ನವಲಗುಂದ ಬಂದ್ ಯಶಸ್ವಿ
Team Udayavani, Jun 13, 2017, 4:37 PM IST
ನವಲಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಮತ್ತು ರೈತರ ಸಾಲಮನ್ನಾ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಯಿತು. ತಾಲೂಕಿನ ಅಳಗವಾಡಿ, ಯಮನೂರ, ಕುರಹಟ್ಟಿ, ಬೆಳವಟಿಗಿ, ಗೊಬ್ಬರಗುಂಪಿ ಗ್ರಾಮದ ರೈತರು ಬಂದ್‌ನಲ್ಲಿ ಪಾಲ್ಗೊಂಡಿದ್ದರು.
ವರ್ತಕರು ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಶಾಲಾ-ಕಾಲೇಜು, ಸರಕಾರಿ ಕಚೇರಿಗಳು, ಬ್ಯಾಂಕ್‌ಗಳು, ಬಸ್ ಸಂಚಾರ ಮತ್ತು ಖಾಸಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ರಾಷ್ಟ್ರೀಯ ಹೆದ್ದಾರಿ, ಪಟ್ಟಣದ ಗಾಂಧಿ ಮಾರುಕಟ್ಟೆ ಬಿಕೋ ಎನ್ನುತ್ತಿದ್ದವು.
ಸಾರ್ವಜನಿಕರು ಹೊರಬರಲು ಹಿಂದೇಟು ಹಾಕುತ್ತಿರುವುದು ಸಾಮಾನ್ಯವಾಗಿತ್ತು. ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ 144 ಕಲಂ ಜಾರಿ ಮತ್ತು ತಾಲೂಕಿನಾದ್ಯಂತ ಮದ್ಯಪಾನ ನಿಷೇಧ ಹೇರಲಾಗಿತ್ತು. ಆದರೆ ಸರಕಾರದ ಆದೇಶ ಧಿಕ್ಕರಿಸಿದ ರೈತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ,ಉಭಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾತಿನ ಚಕಮಕಿ: ಪೊಲೀಸ್ ಇಲಾಖೆ ವಾಹನದಲ್ಲಿ ನಿನ್ನೆ ರಾತ್ರಿ 144 ಕಲಂ ಜಾರಿ ಕುರಿತು ಧ್ವನಿವರ್ಧಕ ಮೂಲಕ ತಿಳಿಸಿದ್ದಲ್ಲದೇ ಬಿಗಿ ಪೊಲೀಸ್ ಬಂದೋಬಸ್ತ್ಗಾಗಿ ಹೆಚ್ಚು ಪೊಲೀಸರನ್ನು ಕರೆ ತಂದಿದ್ದರಿಂದ ಆಕ್ರೋಶಗೊಂಡ ಪûಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ ಹಾಗೂ ಸಿಪಿಐ ಬಿ.ಪಿ ದಿವಾಕರ ಅವರ ನಡುವೆ ಮಾತಿನ ಚಕಮಕಿ ನಡೆಯಿತು.
ತಡಹಾಳ ಹಿರೇಮಠದ ಶಿವಯೋಗಿ ಸ್ವಾಮೀಜಿ, ಅಣ್ಣಪ್ಪ ಬಾಗಿ, ರವಿಗೌಡ ಪಾಟೀಲ, ಮಲ್ಲೇಶ ಉಪ್ಪಾರ, ಐ.ಡಿ. ಬಾಗವಾನ, ವಿವಿಧ ಗ್ರಾಮದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ
KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ
BJP ; ವಿಜಯೇಂದ್ರ ಬಣದಿಂದ ಚಾಮುಂಡೇಶ್ವರಿ ದರ್ಶನ: ದುಷ್ಟ ಸಂಹಾರವಾಗಲೇಬೇಕು!
Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
Bantwal: 5ನೇ ಮದುವೆಗೆ ಸಿದ್ಧತೆ.. 4ನೇ ಪತ್ನಿಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.