ನಿರ್ಭಯ ವಾಹನಗಳಿಗೆ ಎಸ್‌ಪಿ ಕೃಷ್ಣ ಕಾಂತ ಚಾಲನೆ

112 ಸಂಖ್ಯೆಗೆ ಕರೆ ಮಾಡಿದರೆ ಆಗಮಿಸಿ ನೆರವು ನೀಡಲಿದ್ದಾರೆ ಪೊಲೀಸ್‌ ಸಿಬ್ಬಂದಿ

Team Udayavani, Dec 3, 2020, 1:38 PM IST

ನಿರ್ಭಯ ವಾಹನಗಳಿಗೆ ಎಸ್‌ಪಿ ಕೃಷ್ಣ ಕಾಂತ ಚಾಲನೆ

ಧಾರವಾಡ: ಒಂದೇ ಭಾರತ, ಒಂದೇ ತುರ್ತು ಕರೆ ಅಡಿಯಲ್ಲಿ ಉಚಿತ ದೂರವಾಣಿ ಸಂಖ್ಯೆ112 ಸಹಾಯವಾಣಿಗೆ ಹಾಗೂ ನಿರ್ಭಯವಾಹನಗಳಿಗೆ ನಗರದ ಎಸ್‌ಪಿ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಯಿತು.

ಚಾಲನೆ ನೀಡಿದ ಎಸ್‌ಪಿ ಪಿ.ಕೃಷ್ಣಕಾಂತ ಮಾತನಾಡಿ, ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ನಿರ್ಭಯ ಯೋಜನೆಯಡಿ ಜಿಲ್ಲೆಯ ಪ್ರತಿ ಪೊಲೀಸ್‌ ಠಾಣೆಗೆ ಒಂದರಂತೆ ಒಂಬತ್ತು ನಿರ್ಭಯ ದ್ವಿ-ಚಕ್ರ ವಾಹನಗಳನ್ನು ಸರಕಾರದಿಂದ ನೀಡಲಾಗಿದೆ. ತುರ್ತು ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡಿದರೆ ಸಮೀಪದಲ್ಲಿರುವ ತುರ್ತು ಸ್ಪಂದನವಾಹನದಲ್ಲಿ ಪೊಲೀಸ್‌ ಸಿಬ್ಬಂದಿ ಆಗಮಿಸಿ ಅಗತ್ಯ ನೆರವು ನೀಡಲಿದ್ದಾರೆ ಎಂದರು.

ಜಿಲ್ಲೆಯ ಎಲ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ತುರ್ತು ಸಂದರ್ಭಗಳಲ್ಲಿ ಹಾಗೂ ವಿಶೇಷವಾಗಿ ಮಹಿಳೆಯರ ರಕ್ಷಣೆ ಮತ್ತು ಅವರ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ ನೀಡಲು ಜಿಲ್ಲಾ ಪೊಲೀಸ್‌ಘಟಕದಿಂದ ಪೊಲೀಸ್‌ ಠಾಣೆಗಳಿಗೆ ನಿರ್ಭಯ ವಾಹನಗಳನ್ನು ಪೂರೈಸಲಾಗಿದೆ. ಅಪಘಾತ,ಗಲಭೆ ಸೇರಿದಂತೆ ಯಾವುದೇ ದುರ್ಘ‌ಟನೆ ಜರುಗಿದಾಗ 112 ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಅಗತ್ಯ ನೆರವು, ಪ್ರಾಥಮಿಕ ಚಿಕಿತ್ಸೆ, ರಕ್ಷಣೆ ನೀಡಲುಅನುಕೂಲವಾಗುವ ಆಧುನಿಕ ಸೌಲಭ್ಯ ಹೊಂದಿರುವ ನಾಲ್ಕು ಚಕ್ರದ (ಇನ್ನೋವಾ ಕ್ರಿಸ್ಟಾ) ತುರ್ತು ಸ್ಪಂದನ ವಾಹನಗಳನ್ನು ಸಾರ್ವಜನಿಕ ಸೇವೆಗೆ ಸಿದ್ಧಗೊಳಿಸಲಾಗಿದೆ. ಸಹಾಯವಾಣಿಮೂಲಕ ಇದರಲ್ಲಿ ದಾಖಲಾಗುವ ಕರೆಗಳಿಗ ಅನುಗುಣವಾಗಿ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಒಂದೇ ಭಾರತ ಒಂದೇ ತುರ್ತು ಕರೆ ಅಡಿಯಲ್ಲಿ 112 ಸಹಾಯವಾಣಿ ರೂಪಿಸಿದ್ದು,ಇದಕ್ಕೆ ಜಿಲ್ಲೆಯಲ್ಲೂ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್‌, ಅಗ್ನಿ, ವಿಪತ್ತು, ಮಹಿಳಾ ಸಹಾಯ ಇನ್ನಿತರೆ ಯಾವುದೇ ತುರ್ತು ಪರಿಸ್ಥಿತಿಯಲ್ಲಿ 24*7 ತುರ್ತು ಸಹಾಯವಾಣಿ 100 ಸಂಖ್ಯೆಯ ಬದಲಾಗಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತ್ವರಿತಪರಿಹಾರ ಪಡೆಯಬೇಕು. ಸಮಸ್ಯೆಗಳನ್ನಾಧರಿಸಿಅದನ್ನು ಸಂಬಂಧಿ ಸಿದ ಇಲಾಖೆಗೆ ವರ್ಗಾಯಿಸಿ ಅಲ್ಲಿಂದ ಅಗತ್ಯವಿರುವ ಸಹಾಯ, ಸಮಸ್ಯೆಗೆ ಪರಿಹಾರ ನೀಡಲಾಗುತ್ತದೆ ಎಂದರು.

ಧಾರವಾಡ ಗ್ರಾಮೀಣ ಡಿವೈಎಸ್‌ಪಿ ಎಂ.ಬಿ. ಸಂಕದ, ಡಿಸಿಆರ್‌ಬಿಯ ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಶಿವಾನಂದ ಸೇರಿದಂತೆ ವಿವಿಧ ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.