದಿಗೆ ಉತ್ಸವ ಕೈಗೊಳ್ಳುತ್ತಿವೆ. 2012ರಲ್ಲಿ ಮಂಗಳೂರಿನಲ್ಲಿ 17ನೇ ರಾಷ್ಟ್ರೀಯ ಯುವಜನೋತ್ಸವ ನಡೆದಿತ್ತು. ಸುಮಾರು 5,000ಕ್ಕೂ ಅಧಿಕ ಯುವ
ಪ್ರತಿಭೆ ಗಳು ಪಾಲ್ಗೊಂಡಿದ್ದವು. ಸುಮಾರು ಒಂದು ದಶಕದ ಬಳಿಕ ಈಗ ಜ.12-16ರ ವರೆಗೆ ಹುಬ್ಬಳ್ಳಿ- ಧಾರವಾಡದಲ್ಲಿ ನಡೆಯುತ್ತಿದೆ.

ಹುಬ್ಬಳ್ಳಿಯಲ್ಲಿ ಚಾಲನೆ -ಧಾರವಾಡದಲ್ಲಿ ಅನಾವರಣ 26ನೇ ರಾಷ್ಟ್ರೀಯ ಯುವ ಜನೋತ್ಸವ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಚಾಲನೆ ಪಡೆಯಲಿದ್ದು, ದೇಶ ಯುವ ಸಾಂಸ್ಕೃತಿಕಲೋಕ ವಿದ್ಯಾನಗರಿ ಧಾರವಾಡದಲ್ಲಿ ಅನಾವರಣಗೊಳ್ಳಲಿದೆ. ಜ.12ರಂದು ಸಂಜೆ 4 ಗಂಟೆಗೆ ಇಲ್ಲಿನ ರೈಲ್ವೆ ಮೈದಾನದಲ್ಲಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಪ್ರತಿ ವರ್ಷದ ರಾಷ್ಟ್ರೀಯ ಯುವಜನೋತ್ಸವ ಒಂದೊಂದು ಧ್ಯೇಯದೊಂದಿಗೆ ಆಚರಣೆಗೊಳ್ಳಲಿದೆ.

ಸಮಾರಂಭಕ್ಕೆ ರೈಲ್ವೆ ಮೈದಾನ ಸಜ್ಜುಗೊಂಡಿದ್ದು, ಸಮಾರಂಭದಲ್ಲಿ ಯುವಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಬೇಕಿದೆ. ಈಗಾಗಲೇ ಸುಮಾರು 40-45 ಸಾವಿರದಷ್ಟು ಯುವಕರು ನೋಂದಣಿ ಮಾಡಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಜಿಲ್ಲಾಡಳಿತ 25 ಸಾವಿರ ಯುವಕರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಿದೆ. ಪ್ರವೇಶ ಅದೃಷ್ಟ ಪಡೆದವರು ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಪ್ರಧಾನಿಗೆ ಬಿದಿರು ಕಲೆ ಮೂರ್ತಿ ನೀಡಿ ಸಮ್ಮಾನ
ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ರಾಷ್ಟ್ರಧ್ವಜ ಸ್ಮರಣಿಕೆ, ಏಲಕ್ಕಿ ಹಾರ, ಬೀದರ್‌ ಬಿದರುಕಲೆ ಮೂರ್ತಿಯನ್ನು ನೀಡಿ ಸಮ್ಮಾನಿಸಲಾಗುವುದು. ಹುಬ್ಬಳ್ಳಿಯ ಬೆಂಗೇರಿ ಹಾಗೂ ಗರಗದಲ್ಲಿ ತಯಾರಿಸಲಾದ ಟೀಕ್‌ವುಡ್‌ ಚೌಕಟ್ಟು ಹೊಂದಿದ ರಾಷ್ಟ್ರಧ್ವಜ ಇರುವ ಸ್ಮರಣಿಕೆ ನೀಡಲಾಗುತ್ತಿದ್ದು, ಹಾವೇರಿಯಲ್ಲಿ ತಯಾರಿಸುವ ಏಲಕ್ಕಿ ಹಾರ ಹಾಕಲಾಗುತ್ತಿದೆ. ಧಾರವಾಡದ ವಿಶೇಷ ಕಸೂತಿ ಕಲೆ ಹೊಂದಿದ ಕೈಮಗ್ಗದ ಶಾಲು, ಬೀದರ್‌ನ ಬಿದಿರು ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮೂರ್ತಿ ನೀಡಿ ಗೌರವಿಸಲಾಗುತ್ತಿದೆ. ಪ್ರಧಾನಿ ಮೋದಿ ಜ.12ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದು, ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೆ ಸುಮಾರು 8 ಕಿ.ಮೀ.ವರೆಗೆ ರಸ್ತೆಯ ಎರಡೂ ಇಕ್ಕೆಲುಗಳಲ್ಲಿ ನಿಲ್ಲಲಿರುವ ಜನರತ್ತ ಕೈಬೀಸುತ್ತ ಬರಲಿದ್ದು, 2-3 ಕಡೆ ವಾಹನದಿಂದ ಕೆಳಗಿಳಿದು ಜನರ ಬಳಿ ಹೋಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.