ಹೊರ ರಾಜ್ಯದಿಂದ ಬಂದವರ ಮೇಲೆ ತೀವ್ರ ನಿಗಾಕ್ಕೆ ಸೂಚನೆ
Team Udayavani, May 30, 2020, 5:43 AM IST
ಹುಬ್ಬಳ್ಳಿ: ಕೋವಿಡ್ ನಿಯಂತ್ರಣದಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದ್ದು, ಹೊರ ರಾಜ್ಯಗಳಿಂದ ಆಗಮಿಸುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಮಹಾನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಶ್ರಮ ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸರ ಪಾತ್ರವೂ ಬಹುಮುಖ್ಯವಾಗಿದೆ. ಹೊರ ರಾಜ್ಯದಿಂದ ನುಸುಳುತ್ತಿರುವ ಬಗ್ಗೆ ಮಾಹಿತಿಯಿದ್ದು, ಇಂತಹವರ ಮೇಲೆ ನಿಗಾ ವಹಿಸಬೇಕು. ಬೇರೆ ರಾಜ್ಯದಿಂದ ಬಂದವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಮಾಜದ ಸ್ವಾಸ್ಥ್ಯ ಕಾಡಾಡುವುದ ಜೊತೆಗೆ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸಬೇಕು. ಕೋವಿಡ್-19 ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಸುರಕ್ಷತಾ ಪರಿಕರಗಳನ್ನು ಬಳಸಬೇಕು ಎಂದು ಸಲಹೆ ನೀಡಿದ ಅವರು, ಕ್ವಾರಂಟೈನ್ ಕೇಂದ್ರಗಳನ್ನು ಬಿಗಿಗೊಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ಆಯುಕ್ತ ಆರ್.ದಿಲೀಪ, ಎಸ್ಪಿ ವರ್ತಿಕಾ ಕಟಿಯಾರ್, ಡಿಸಿಪಿ ಕೃಷ್ಣಕಾಂತ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.