ವಾಕರಸಾ ಹುಬ್ಬಳ್ಳಿ ಗ್ರಾಮೀಣ ವಿಭಾಗಕ್ಕೆ 31 ಕೋಟಿ ರೂ. ನಷ್ಟ
Team Udayavani, Jul 5, 2020, 11:30 AM IST
ಹುಬ್ಬಳ್ಳಿ: ಪ್ರಯಾಣಿಕರು ಬಸ್‌ಗಳಲ್ಲಿ ಸಂಚಾರ ಮಾಡಲು ಹಿಂದೇಟು ಹಾಕುತ್ತಿರುವ ಕಾರಣದಿಂದ ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮೀಣ ವಿಭಾಗಕ್ಕೆ ಮೇ ಮತ್ತು ಜೂನ್ ತಿಂಗಳು ಸೇರಿ 31 ಕೋಟಿ ರೂ. ಆದಾಯ ನಷ್ಟವಾಗಿದೆ.
ಲಾಕ್‌ಡೌನ್ ಭಾಗಶಃ ತೆರವುಗೊಳಿಸಿದ ನಂತರ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರಕ್ಕೆ ಸರಕಾರ ಅವಕಾಶ ನೀಡಿತ್ತು. ಹೀಗಾಗಿ ಮೇ 19ರಿಂದ ಬಸ್‌ಗಳ ಕಾರ್ಯಾಚರಣೆ ಆರಂಭವಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಜನರು ಬಸ್ ಸಂಚಾರಕ್ಕೆ ಮನಸ್ಸು ಮಾಡುತ್ತಿಲ್ಲ. ಹೀಗಾಗಿ ಮೇ ತಿಂಗಳಲ್ಲಿ 17 ಕೋಟಿ ರೂ. ಹಾಗೂ ಜೂನ್ ತಿಂಗಳಲ್ಲಿ 14 ಕೋಟಿ ರೂ. ಆದಾಯ ನಷ್ಟವಾಗಿದೆ.ಹುಬ್ಬಳ್ಳಿ ಗ್ರಾಮೀಣ ವಿಭಾಗದ ನಾಲ್ಕು ಘಟಕಗಳಲ್ಲಿ 419 ಅನುಸೂಚಿಗಳಲ್ಲಿ ಪ್ರತಿದಿನ 1.90 ಲಕ್ಷ ಕಿಲೊಮೀಟರ್‌ಗಳಷ್ಟು ಬಸ್‌ಗಳು ಕ್ರಮಿಸುತ್ತಿದ್ದವು. ಇದರಿಂದ ಪ್ರತಿನಿತ್ಯ ಬೊಕ್ಕಸಕ್ಕೆ ನಿತ್ಯ 50 ರಿಂದ 55 ಲಕ್ಷ ರೂ. ಸಾರಿಗೆ ಆದಾಯ ಸಂಗ್ರಹಣೆ ಆಗುತ್ತಿತ್ತು. ಬಸ್‌ಗಳಿಗೆ ಅನುಮತಿ ನೀಡಿದ ನಂತರ ಸರಕಾರದ ಮಾರ್ಗಸೂಚಿಗಳ ಪ್ರಕಾರ ಸುರಕ್ಷಿತ ಕ್ರಮಗಳನ್ನು ಕ್ರಮಗೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಮೇ ತಿಂಗಳಾಂತ್ಯಕ್ಕೆ 59 ಲಕ್ಷ ರೂ. ಮಾತ್ರ ಆದಾಯ ಬಂದಿತ್ತು. ಪ್ರಯಾಣಿಕರ ಕೊರತೆಯಿಂದಾಗಿ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಸಾಧ್ಯವಾಗಲಿಲ್ಲ. ನಿತ್ಯ 22 ರಿಂದ 23 ಸಾವಿರ ಜನರು ಮಾತ್ರ ಪ್ರಯಾಣಿಸುತ್ತಿದ್ದು 11ರಿಂದ 13 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರತಿದಿನ 1.30ರಿಂದ 1.45 ಲಕ್ಷ ಜನರು ಪ್ರಯಾಣಿಸಿದ್ದು 50 ರಿಂದ 55 ಲಕ್ಷ ರೂ .ಸಾರಿಗೆ ಆದಾಯ ಸಂಗ್ರಹವಾಗಿತ್ತು. ಹೀಗಾಗಿ ಆದಾಯ ಸಂಗ್ರಹಣೆಯಲ್ಲಿ ಶೇ.80 ಖೋತಾ ಆಗಿದ್ದು, ಜೂನ್ ತಿಂಗಳಾಂತ್ಯಕ್ಕೆ 3.55 ಕೋಟಿ ರೂ. ಮಾತ್ರ ಸಂಗ್ರಹವಾಗಿದ್ದು 14 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.