ನೀರಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ
Team Udayavani, Aug 25, 2020, 3:30 PM IST
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭಾದಿಂದ ಕುಡಿಯುವ ನೀರು ಸರಬರಾಜು ಮಾಡಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲಾಗಿದೆ. ಮುಖ್ಯಮಂತ್ರಿಗಳಿಂದ ಒಪ್ಪಿಗೆ ಪಡೆದು ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ನೀರಸಾಗರ ಜಲಾಶಯಕ್ಕೆ ಸೋಮವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡರೆ ಧುಮ್ಮವಾಡ ಕೆರೆಯ ಸುತ್ತಮುತ್ತಲಿನ 12 ಗ್ರಾಮಗಳು ಸೇರಿದಂತೆ ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಕುಡಿಯುವ ನೀರಿನಸಮಸ್ಯೆ ಬಗೆಹರಿಯಲಿದೆ. ಮನೆ ಮನೆಗೆ ಪ್ರತಿದಿನ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದರು.
ನೀರಸಾಗರ ಜಲಾಶಯ ಕಳೆದ 4-5 ವರ್ಷಗಳ ಹಿಂದೆ ಬತ್ತಿ ಹೋಗಿತ್ತು. ಕಳೆದ ವರ್ಷ ಹೆಚ್ಚಿನ ಮಳೆಯಿಂದಾಗಿ ಜಲಾಶಯ ಭರ್ತಿಯಾಗಿತ್ತು. ಈ ವರ್ಷವೂ ತುಂಬಿದೆ. ಹೀಗಾಗಿ ಹು-ಧಾಕ್ಕೆ ನೀರು ಪೂರೈಕೆಗೆ ಹೆಚ್ಚಿನ ಶಕ್ತಿ ನೀಡಿದೆ. ಹು-ಧಾಗೆ ಪ್ರತಿದಿನ 200 ಎಂಎಲ್‌ಡಿ ನೀರು ಬೇಕು. 160 ಎಂಎಲ್‌ಡಿ ಮಲಪ್ರಭಾದಿಂದ ಹಾಗೂ 40 ಎಂಎಲ್‌ಡಿ ನೀರಸಾಗರದಿಂದ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಈ ವರ್ಷ 500ಕೋಟಿ ರೂ.ದಷ್ಟು ಬೆಳೆ ನಷ್ಟವಾಗಿದೆ. ಸಮೀಕ್ಷೆ ಮಾಡಲಾಗುತ್ತಿದೆ. ಮಂಗಳವಾರ ಮುಖ್ಯಮಂತ್ರಿಯವರು ಬೆಳಗಾವಿಗೆ ಆಗಮಿಸಲಿದ್ದಾರೆ. ಆಗ ವರದಿ ಕೊಟ್ಟು ನಷ್ಟ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.
ಕೆಆರ್‌ಎಸ್ ಬೃಂದಾವನ ಮಾದರಿ ಅಭಿವೃದ್ಧಿ: ಧುಮ್ಮವಾಡ ಗ್ರಾಮದ ನೀರಸಾಗರ ಜಲಾಶಯ ಆಸುಪಾಸಿನಲ್ಲಿ ಸುಮಾರು 300 ಎಕರೆ ಸರಕಾರಿ ಜಾಗವಿದ್ದು, ಇದನ್ನು ಮೈಸೂರಿನ ಕೆಆರ್ ಎಸ್ ಬೃಂದಾವನ ಗಾರ್ಡನ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ ಆಕರ್ಷಣೀಯ ಪ್ರವಾಸಿ ತಾಣ ಮಾಡಲಾಗುವುದು. ಅದಕ್ಕಾಗಿ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯೋಜನೆ ಸಿದ್ಧಪಡಿಸಿದರೆ ಅದನ್ನು ಇತರೆ ಅನುದಾನದಡಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಧ್ಯಕ್ಷ ರಾಜೂಗೌಡ, ವಿಧಾನಸಭೆ ಸದಸ್ಯರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಪ್ರೊ|ಎಸ್.ವಿ.ಸಂಕನೂರ, ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ನಿರ್ದೇಶಕಿ ದೀಪಾ ಕುಡಚಿ,ಕಲಘಟಗಿ ತಾಪಂ ಅಧ್ಯಕ್ಷೆ ಸುನಿತಾ ಮ್ಯಾಗಿನಮನಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶಇಟ್ನಾಳ, ಜಲಮಂಡಳಿ ಕಾರ್ಯಪಾಲಕ ಅಭಿಯಂತ ಪಿ.ಸುರೇಶ, ಚಾಮರಾಜಗೌಡ, ಸಹಾಯಕ ಅಭಿಯಂತ ಎಂ.ಎಫ್. ನೇಗಿನಹಾಳ, ವಸಂತ ಗುಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.