ಬರಗಾಲದ ವಾಸ್ತವ ಸ್ಥಿತಿ-ಗತಿ ಸರ್ಕಾರಕ್ಕೆ ತಿಳಿಸಲು ಸೂಚನೆ


Team Udayavani, Aug 30, 2017, 12:34 PM IST

hub4.jpg

ಧಾರವಾಡ: ಮಳೆ-ಬೆಳೆ ಇಲ್ಲದೇ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ಈ ಕುರಿತು ರಾಜ್ಯ ಸರಕಾರಕ್ಕೆ ಧಾರವಾಡ ತಾಲೂಕಿನ ವಾಸ್ತವ ಸ್ಥಿತಿ ಹಾಗೂ ಬರಗಾಲದ ವಸ್ತುಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ತಾಪಂ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಆಗಸ್ಟ್‌ ಕೊನೆ ವಾರದ ವರೆಗೆ 615 ಮಿ.ಮೀ. ವಾಡಿಕೆ ಮಳೆ ಬದಲಾಗಿ 302.1 ಮಿ.ಮೀ. ಮಳೆಯಾಗಿದೆ. ಧಾರವಾಡ ತಾಲೂಕಿನಲ್ಲಿ ಶೇ.51 ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಳೆಹಾನಿ ಆಗಿ ಮುಂಗಾರು ಸಂಪೂರ್ಣ ವಿಫಲವಾಗಿದೆ.

ಹೀಗಾಗಿ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬೆಳೆಹಾನಿ ಹಾಗೂ ಈಗಿನ ಬರಗಾಲದ ಸನ್ನಿವೇಶದ ಕುರಿತು ಅಗತ್ಯ ಮಾಹಿತಿಯುಳ್ಳ ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿ ಎಂ.ಕೆ. ಹಿರೇಮಠರ ಅವರಿಗೆ ಸೂಚನೆ ನೀಡಿದರು. ಕಳೆದ 15 ದಿನಗಳಿಂದ ಧಾರವಾಡ ತಾಲೂಕಿನ ಪ್ರದೇಶದ ಹತ್ತಿ ಬೆಳೆಗೆ ಕಾಂಡಕೊರಕ ರೋಗ ಕಂಡು ಬಂದಿದ್ದು, ಮಳೆ ಇಲ್ಲದೇ ಉಳಿದಿರುವ ಶೇ.5ರಷ್ಟು ಬೆಳೆಯೂ ರೋಗದಿಂದ ಹಾಳಾಗುವಂತಾಗಿದೆ.

ಈ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕಾದ ಗ್ರಾಮ ಸೇವಕರು ಲಕ್ಷ ವಹಿಸುತ್ತಿಲ್ಲ. ಕೈಗೆ ಸಿಗದ ಗ್ರಾಮ ಸೇವಕರಿಗೆ ಈ ರೋಗದ ಬಗ್ಗೆಯೇ ಮಾಹಿತಿ ಇಲ್ಲ. ಒಟ್ಟಿನಲ್ಲಿ ರೈತರ ಪಾಲಿಗೆ ಕೃಷಿ ಇಲಾಖೆ ಸತ್ತು ಹೋದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕೆಲ ತಾಪಂ ಸದಸ್ಯರು ಸಹ ಧ್ವನಿಗೂಡಿಸಿ, ಗ್ರಾಮ ಸೇವಕರ ಮೇಲೆ ತಪ್ಪಿರುವ ಹಿಡಿತ ಸಾಧಿಸಿ, ರೈತರಿಗೆ ಮಾಹಿತಿ ನೀಡಿ ರೋಗದ ಕಡಿವಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. 

ಇದಕ್ಕೆ ಸ್ಪಂದಿಸಿದ ಕೃಷಿ ಇಲಾಖೆ ತಾಲೂಕಾಧಿಕಾರಿ ಎಂ.ಕೆ. ಹಿರೇಮಠ ಮಾತನಾಡಿ, ಕಳೆದು ಎರಡು ತಿಂಗಳ ಕಾಲ ರಜೆ ಮೇಲೆ ಇದ್ದೆ. ಈಗಷ್ಟೇ ಬಂದಿದ್ದು, ಈ ಕುರಿತಂತೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇವೆ. ರೋಗಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮವನ್ನು ಕೃಷಿ ಇಲಾಖೆ ಕೈಗೊಳ್ಳಲಿದ್ದು, ಗ್ರಾಮ ಸೇವಕರಿಗೆ ಅಗತ್ಯ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಠರಾವು ಪಾಸ್‌: ಜಿಲ್ಲಾಸ್ಪತ್ರೆಗೆ ಬರುವ ಕೆಲ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಯ ದೇಹದ ಮರಣೋತ್ತರ ಪರೀಕ್ಷೆ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸರ್ಜನ್‌ಗೆ ಸೂಚನೆ ನೀಡಲು ತಾಪಂ ಸಭೆಯಲ್ಲಿ ಸದಸ್ಯರ ಒತ್ತಾಯದ ಮೇರೆಗೆ ಠರಾವು ಪಾಸ್‌ ಮಾಡಲಾಯಿತು. 

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಕೆಲ ವಿಷಯ ಚರ್ಚೆ ಕೈಗೊಂಡು ಗಣೇಶ ವಿಸರ್ಜನೆ ಪ್ರಯುಕ್ತ ಮಧ್ಯಾಹ್ನದ ವೇಳೆಗೆ ಸಭೆ ಮುಕ್ತಾಯಗೊಳಿಸಲಾಯಿತು. ಉಪಾಧ್ಯಕ್ಷ ಮುತ್ತಪ್ಪ ನಾಯ್ಕರ್‌, ಸ್ಥಾಯಿ ಸಮಿತಿ ಅಧ್ಯಕ್ಷ ಫಕ್ಕೀರಪ್ಪ ಬುಡ್ಡಿಕಾಯಿ, ತಾಪಂ ಇಒ ರುದ್ರಸ್ವಾಮಿ ಸೇರಿದಂತೆ ತಾಪಂ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.   

ಟಾಪ್ ನ್ಯೂಸ್

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.