ನಿಗದಿತ ಸಮಯಕ್ಕೆ ಹಾಜರಾಗುತ್ತಿಲ್ಲ ಸರಕಾರಿ ಶಾಲೆ ಶಿಕ್ಷಕರು
Team Udayavani, Aug 8, 2018, 5:33 PM IST
ಮುಂಡರಗಿ: ತಾಲೂಕಿನ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ನಿಗದಿತ ಸಮಯಕ್ಕೆ ಹಾಜರಾಗುತ್ತಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ ಎಂದು ತಾಪಂ ಸದಸ್ಯರು ದೂರಿದರು. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಇಲಾಖೆಯಲ್ಲಿನ ಕೆಲ ಲೋಪದೋಷಗಳ ಕುರಿತು ತೀವ್ರ ಚರ್ಚೆ ನಡೆಯಿತು. ತಾಪಂ ಇಒ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಪಾಠಬೋಧನೆ ಕೊರತೆಯಿದೆ. ಶಿಕ್ಷಕರು ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ವೃತ್ತಿಯ ಘನತೆ, ಗೌರವ ಕಾಪಾಡುವಂತೆ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಬೇಕು ಎಂದು ಹೇಳಿದರು.
ಹೆಸ್ಕಾಂ ಅಭಿಯಂತರ ಎಂ.ಬಿ. ಗೌರೋಜಿ ಮಾತನಾಡಿ, ತಾಲೂಕಿನಲ್ಲಿ ಹೆಸ್ಕಾಂ ಗೃಹ ಗ್ರಾಹಕರಿಂದ ಬರಬೇಕಾದ ಬಾಕಿ 1.42 ಕೋಟಿ ರೂ. ಇದೆ. ಹೆಸ್ಕಾಂ ಆರ್ಥಿಕ ಹೊರೆ ಎದುರಿಸುತ್ತಿದ್ದರೂ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಗ್ರಾಹಕರು ನಿಗದಿತ ಅವಧಿಯಲ್ಲಿ ಹಣ ತುಂಬಿದ್ದರೆ ಗ್ರಾಹಕರಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೇವೆ ಸಲ್ಲಿಸಲು ಅನುಕೂಲವಾಗಲಿದೆ. ಬಹುತೇಕ ಕಡೆಗೆ ಕುಡಿಯುವ ನೀರು ಸೇರಿದಂತೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.
ತಾಲೂಕಿನಲ್ಲಿ ವಾಡಿಕೆಯಂತ ಮಳೆಯಾಗಿಲ್ಲ. ಹೆಸರು ಬೆಳೆ ಹಾನಿ ಸಂಭವಿಸಿದೆ ಎಂದು ಕೃಷಿ ಅಧಿಕಾರಿ ಎಸ್.ಬಿ.ನೆಗಳೂರು ಸಭೆಗೆ ತಿಳಿಸಿದರು. ತಾಲೂಕಿನ ಗ್ರಾಮೀಣ ಭಾಗದಲ್ಲಿ ಚಿಕೂನ್‌ಗುನ್ಯಾ ಕಂಡುಬಂದಿದೆ. ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆಯು ಗ್ರಾಪಂ ಸಹಯೋಗದಲ್ಲಿ ಜನಜಾಗೃತಿ ಮೂಡಿಸಬೇಕೆಂದು ಡಾ| ಸುಭಾಸ ದೈಗೊಂಡ, ಡಾ| ಕೀರ್ತಿಹಾಸ್‌ಗೆ ಸೂಚಿಸಲಾಯಿತು. ಅಲ್ಲದೇ ಭೂಸೇನಾ ನಿಗಮದ ಅಧಿಕಾರಿಗೆ ಪಟ್ಟಣದ ಮಂತ್ರಾಲಯ ಮಠದ ಆವರಣದ ಕಾಮಗಾರಿ ಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು. ತಾಲೂಕಿನ ಶುದ್ಧ ಕುಡಿಯುವ ನೀರಿನ ಘಟಕಗಳ ಕುರಿತು ಅಭಿಯಂತರ ಆಕಾಶ ಸಭೆಗೆ ಮಾಹಿತಿ ನೀಡಿ, ಘಟಕಗಳು ದುರಸ್ತಿ ಬಂದಲ್ಲಿ ಕೂಡಲೇ ಮಾಡಲಾಗುತ್ತಿದೆ. ಸಮಗ್ರ ಕುಡಿಯುವ ನೀರಿನ ಯೋಜನೆಯ ಎಲ್‌ಟಿಯವರು ನೀರು ಸರಬರಾಜು ಸರಿಯಾಗಿ ಮಾಡಬೇಕಿದೆ. ಇಲ್ಲದೇ ಹೋದರೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಲಿದೆ ಎಂದರು. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕರು ವಸತಿ ನಿಲಯಕ್ಕೆ ಸರಿಯಾಗಿ ಬಂದು ಕರ್ತವ್ಯ ನಿರ್ವಹಿಸುತ್ತಿಲ್ಲ. ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿದಾಗ ಮೇಲ್ವಿಚಾರಕರ ಗೈರುಹಾಜರಾತಿ ಕಂಡುಬಂದಿದೆ ಎಂದು ಜಿಪಂ ಸದಸ್ಯೆ
ಶೋಭಾ ಮೇಟಿ ಪ್ರಸ್ತಾಪಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ತಾಪಂ ಇಒಗೆ ಸೂಚಿಸಿದರು.
ಸಭೆ ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷೆ ರೇಣುಕಾ ಕೋರ್ಲಹಳ್ಳಿ ವಹಿಸಿದ್ದರು. ತಾಪಂ ಇಒ ಸಿ.ಆರ್. ಮುಂಡರಗಿ, ಉಪಾಧ್ಯಕ್ಷೆ ಹೇಮಾವತಿ ಕನ್ನಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಭರಮಪ್ಪ ನಾಗನೂರ, ತಾಪಂ ಅಧಿಕಾರಿ ಎಸ್.ಕೆ. ಕೋರ್ಲಹಳ್ಳಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.