17ರ ವರೆಗೂ ಪ್ರಯಾಣಿಕರ ರೈಲು ಸಂಚಾರ ಮಾಡೋದಿಲ್ಲ
Team Udayavani, May 3, 2020, 11:52 AM IST
ಹುಬ್ಬಳ್ಳಿ: ಲಾಕ್ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ ಮೇ 17ರ ವರೆಗೆ ಪ್ರಯಾಣಿಕರ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ದೇಶಾದ್ಯಂತ ಲಾಕ್ ಡೌನ್ ಮುಂದುವರಿಸಿರುವ ಕಾರಣ ರೈಲ್ವೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ. ಎಂದಿನಂತೆ ಸರಕು ಸಾಗಾಣಿಕೆ ರೈಲುಗಳ ಸಂಚಾರ ಸೇವೆ ಮುಂದುವರಿಯಲಿವೆ. ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಅಲ್ಲಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಪ್ರವಾಸಿಗರು, ಯಾತ್ರಿಕರು, ವಿದ್ಯಾರ್ಥಿಗಳ ಸಾಗಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮನವಿ ಮೇರೆಗೆ ಪ್ರಯಾಣಿಕ ರೈಲುಗಳು ಸಂಚರಿಸಲಿವೆ. ಅಂತಾರಾಜ್ಯ ಸಂಚಾರ ಮಾಡುವ ಪ್ರಯಾಣಿಕರು ಆಯಾ ರಾಜ್ಯ ಸರಕಾರವನ್ನು ಸಂಪರ್ಕಿಸಿ ಅನುಮತಿ ಪಡೆಯಬೇಕಾಗಿದೆ. ಹೀಗಾಗಿ ಯಾರಿಗೂ ಪ್ರಯಾಣದ ಟಿಕೆಟ್ ವಿತರಣೆ ಮಾಡುವುದಿಲ್ಲ. ಪ್ರಯಾಣಿಕರು ಯಾವುದೇ ಕಾರಣಕ್ಕೂ ರೈಲ್ವೆ ನಿಲ್ದಾಣಕ್ಕೆ ಬರುವ ಅಗತ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.