ಧಾರವಾಡ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ
Team Udayavani, Jun 30, 2020, 6:31 PM IST
ಧಾರವಾಡ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಿತೇಶ್ ಕಲ್ಲನಗೌಡ ಪಾಟೀಲ ಅವರು ಇಂದು ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಅಧಿಕಾರ ಸ್ವೀಕರಿಸಿದರು.
ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್‍ಎಸ್‍ಎಲ್‍ಸಿ ವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್‍ಆಯ್‍ಟಿ ಅಲಹಾಬಾದ್‍ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು. ಕೆಲಕಾಲ ಸಾಫ್ಟವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ ಬಳಿಕ 2012ರಲ್ಲಿ ಯುಪಿಎಸ್‍ಸಿ ಯ ನಾಗರೀಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು.
ಪ್ರೊಬೇಷನರಿ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಹಶೀಲ್ದಾರರಾಗಿ ನಂತರ ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವಾಣಿಜ್ಯ ತೆರಿಗೆ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯನಿರ್ವಹಿಸಿ ಇದೀಗ ಧಾರವಾಡ ಜಿಲ್ಲಾಧಿಕಾರಿ ಹುದ್ದೆ ಸ್ವೀಕರಿಸಿದ್ದಾರೆ.
ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಸರ್ವಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿಯಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.