ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ : ಹುಬ್ಬಳ್ಳಿಯ ಮೂರು ಆಸ್ಪತ್ರೆಗಳಿಗೆ ನೋಟಿಸ್
Team Udayavani, Apr 28, 2021, 3:58 PM IST
ಧಾರವಾಡ: ಸರ್ಕಾರದ ಆದೇಶದಂತೆ ಶೇ.50 ಹಾಸಿಗೆ ಮೀಸಲಿಡದ, ಸಾರ್ವಜನಿಕರಿಗೆ ಎದ್ದು ಕಾಣುವಂತೆ ದರಪಟ್ಟಿ ಪ್ರಕಟಿಸದ, ಕೋವಿಡ್-19 ಸೋಂಕಿತರ ಚಿಕಿತ್ಸೆಯ ಬಗ್ಗೆ ತಪ್ಪು ಮಾಹಿತಿ ನೀಡಿದ ಹುಬ್ಬಳ್ಳಿ ಮೂರು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಹುಬ್ಬಳ್ಳಿಯ ಶಕುಂತಲಾ ಮೆಮೋರಿಯಲ್ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್, ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಹಾಗೂ ತತ್ವದರ್ಶ ಹಾಸ್ಪಿಟಲ್ ಎ ಯುನಿಟ್ ಆಫ್ ತತ್ವದರ್ಶ ಹೆಲ್ತ್ ಕೇರ್ ಸಲ್ಯೂಷನ್ಸ್ ಆಸ್ಪತ್ರೆಗಳಿಗೆ ಸಾಂಕ್ರಾಮಿಕ ರೋಗ ಕಾಯ್ದೆ-1987 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ-2005 ರನ್ವಯ 24 ಗಂಟೆಯಲ್ಲಿ ಉತ್ತರ ನೀಡುವಂತೆ ತಿಳಿಸಿ, ಆರೋಗ್ಯ ಇಲಾಖೆಯಿಂದ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಈ ಮೂರೂ ಆಸ್ಪತ್ರೆಗಳಲ್ಲಿ ಸರ್ಕಾರದ ನಿರ್ದೇಶನದಂತೆ ಕೋವಿಡ್ ಚಿಕಿತ್ಸೆಗಾಗಿ ಸರ್ಕಾರ ನಿರ್ಧರಿಸಿರುವ ದರಪಟ್ಟಿಯನ್ನು ಆಸ್ಪತ್ರೆಯ ಮುಂಭಾಗದ ಪ್ರಮುಖ ಸ್ಥಳದಲ್ಲಿ ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಕಟಿಸಬೇಕು. ಆರೋಗ್ಯಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಈ ನಿರ್ದೇಶನದ ಸ್ಪಷ್ಟ ಉಲ್ಲಂಘನೆ ಕಂಡು ಬಂದಿದೆ. ಜಿಲ್ಲಾಡಳಿತಕ್ಕೆ ಕೋವಿಡ್-19 ಸೋಂಕಿತರ ಚಿಕಿತ್ಸೆ ನೀಡುತ್ತಿರುವ ಕುರಿತು ಹಾಗೂ ಶೇ.50 ಹಾಸಿಗೆಗಳನ್ನು ಮೀಸಲಿಟ್ಟಿರುವುದಾಗಿ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿರುವುದನ್ನು ಡಿಸಿ ನಿತೇಶ್ ಪಾಟೀಲ ಗಂಭೀರವಾಗಿ ಪರಿಗಣಿಸಿದ್ದು, ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಪಿಎಂಇ ಕಾಯ್ದೆ ಪ್ರಕಾರ ಆಸ್ಪತ್ರೆ ಮುಂಭಾಗದಲ್ಲಿ ರೋಗಿಗಳಿಗೆ ವಿ ಧಿಸುವ ದರಪಟ್ಟಿ ಪ್ರದರ್ಶಿಸದ, ಎಬಿಎಆರ್ ಕೆ ಯೋಜನೆಯ ಮಾಹಿತಿ ಹಾಗೂ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವ ಹಾಗೆ ಆಸ್ಪತ್ರೆ ಮುಂಭಾಗದಲ್ಲಿ ಪ್ರದರ್ಶಿಸದ ಮತ್ತು ಕೋವಿಡ್-19 ಶಿಷ್ಟಾಚಾರ ಉಲ್ಲಂಘಿ ಸಿರುವ ಕಾರಣಕ್ಕಾಗಿ ಮುಂದಿನ 24 ಗಂಟೆಗಳಲ್ಲಿ ಈ ಮೂರು ಆಸ್ಪತ್ರೆಗಳು ಸೂಕ್ತ ಕಾರಣ ನೀಡಬೇಕು.ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಡಿಸಿ ನಿತೇಶ ಪಾಟೀಲ, ಹುಬ್ಬಳ್ಳಿಯ ಶಕುಂತಲಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ 75 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, 31 ಜನ ಕೋವಿಡ್ ದೃಢಪಟ್ಟವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದರು. ಆದರೆ ಏ.25ರಂದು ಜಿಲ್ಲಾ ಆರೋಗ್ಯಾಧಿಕಾರಿ ಶಕುಂತಲಾ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇವಲ 6 ಜನ ಕೋವಿಡ್ ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡುತ್ತಿದ್ದು, ಕೋವಿಡ್-19 ಅಲ್ಲದ ಪ್ರಕರಣಗಳನ್ನು ಕೂಡಾ ಕೋವಿಡ್-19 ಎಂದು ಪರಿಗಣಿಸಿ ಜಿಲ್ಲಾಡಳಿತಕ್ಕೆ ಒಟ್ಟು 31 ಜನ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು (ಸ್ಪ್ರೆಡ್‌ಶೀಟ್‌ನಲ್ಲಿ) ತಪ್ಪು ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ 26 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, 26 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿತ್ತು. ಏ.27ರಂದು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾ ಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಕೇವಲ ಕೋವಿಡ್-19 ದೃಢಪಟ್ಟ 6 ಜನರಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿದೆ. ಮತ್ತು ಒಟ್ಟು 26 ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು (ಸ್ಪ್ರೆಡ್‌ಶೀಟ್‌ನಲ್ಲಿ) ತಪ್ಪು ಮಾಹಿತಿ ನೀಡಿದೆ. ಇದೇ ರೀತಿ ತತ್ವದರ್ಶ ಆಸ್ಪತ್ರೆಯು 150 ಹಾಸಿಗೆಗಳಿಗೆ ಅನುಮತಿ ಪಡೆದಿದ್ದು, ಇದರಲ್ಲಿ ಶೇ.50 ಅಂದರೆ 75 ಹಾಸಿಗೆಗಳನ್ನು ಕೋವಿಡ್-19 ಸೋಂಕಿತರಿಗೆ ಮೀಸಲಿಡಬೇಕು. ಆದರೆ ತತ್ವದರ್ಶ ಆಸ್ಪತ್ರೆಯವರು ಕೋವಿಡ್-19 ದೃಢಪಟ್ಟ ಪ್ರಕರಣಗಳ ಲ್ಯಾಬೋರೇಟರಿ ಫಲಿತಾಂಶ ಇಲ್ಲದೇ ಕೋವಿಡ್-19 ಪ್ರಕರಣಗಳೆಂದು ಒಳರೋಗಿಯಾಗಿ ದಾಖಲಿಸಿರುವುದು ಏ.26ರಂದು ಜಿಲ್ಲಾ ಆರೋಗ್ಯಾ ಧಿಕಾರಿ ಭೇಟಿ ಸಂದರ್ಭದಲ್ಲಿ ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ಮುಂದಿನ 24 ಗಂಟೆಯಲ್ಲಿ ಈ ಎಲ್ಲ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ ಕೋವಿಡ್-19 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾದ ವಿವರವಾದ ಮಾಹಿತಿ, ರೋಗಿಗಳಿಗೆ ವಿಧಿಸಿರುವ ಬಿಲ್‌ನ ಸಂಪೂರ್ಣ ಮಾಹಿತಿ, ಕೋವಿಡ್-19 ಸೋಂಕು ದೃಢಪಟ್ಟ ಎಸ್.ಆರ್.ಎಫ್. ಐಡಿಯೊಂದಿಗೆ ಪ್ರಯೋಗಾಲಯದ ಫಲಿತಾಂಶದ ಪ್ರತಿ (ಪ್ರತಿ ಪ್ರಕರಣಕ್ಕೆ ಅನ್ವಯವಾಗುವಂತೆ) ಸಲ್ಲಿಸಬೇಕು. ಹಾಗೂ ಸ್ಪ್ರೆಡ್‌ಶೀಟ್‌ನಲ್ಲಿ ತೋರಿಸಿರುವ ಪ್ರಕಾರ ಕೋವಿಡ್-19 ಪ್ರಕರಣಗಳ ಸಂಪೂರ್ಣ ಮಾಹಿತಿ ಎಸ್.ಆರ್.ಎಫ್. ಐಡಿಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ ಧಿಕಾರಿಗೆ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.