ಹೋರಾಟಗಾರರಿಗೆ ದೊರೆಯದ ಮುಕ್ತಿ 

Team Udayavani, Feb 24, 2019, 11:17 AM IST

24-february-19.jpg

ನವಲಗುಂದ: ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರ ರೈತರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣ ಹಿಂಪಡೆಯಬೇಕೆಂದು ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ನೀಡಿದ್ದರೂ ಇನ್ನೂವರೆಗೂ ರೈತರಿಗೆ ಈ ಪ್ರಕರಣಗಳಿಂದ ಮುಕ್ತಿ ದೊರೆತಿಲ್ಲ. ಈ ನಡುವೆಯೇ ಮತ್ತೆ ಸುಮಾರು 25 ರೈತರ ಮೇಲೆ ಸಿಆರ್‌ಪಿಸಿ ಕಲಂ 107 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ, ತಾಲೂಕು ದಂಡಾಧಿಕಾರಿಗಳಿಗೆ ವರದಿ ನೀಡಿದ್ದಾರೆ. ಅದರನ್ವಯ ದಂಡಾಧಿಕಾರಿಗಳ ಕೋರ್ಟ್‌ಗೆ ಫೆ. 25ರಂದು ಹಾಜರಾಗಬೇಕೆಂದು 25 ರೈತರಿಗೆ ನೋಟಿಸ್‌ ಜಾರಿಯಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಮಹದಾಯಿ ಹೋರಾಟ ನೇತೃತ್ವ ವಹಿಸಿದ್ದ ಲೋಕನಾಥ ಹೆಬಸೂರ, ಸತ್ಯನಾರಾಯಣ ಹೆಬಸೂರ, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ದೇವೇಂದ್ರಪ್ಪ ಹಳ್ಳದ ಸೇರಿದಂತೆ 25 ಜನರ ವಿರುದ್ಧ ಪೊಲೀಸ್‌ ಇಲಾಖೆ ಸಿಆರ್‌ಪಿಸಿ ಕಲಂ 107 ಅಡಿಯಲ್ಲಿ ಫೆ. 4ರಂದು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ತಾಲೂಕಾ ದಂಡಾಧಿಕಾರಿಗೆ ವರದಿ ಸಲ್ಲಿಸಿದೆ.  

ನೋಟಿಸ್‌ನಲ್ಲಿ ಏನಿದೆ?: ಪೊಲೀಸ್‌ ವರದಿ ಅನ್ವಯ 25 ರೈತರಿಗೆ ತಾಲೂಕಾ ದಂಡಾ ಧಿಕಾರಿಗಳು ನೋಟಿಸ್‌ ರವಾನಿಸಿದ್ದಾರೆ. ಬರಲಿರುವ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಸಾರ್ವಜನಿಕರಲ್ಲಿ ಪ್ರಭಾವ ಬೀರುತ್ತಾ, ಆಸೆ-ಆಕಾಂಕ್ಷೆಗಳನ್ನು ನೀಡುತ್ತಾ, ಪಕ್ಷಭೇದ ಉಂಟುಮಾಡಿ ಅಕ್ರಮ ಎಸಗುವ ಸಂಭವ ಇದೆ. ಶಾಂತತಾ ಭಂಗವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಲಂ 107ರ ಅಡಿ ಪ್ರಕರಣವನ್ನು ಪಟ್ಟಣದ ಪೊಲೀಸ್‌ ಅಧಿಕಾರಿ ದಾಖಲಿಸಿದ್ದಾರೆ. ಈ ಕುರಿತಾಗಿ ಫೆ. 25ರಂದು ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯಕ್ಕೆ ಖುದ್ದಾಗಿ ಹಾಜರಾಗಿ ವಿವರಣೆ ನೀಡುವುದರ ಜತೆಗೆ 50 ಸಾವಿರ ರೂ. ಮುಚ್ಚಳಿಕೆ ಬಾಂಡ್‌ ನೀಡಿ ಜಾಮೀನು ಏಕೆ ಪಡೆಯಬಾರದು ಎಂದು ದಂಡಾಧಿಕಾರಿಗಳಿಂದ ನೋಟಿಸ್‌ ಜಾರಿಯಾಗಿದೆ.

ಗಲಭೆ ನಂತರ ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತ ಹೋರಾಟಗಾರಿಗೆ ಪೊಲೀಸರು ಶಾಕ್‌ ನೀಡಿದ್ದು, ರೈತರು ಮತ್ತೆ ಹೋರಾಟದ ಹಾದಿ ಹಿಡಿಯುವಂತೆ ಮಾಡಿದೆ.

ಮಹದಾಯಿ ನ್ಯಾಯಾಧೀಕರಣದಲ್ಲಿ ತೀರ್ಪು ನೀಡಿದರೂ ಉಭಯ ಸರಕಾರಗಳು ನೀರು ಹರಿಸಲು ಯಾವುದೇ ಪ್ರಕ್ರಿಯೆ ಆರಂಭಿಸಿಲ್ಲ. ಕೂಡಲೇ ಸರಕಾರಗಳು ಎಚ್ಚೆತ್ತುಕೊಳ್ಳದಿದ್ದರೆ ಶಾಸಕರ, ಸಂಸದರ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ.
.ಸುಬಾಸಚಂದ್ರಗೌಡ
ಪಾಟೀಲ, ರೈತ ಮುಖಂಡ

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.