ಕೋವಿಡ್-19 ತಪಾಸಣೆ ಹೆಚ್ಚಿಸಲು ಸೂಚನೆ
Team Udayavani, Jun 30, 2020, 12:30 PM IST
ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ಜನವರ್ಗಗಳನ್ನು ರ್‍ಯಾಂಡಮ್ ತಪಾಸಣೆಗೆ ಒಳಪಡಿಸಬೇಕು. ಅದಕ್ಕಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆದ್ಯತಾನುಸಾರ ತಪಾಸಣೆಗೆ ಜನರನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ಮಾತನಾಡಿದ ಅವರು, ಪ್ರತಿದಿನ ಸರಾಸರಿ 250 ಜನರು ತಪಾಸಣೆಗೊಳಪಡುತ್ತಿದ್ದಾರೆ. ಪ್ರತಿದಿನ ಪ್ರಯೋಗಾಲಯದ ಸಂಪೂರ್ಣ ಸಾಮರ್ಥ್ಯಕ್ಕನುಗುಣವಾಗಿ ಹೆಚ್ಚು ತಪಾಸಣೆಗಳನ್ನು ತ್ವರಿತವಾಗಿ ನಡೆಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಕುರಿತು ಜನಜಾಗೃತಿ ಚಟುವಟಿಕೆಗಳು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದರು.
ಅವಳಿನಗರದ ಸೀಲ್‌ಡೌನ್ ಪ್ರದೇಶಗಳಲ್ಲಿ ನಿಯಮಗಳ ಪ್ರಕಾರ ಸಮೀಕ್ಷೆ, ಸೋಂಕು ಲಕ್ಷಣಗಳಿರುವ ಜನರನ್ನು ತಪಾಸಣೆಗೆ ಒಳಪಡಿಸಬೇಕು. ಮಾಸ್ಕ್ ಧರಿಸದೇ ಓಡಾಡುವ ಜನರಿಗೆ ದಂಡ ವಿಧಿಸುವ ಕಾರ್ಯ ಚುರುಗೊಳಿಸಬೇಕು. ದಂಡ ವಿಧಿ ಸಿದ ನಂತರ ಅವರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಕುರಿತು ಜನಜಾಗೃತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ಡಿಸಿ ದೀಪಾ ಚೋಳನ್ ಮಾತನಾಡಿ, ತೀವ್ರ ಉಸಿರಾಟದ ತೊಂದರೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳಿರುವ ರೋಗಿಗಳು ನೆರೆಯ ಜಿಲ್ಲೆಗಳಿಂದ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಐಎಲ್‌ಐ ಲಕ್ಷಣಗಳು ಇರುವವರನ್ನು ಗುರುತಿಸಿ ತಪಾಸಣೆಗೊಳಪಡಿಸಲಾಗುತ್ತಿದೆ ಎಂದರು.ಶಾಸಕರಾದ ಸಿ.ಎಂ. ನಿಂಬಣ್ಣವರ, ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಪೊಲೀಸ್ ಆಯುಕ್ತ ಆರ್. ದಿಲೀಪ, ಎಸ್‌ಪಿ ವರ್ತಿಕಾ ಕಟಿಯಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.