Laxman savadi ಮೇಲೆ ಯಾವುದೇ ಸಂಶಯ- ಅಪನಂಬಿಕೆಯಿಲ್ಲ: ಸಚಿವ ಎಚ್.ಕೆ ಪಾಟೀಲ್
Team Udayavani, Jan 31, 2024, 1:26 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ಸು ಹೋಗಬಾರದಿತ್ತು ಎನ್ನುವುದಷ್ಟೇ ನಮ್ಮ ನೋವು. ಆದರೆ ಲಕ್ಷ್ಮಣ ಸವದಿ ಅವರು ಹೇಳಿದಂತೆ ನಡೆದುಕೊಳ್ಳುವವರು. ಅವರ ಮೇಲೆ ಅಪನಂಬಿಕೆ ಹಾಗೂ ಸಂಶಯವಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ತಾವು ಕಾಂಗ್ರೆಸಿನಲ್ಲಿಯೇ ಇರುತ್ತೇನೆ. ಯಾವುದೇ ಕಾರಣಕ್ಕೂ ಬದಲಾವಣೆಯಾಗಲ್ಲ ಎಂದು ಹೇಳಿದ್ದಾರೆ. ಅವರ ಮತ್ತು ನನ್ನ ಒಡನಾಟ ಬಹಳಷ್ಟು ಹಳೆಯದು. ಅವರು ಏನು ಹೇಳುತ್ತಾರೆ ಹಾಗೇ ನಡೆದುಕೊಳ್ಳುತ್ತಾರೆ. ಹೀಗಾಗಿ ಅವರ ಮೇಲೆ ಯಾವುದೇ ಸಂಶಯ ಅಥವಾ ಅಪನಂಬಿಕೆಯಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತತ್ವ ಸಿದ್ದಾಂತಗಳಿಗೆ ತಿಲಾಂಜಲಿ ನೀಡಲು ಎಳ್ಳಷ್ಟು ಹಿಂದೆ ಮುಂದೆ ನೋಡುವುದಿಲ್ಲ. ಬಿಜೆಪಿಯವರು ಹತಾಷೆಗೊಂಡು ಭಾವನಾತ್ಮಕ ವಿಚಾರಗಳ ಮೂಲಕ ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಮಂಡ್ಯ ಧ್ವಜ ವಿಚಾರದಲ್ಲಿ ಸರಕಾರ ಯಾವುದೇ ವಿವಾದ ಸೃಷ್ಟಿಸಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿ ನಾಯಕರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.