ಹೊಸ ಬಸ್ ನಿಲ್ದಾಣಕ್ಕೆವಾಯವ್ಯ ಸಾರಿಗೆ ಅಧ್ಯಕ್ಷರ ಭೇಟಿ
Team Udayavani, May 12, 2020, 10:32 AM IST
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ ಸೋಮವಾರ ಇಲ್ಲಿನ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ನಗರದಲ್ಲಿ ಸಿಲುಕಿಕೊಂಡಿರುವ ವಲಿಸಗರು ತಮ್ಮ ತವರು ರಾಜ್ಯಗಳಿಗೆ ತೆರಳಲು ಸಂಸ್ಥೆಯಿಂದ ಆರಂಭಿಸಿರುವ ಸಹಾಯವಾಣಿ ಹಾಗೂ ಬಸ್ ಗಳ ಕಾರ್ಯಾಚರಣೆ ಪರಿಶೀಲಿಸಿದರು.
ಕರಾರು ಒಪ್ಪಂದದ ಎರಡು ಬಸ್ಸುಗಳಲ್ಲಿ 47 ವಲಸಿಗರನ್ನು ಸೋಮವಾರ ರಾಜಸ್ಥಾನಕ್ಕೆ ಕಳಿಸಲು ಕ್ರಮ ಕೈಗೊಳ್ಳಲಾಗಿದೆ. ಸಾವಿರಾರು ಕಿ.ಮೀ ಕ್ರಮಿಸಬೇಕಾಗಿದ್ದರಿಂದ ಹೊಸ ಬಸ್ಸುಗಳೊಂದಿಗೆ ಮಾರ್ಗದ ಮಾಹಿತಿ ಇರುವ ಹಾಗೂ ಹಿಂದಿ ಭಾಷೆ ಬಲ್ಲ ಇಬ್ಬರು ಅನುಭವಿ ಚಾಲಕರನ್ನು ನಿಯೋಜಿಸಲಾಗಿದೆ. ಈ ವರೆಗೆ ಹುಬ್ಬಳ್ಳಿಯಿಂದ ಎಂಟು ಬಸ್ಸುಗಳಲ್ಲಿ ಒಟ್ಟು 192 ಕಾರ್ಮಿಕರು ರಾಜಸ್ಥಾನದ ತಮ್ಮ ಮೂಲ ಸ್ಥಳಗಳಿಗೆ ತೆರಳಿದಂತಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್, ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ ಮಾಹಿತಿ ನೀಡಿದರು.
ಅಧ್ಯಕ್ಷ ವಿ.ಎಸ್. ಪಾಟೀಲ ಮಾತನಾಡಿ, ಕರ್ತವ್ಯದ ಸಮಯದಲ್ಲಿ ಸಿಬ್ಬಂದಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಬಸ್ಸುಗಳ ಶುಚಿತ್ವ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿಗಾವಹಿಸಬೇಕು. ಎಲ್ಲ ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಕಡ್ಡಾಯವಾಗಿ ಮಾಸ್ಕ್, ಕೈ ಗವಸು, ಸ್ಯಾನಿಟೈಸರ್ ಬಳಸಲು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷತೆಯಿಂದ ಪ್ರಯಾಣ ಮಾಡುವಂತೆ ಅಗತ್ಯ ತಿಳಿವಳಿಕೆ ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಾರ್ಜಜನಿಕ ಸಾರಿಗೆ ಪುನರಾರಂಭಿಸಲು ಸರ್ಕಾರದಿಂದ ಆದೇಶ ಬಂದ ಕೂಡಲೇ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಬಸ್ಸುಗಳ ಸಂಚಾರ ಪುನರಾರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.