![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 7, 2019, 10:38 AM IST
ಹುಬ್ಬಳ್ಳಿ: ಭ್ರಷ್ಟಾಚಾರಿಗಳು, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ರಕ್ಷಣೆ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ ಮಾಜಿ ಸದಸ್ಯಯೋಗೀಶ್ ಗೌಡ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ತಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಲು ಈ ಪ್ರಕರಣ ಸಿಬಿಐಗೆ ನೀಡಲಾಗಿದೆ ಎಂದು ಹೇಳಿದರು. ಯಾವುದೇ ಸಂದರ್ಭದಲ್ಲಿ ಭ್ರಷ್ಟಾಚಾರಿಗಳು, ಕೊಲೆಗಡುಕರು, ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ ಎಂದರು.
ಇದೇ ವೇಳೆಯಲ್ಲಿ ನಾಳೆ ಮತ್ತು ನಾಡಿದ್ದು ಬೆಳಗಾವಿ ಸುವರ್ಣ ಸೌಧದಲ್ಲಿ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿ ಅಧಿಕಾರಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸ್ಥಾಯಿ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಇಂದು ಬೆಳಗಾವಿ, ಚಿಕ್ಕೋಡಿ ವಿಭಾಗದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ನೆರೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಚಿವರು, ಅಧಿಕಾರಗಳನ್ನು ಕಳಿಸಿ ಸಮೀಕ್ಷೆ ಮಾಡಿಸಿದ್ದೇನೆ. ಆದಷ್ಟು ಬೇಗ ಕೇಂದ್ರ ಸರ್ಕಾರ ನೆರೆ ಪರಿಹಾರ ಹಣ ಬಿಡುಗಡೆ ಮಾಡುತ್ತದೆ ಎಂಬ ನಂಬಿಕೆ ಇದೆ. ನೆರೆ ಹಾವಳಿಗೆ ಸಂಬಂಧಿಸಿ ಈಗ ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನೆರೆ ಪರಿಹಾರ ಶೇ. 99 ಭಾಗ ವಿತರಣೆಯಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.