ಸೇತುವೆ ಕಾಮಗಾರಿ ಸ್ಥಗಿತಗೊಳಿಸಲು ಜೋಶಿ ಸೂಚನೆ
Team Udayavani, Jul 30, 2018, 4:30 PM IST
ಹುಬ್ಬಳ್ಳಿ: ನಗರದ ದೇಸಾಯಿ ಕ್ರಾಸ್ ಬಳಿ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದೆ. ದೇಸಾಯಿ ಕ್ರಾಸ್ ಹತ್ತಿರ ವಾಹನಗಳ ಸುಗಮ ಸಂಚಾರಕ್ಕೆ ರಾಜ್ಯ ಸರಕಾರದ ಅನುದಾನದಡಿ ಅಂಡರ್ ಪಾಸ್ ಸೇತುವೆ ನಿರ್ಮಾಣ ಸೇರಿದಂತೆ ಇನ್ನಿತರೆ ಕಾಮಗಾರಿ ಆಗಬೇಕು. ಅಲ್ಲಿಯವರೆಗೆ ಈಗ ಆರಂಭಿಸಲು ಉದ್ದೇಶಿಸಿರುವ ಸೇತುವೆ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಸಂಸದ ಪ್ರಹ್ಲಾದ ಜೋಶಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಿದರು.
ದೇಸಾಯಿ ಕ್ರಾಸ್ ಬಳಿ ನಿರ್ಮಿಸಲಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಮ್ಮು ರವಿವಾರ ಪರಿಶೀಲಿಸಿದ ಅವರು ನಂತರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾಮಗಾರಿ ಅವೈಜ್ಞಾನಿಕವಾಗಿದೆ. ತಮ್ಮ ಗಮನಕ್ಕೆ ತಾರದೇ ಕಾಮಗಾರಿ ಆರಂಭಿಸಲಾಗಿದೆ. ರೈಲ್ವೆ ಸೇತುವೆ ಈಗಿನ ಎತ್ತರಕ್ಕಿಂತ ಅಂದಾಜು ಎಂಟು ಅಡಿ ಎತ್ತರದಲ್ಲಿ ನಿರ್ಮಾಣವಾಗುತ್ತಿದೆ. ಇದರಿಂದ ದೇಸಾಯಿ ಕ್ರಾಸ್‌ನಿಂದ ಕೇಶ್ವಾಪುರದ ಸರ್ವೋದಯ ವೃತ್ತ ಕಡೆಗೆ ವಾಹನಗಳು ಸಂಚರಿಸಲು ಹಾಗೂ ಪ್ರವಾಸಿ ಮಂದಿರದಿಂದ ಪಿಂಟೋ ರಸ್ತೆ, ಕ್ಲಬ್ ರಸ್ತೆ, ಕೇಶ್ವಾಪುರ ರಸ್ತೆ ಕಡೆಗೆ ಹೋಗಲು ತುಂಬಾ ಅಡಚಣೆಯಾಗುತ್ತದೆ. ಈ ಎಲ್ಲದರ ಕುರಿತು ಸಮಗ್ರವಾಗಿ, ಕೂಲಂಕುಷವಾಗಿ ಅಧ್ಯಯನ ಮಾಡಿ ವೈಜ್ಞಾನಿಕವಾಗಿ ಸೇತುವೆ ನಿರ್ಮಿಸಬೇಕು. ಸುಗಮ ಸಂಚಾರಕ್ಕೆ ದೇಸಾಯಿ ಕ್ರಾಸ್‌ನಲ್ಲಿ ಅಂಡರ್ ಪಾಸ್ ಸೇತುವೆ ನಿರ್ಮಾಣ ಮಾಡಬೇಕು. ಈ ಕುರಿತು ಆ. 4ರಂದು ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಮಹಾಪೌರರು, ಪಿಡಬ್ಲ್ಯೂಡಿ ರಾಷ್ಟ್ರೀಯ ಹೆದ್ದಾರಿ ಹಿರಿಯ ಅಭಿಯಂತರ ಸಭೆ ಆಗುವವರೆಗೂ ಕಾಮಗಾರಿ ತಡೆಹಿಡಿಯಬೇಕು ಎಂದರು.
ದೇಸಾಯಿ ಕ್ರಾಸ್ ಬಳಿ ಅಂಡರ್ ಪಾಸ್ ಕಾಮಗಾರಿ ರಾಜ್ಯ ಸರಕಾರದ ಅಡಿ ಬರುವುದರಿಂದ ಈ ಕುರಿತು ರಾಜ್ಯ ಸರಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು. ರಾಜ್ಯ ಸರಕಾರ ಹಣ ಕೊಡುವುದಾದರೆ ಈ ಕಾಮಗಾರಿ ಮುಂದುವರಿಸಬೇಕು. ಇಲ್ಲವಾದಲ್ಲಿ ಅದನ್ನು ಸ್ಥಗಿತಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಜಗದೀಶ ಶೆಟ್ಟರ, ಕಾಮಗಾರಿಗೆ ಸಂಬಂಧಪಟ್ಟ ಅಧಿಕಾರಿಗಳು, ಎಂಜಿನಿಯರ್ ಹಾಗೂ ಗುತ್ತಿಗೆದಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.