ವಾಣಿಜ್ಯ ನಗರಿಯಲ್ಲಿ ನುಡಿ ಸಂಭ್ರಮ


Team Udayavani, Jun 11, 2018, 4:52 PM IST

11-june-18.jpg

ಹುಬ್ಬಳ್ಳಿ: ವಾಣಿಜ್ಯ ನಗರವಾಗಿದ್ದ ಹುಬ್ಬಳ್ಳಿಯಲ್ಲಿ ಈ ಮೊದಲು ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರನ್ನು ಹುಡುಕುವಂಥ ಪರಿಸ್ಥಿತಿ ಇತ್ತು. ಆದರೆ ಇಂದು ನಗರವು ವ್ಯಾಪಾರ ವಹಿವಾಟಿನೊಂದಿಗೆ ಸಾಹಿತಿಗಳ ತವರೂರಾಗಿದೆ ಎಂದು ಹುಬ್ಬಳ್ಳಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಎಂ.ಎಂ. ಕನಕೇರಿ ಹೇಳಿದರು.

ವಿದ್ಯಾನಗರದ ಜಗದ್ಗುರು ಶ್ರೀ ರಂಭಾಪುರಿ ಕಲ್ಯಾಣ ಮಂಟಪದ ಮೋಹನ ಏಕಬೋಟೆ ವೇದಿಕೆಯಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ನಗರದಲ್ಲಿ ಸಾಹಿತ್ಯದ ಗಂಧವೇ ಇರಲಿಲ್ಲ ಎನ್ನುವ ಮಾತು ಕೇಳಿ ಬಂದಿದ್ದು ಸುಳ್ಳಲ್ಲ. ಶ್ರಮ ವಹಿಸಿ ಕನ್ನಡಾಭಿಮಾನಿಗಳು, ಸಾಹಿತಿಗಳನ್ನು ಕಾಣಬೇಕೆಂದು ಮಹಾನಗರದ ಗಲ್ಲಿ ಗಲ್ಲಿಗಳಲ್ಲಿ ಸಂಚರಿಸಿದರೆ ವ್ಯಾಪಾರಸ್ಥರು, ಬಡ್ಡಿ ವ್ಯವಹಾರದಲ್ಲಿ ತೊಡಗಿರುವವರು ಭೇಟಿಯಾಗುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಹುಬ್ಬಳ್ಳಿ ಸಾಹಿತಿಗಳ ತವರಾಗಿ ಮಾರ್ಪಟ್ಟಿದೆ. ನಗರದಲ್ಲೀಗ ಎಲ್ಲ ಬಡಾವಣೆಗಳಲ್ಲಿ ಒಬ್ಬರಲ್ಲ ಒಬ್ಬರು ಸಾಹಿತಿಗಳು ಕಾಣುತ್ತಾರೆ. ಅಷ್ಟರ ಮಟ್ಟಿಗೆ ಸಾಹಿತ್ಯದ ಅಭಿರುಚಿ ಹೆಚ್ಚಾಗಿದೆ ಎಂದರು.

ಕನ್ನಡ ಶಾಸ್ತ್ರೀಯ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಕೆ.ಆರ್‌. ದುರ್ಗಾದಾಸ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಬಸವಣ್ಣ, ಕನಕದಾಸರು ಸೇರಿದಂತೆ ಬಹುತೇಕರ ವಚನ, ಸಾಹಿತ್ಯ, ಪದ್ಯಗಳಲ್ಲಿ ತುಳಿತಕ್ಕೊಳಗಾದವರ ಹಾಗೂ ದಮನಿತರ ಪರವಾಗಿ ಧ್ವನಿಯಿದೆ ಎಂದರು. ಇಂದಿನ ರಾಜಕಾರಣ ನೋಡಿದರೆ ಕೆಳ ವರ್ಗದವರಿಗೆ ಸಿಗದಿರುವ ಸ್ಥಾನಮಾನದ ಬಗ್ಗೆ ಚಿಂತಿಸುವ ಬದಲು ತಮ್ಮ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ರಾಜಕಾರಣಕ್ಕಿಂತ ಸಾಹಿತ್ಯ ಕ್ಷೇತ್ರವೇ ಲೇಸು ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಇಂದಿನ ಬಹುತೇಕ ರಾಜಕಾರಣಗಳಿಗೆ ಸಾಹಿತ್ಯ ಎಂದರೆ ಅಲರ್ಜಿ. ರಾಜಕಾರಣಿಗಳಲ್ಲಿ ಸಾಹಿತ್ಯ, ಜಾನಪದ ಕ್ಷೀಣಿಸುತ್ತಿರುವುದು ವಿಷಾದದ ಸಂಗತಿ. ಸರಕಾರಗಳು ಕನ್ನಡ ಸಾಹಿತ್ಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದಕ್ಕಾಗಿ ಒಂದು ಖಾತೆ ಇದ್ದರೂ ಬೇಡವಾದವರಿಗೆ ಅನಿವಾರ್ಯವಾಗಿ ಈ ಖಾತೆ ನೀಡುವ ಪರಿಪಾಠ ಬೆಳೆದಿದೆ. ಪರಿಸ್ಥಿತಿ ಹೀಗಿರುವಾಗ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಕೈಗೊಂಡ ನಿರ್ಣಯಗಳು ಅನುಷ್ಠಾನಕ್ಕೆ ಬರುವುದಿಲ್ಲ ಎಂದರು.

ಪುಸ್ತಕ ಬಿಡುಗಡೆ: ಸಮ್ಮೇಳನದ ಸರ್ವಾಧ್ಯಕ್ಷ ಎಂ.ಎಂ. ಕನಕೇರಿ ಅವರ ಮಾತಾ ಮಾಣಿಕೇಶ್ವರಿ ಯಾನಾಗುಂದಿ, ಸುಶೀಲ 48ನೇ ವರ್ಧಂತಿ ಸಂಚಿಕೆ, ಶ್ರೀ ಗುರು ಶಿವಾಚಾರ್ಯ, ಹೂಲಿ ಹಾಗೂ ಪ್ರೊ| ಶಂಕರಗೌಡ ಸಾತ್ಮಾರ ಅವರು ರಚಿಸಿದ ಮಿನಿ ಹನಿ ಕವನಗಳು ಲೋಕಾರ್ಪಣೆಗೊಂಡವು.

ಇದಕ್ಕೂ ಮೊದಲು ಬಿವಿಬಿ ಎಂಜಿನಿಯರಿಂಗ್‌ ಮಹಾವಿದ್ಯಾಲಯದ ಆವರಣದಿಂದ ರಂಭಾಪುರಿ ಕಲ್ಯಾಣ ಮಂಟಪ ವರೆಗೆ ಕನ್ನಡದ ತೇರಿನಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಎಂ.ಎಂ. ಕನಕೇರಿ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ತುಂತುರು ಮಳೆಯಲ್ಲೇ ಕನ್ನಡದ ತೇರು ವಿಜೃಂಭಣೆಯಿಂದ ಸಾಗಿತು.

ನಿಕಟಪೂರ್ವ ಅಧ್ಯಕ್ಷ ಪ್ರೊ| ಜಿ.ಎಚ್‌. ಹನ್ನೆರಡುಮಠ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಅಧ್ಯಕ್ಷ ಪ್ರೊ| ಕೆ.ಎ. ದೊಡ್ಡಮನಿ, ಪ್ರೊ| ಕೆ.ಎಸ್‌. ಕೌಜಲಗಿ, ಡಾ| ರಾಮು ಮೂಲಗಿ, ಕಸಾಪ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು. ಗ್ರಂಥಪಾಲಕ ಬಿ.ಎ. ಮಾಳವಾಡ ನಿರೂಪಿಸಿದರು. ಉದಯಚಂದ್ರ ದಿಂಡವಾರ ವಂದಿಸಿದರು. 

ಸಾಹಿತಿಗಳ ಬೆನ್ನು ತಟ್ಟುವ ಕೆಲಸ ಆಗಬೇಕಿದೆ. ಸಾಹಿತ್ಯ ಕೆಲವರಿಗೆ ಮಾತ್ರ ಸೀಮಿತ ಎನ್ನುವ ಮನಸ್ಥಿತಿ ಬೇಡ. ಅಕ್ಷರ ಕೃಷಿಯಲ್ಲಿ ತೊಡಗಿದರೆ ಸಾಹಿತ್ಯ ಒಲಿಸಿಕೊಳ್ಳಬಹುದು.
ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ಸದಸ್ಯ 

ಕವಿ ಪಂಪ ರಾಜಾಶ್ರಯದಲ್ಲಿದ್ದರೂ ಜನ ವಿರೋಧಿ ನೀತಿಯನ್ನು ನಿರ್ಭಿಡೆಯಿಂದ ವಿರೋಧಿಸುತ್ತಿದ್ದರು. ಕೆಳ ವರ್ಗದ ಜನರ ಬಗ್ಗೆ ಸಂವೇದನಶೀಲತೆ ಹೊಂದಿದ್ದರು. ಅವರ ಈ ನಡೆ ಇಂದಿನ ಬದುಕಿನಲ್ಲಿನ ನ್ಯೂನತೆಗಳನ್ನು ಯಾವುದೇ ಅಳುಕಿಲ್ಲದೆ ವಿರೋಧಿಸುವುದಕ್ಕೆ ನಮಗೆ ಮಾರ್ಗದರ್ಶಿಯಾಗಿದೆ.
 ಕೆ.ಆರ್‌. ದುರ್ಗಾದಾಸ

ಆಂಗ್ಲ ಮಾಧ್ಯಮದಲ್ಲಿ ಅಧ್ಯಯನ ಮಾಡಿದರೆ ಮಾತ್ರ ಯಶಸ್ಸು ಎಂಬ ಭಾವನೆ ಮೂಡಿದೆ. ಆಂಗ್ಲ ಮಾಧ್ಯಮದ ಶಾಲೆಯಲ್ಲಿ ಲಕ್ಷಾಂತರ ರೂ. ಡೊನೇಷನ್‌ ನೀಡಿಯಾದರೂ ಎಲ್‌ಕೆಜಿ ಪ್ರವೇಶ ಗಿಟ್ಟಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕನ್ನಡ ಮಾಧ್ಯಮದ ಬಗ್ಗೆ ಪಾಲಕರಲ್ಲಿ ತಾತ್ಸಾರ ಬೇಡ.
 ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.