ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
Team Udayavani, Apr 19, 2024, 11:56 PM IST
ಹುಬ್ಬಳ್ಳಿ: ನೇಹಾ ಹಿರೇಮಠ ಅಂತ್ಯಸಂಸ್ಕಾರ ಮಂಟೂರ ರಸ್ತೆಯ ಕಲಬುರಗಿ ರುದ್ರಭೂಮಿಯಲ್ಲಿ ಶುಕ್ರವಾರ ನೆರವೇರಿತು. ಅತ್ತ ಆರೋಪಿಯ ಊರು ಬೆಳಗಾವಿ ಜಿಲ್ಲೆ ಮುನವಳ್ಳಿಯಲ್ಲಿ ಮೂರು ದಿನಗಳ ಬಂದ್‌ಗೆ ಕರೆ ನೀಡಲಾಗಿದೆ.
ಕಿಮ್ಸ್ ಶವಾಗಾರದಲ್ಲಿ ಇರಿಸಲಾಗಿದ್ದ ಪಾರ್ಥಿವ ಶರೀರವನ್ನು ಬೆಳಗ್ಗೆ ಮರಣೋತ್ತರ ಪರೀಕ್ಷೆಗೊಳಪಡಿಸಿದ ಬಳಿಕ ಮೃತರ ನಿವಾಸಕ್ಕೆ ತಂದಾಗ ಕುಟುಂಬಸ್ಥರ, ಬಂಧುಗಳ ಹಾಗೂ ಸ್ಥಳೀಯರ ಆಕ್ರಂದನ ಹೇಳತೀರದಾಗಿತ್ತು. ನೇಹಾಳ ನಿವಾಸ ಹಾಗೂ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದ್ದ ಮಾರ್ಗದುದ್ದಕ್ಕೂ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಹಂತಕನಿಗೆ ಗಲ್ಲು ಶಿಕ್ಷೆಯಾಗಬೇಕು, ಆರೋಪಿಯನ್ನು ಎನ್‌ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.
14 ದಿನಗಳ ನ್ಯಾಯಾಂಗ ಕಸ್ಟಡಿ
ಶಿಕ್ಷಕ ದಂಪತಿಯ ಪುತ್ರನಾಗಿರುವ ಫಯಾಜ್ ಬಾವಾಸಾಬ್ ಖೊಂಡುನಾಯ್ಕಗೆ 14 ದಿನಗಳ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದ್ದು, ಧಾರವಾಡದ ಜೈಲಿಗೆ ಒಯ್ಯಲಾಗಿದೆ. ಕೊಲೆಯ ಹಿಂದೆ ಕೇವಲ ಫಯಾಜ್ ಒಬ್ಬನೇ ಇರಲಿ
ಕ್ಕಿಲ್ಲ ಎಂದು ನೇಹಾಳ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದ ರಿಂದ, ಈತನಿಗೆ ಯಾರಾದರೂ ಸಹಾಯ ಮಾಡಿದ್ದಾರಾ ಎಂಬುದು ಸಹಿತ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಂತಕನು ನೇಹಾಳಿಗೆ ಒಟ್ಟು 10 ಬಾರಿ ಇರಿದಿದ್ದಾನೆ.
ಮುನವಳ್ಳಿಯಲ್ಲಿ ಸ್ವಯಂಪ್ರೇರಿತ ಬಂದ್
ಅತ್ತ ಹಂತಕನ ಊರು ಮುನವಳ್ಳಿಯಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟು ಗಳನ್ನು ಮುಚ್ಚಿದರು. ಖಾಸಗಿ ವಾಹನಗಳು, ಬಸ್ ಸಂಚಾರ ಇರಲಿಲ್ಲ. ವಿವಿಧ ಸಂಘಟನೆಗಳಿಂದ ಮುನವಳ್ಳಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ ಪ್ರತಿಭಟನಕಾರರು, ಮೂರು ದಿನಗಳ ಕಾಲ ಬಂದ್ ಮಾಡಿ ಶೋಕಾಚರಣೆಗೆ ಕರೆ ನೀಡಿದೆ.
ಮಗನಿಗೆ ಅತ್ಯಂತ ಕಠಿನ ಶಿಕ್ಷೆ ಆಗಲಿ: ಹಂತಕನ ತಂದೆ
ಬೆಳಗಾವಿ: ನೇಹಾ ಹಿರೇಮಠಳನ್ನು ಕೊಂದ ನನ್ನ ಮಗನಿಗೆ ಅತ್ಯಂತ ಕಠಿನ ಶಿಕ್ಷೆ ಆಗಲಿ. ಆ ಶಿಕ್ಷೆಯನ್ನು ನೋಡಿ ಮುಂದೆ ಯಾರೂ ಇಂಥ ಕ್ರೂರ ಕೆಲಸಕ್ಕೆ ಕೈಹಾಕಬಾರದು ಎಂದು ಕೊಲೆ ಪ್ರಕರಣದ ಆರೋಪಿ ಫಯಾಜ್‌ನ ತಂದೆ, ಶಿಕ್ಷಕ ಬಾವಾಸಾಹೇಬ(ಭವಾನಿ) ಖೊಂಡುನಾಯ್ಕ ಹೇಳಿದರು.
ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾನೂನು ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ. ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ದಯವಿಟ್ಟು ನನ್ನನ್ನು ಕ್ಷಮಿಸಬೇಕು ಎಂದು ಮನವಿ ಮಾಡಿದರು.
ನಾವೆಲ್ಲರೂ ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು. ಯಾರಿಗಾದರೂ ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಿರುವವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ ಎಂದರು.
ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡಬೇಕು. ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ನೇಹಾ ನನ್ನ ಮಗಳಿದ್ದ ಹಾಗೆ, ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದರು.
ನೇಹಾ ಹಾಗೂ ಫಯಾಜ್ ರೀಲ್ಸ್ ವೈರಲ್ ಆಗಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಅವರಿಬ್ಬರ ಮಧ್ಯೆ ಪ್ರೀತಿ ಇತ್ತು. ಈ ನಿಮ್ಮ ಪ್ರೀತಿಗೆ “ಲವ್ ಜಿಹಾದ್’ ಬಣ್ಣ ಕಟ್ಟಿ ಟಾರ್ಗೆಟ್ ಮಾಡುತ್ತಾರೆ ಎಂದು ಮಗನಿಗೆ ಬುದ್ಧಿ ಹೇಳಿದ್ದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.