ಸಿಇಒ ಎದುರೇ ಅಧಿಕಾರಿಗಳ ಹೊಡೆದಾಟ!

Team Udayavani, May 21, 2017, 4:22 PM IST

hub1.jpg

ಧಾರವಾಡ: ಬರಗಾಲದ ಸಂದರ್ಭದಲ್ಲಿ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ವೇದಿಕೆಯಾಗಬೇಕಿದ್ದ ಧಾರವಾಡ ಜಿಪಂ ಸಭಾಂಗಣ ಅಧಿಕಾರಿಗಳಿಬ್ಬರ ಹೊಡೆದಾಟಕ್ಕೆ ಸಾಕ್ಷಿಯಾಯಿತು. 

ಶನಿವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಗ್ರಾಪಂ ನೌಕರನೊಬ್ಬನ ನೇಮಕಾತಿಗೆ ಸಂಬಂಧಿಸಿದಂತೆ ಧಾರವಾಡ ಜಿ.ಪಂ. ಉಪ ಕಾರ್ಯದರ್ಶಿ ವೈ.ಡಿ. ಕುನ್ನಿಭಾವಿ ಮತ್ತು ಹುಬ್ಬಳ್ಳಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಧ್ಯೆ ಮಾರಾಮಾರಿ ನಡೆದು, ಇಬ್ಬರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು. ಅಷ್ಟೇಯಲ್ಲ, ಈ ವಿಚಾರದಲ್ಲಿ ವೈ.ಡಿ. ಕುನ್ನಿಭಾವಿ ಬಳಸಿದ ಅಶ್ಲೀಲ ಶಬ್ದಗಳ ಬಗ್ಗೆ ಜಿ.ಪಂ. ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಂದ ತೀವ್ರ ಖಂಡನೆ ವ್ಯಕ್ತವಾಯಿತು.

ಅಧಿಕಾರಿಗಳು ತಮ್ಮ ಹದ್ದು ಮೀರಿ ವರ್ತಿಸಿದ್ದು, ಈ ಇಬ್ಬರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲು ಜಿ.ಪಂ. ಸಿಇಒ ಅವರಿಗೆ ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರ ಆದೇಶ ನೀಡಿದ್ದಾರೆ. ಇನ್ನೊಂದೆಡೆ ಜಿ.ಪಂ. ಸಿಇಒ ಸ್ನೇಹಲ್‌ ಅವರು ಇಬ್ಬರು ಅಧಿಕಾರಿಗಳ ಮಧ್ಯೆ ರಾಜೀ ಸಂಧಾನ ಮಾಡಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. 

ಯಾತಕ್ಕಾಗಿ ಕಾದಾಟ?: ಅದರಗುಂಚಿ ಜಿ.ಪಂ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವರಗುಡಿಹಾಳ ಗ್ರಾಮ ಪಂಚಾಯಿತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಬಿಲ್‌ ಕಲೆಕ್ಟರ್‌/ ಕಂಪ್ಯೂಟರ್‌ ಆಪರೇಟರ್‌ ಹುದ್ದೆ ನೇಮಕಾತಿ ನಡೆಯಬೇಕಿದೆ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ ಜಿ.ಪಂ. ಉಪ ಕಾರ್ಯದರ್ಶಿ ವೈ.ಡಿ.ಕುನ್ನಿಭಾವಿ ಈ ಹುದ್ದೆ ನೇಮಕಕ್ಕೆ ಸಂಬಂಧಿಸಿದ ಕಾಗದ ಪತ್ರವೊಂದನ್ನು ನೀಡುವಂತೆ ಹುಬ್ಬಳ್ಳಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದರು.

ಇದನ್ನು ಪರಿಶೀಲಿಸಿ ಕಳುಹಿಸಲು ವಿಳಂಬವಾಗಿದೆ. ಇದಕ್ಕೆ ತಾ.ಪಂ. ಇಒ ರಾಮಚಂದ್ರ ಹೊಸಮನಿ ಅವರೇ ಕಾರಣ ಎಂದು ಕುನ್ನಿಭಾವಿ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರು ಅಧಿಕಾರಿಗಳು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು, ಕೊನೆಗೆ ಜಿ.ಪಂ. ಸಿಇಒ ಎದುರು ಬಂದು ಗಲಾಟೆ ಆರಂಭಿಸಿದರು. 

ಸದಸ್ಯರಿಗೆ ಮುಜುಗರ: ಇಬ್ಬರು ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ಜಿ.ಪಂ. ಸಭಾಂಗಣದಲ್ಲಿ ಹೊಡೆದಾಡಿಕೊಳ್ಳುತ್ತಿದ್ದರೆ, ಹಾಜರಿದ್ದ 22 ಜಿ.ಪಂ. ಸದಸ್ಯರೂ ಒಮ್ಮೇಲೆ ದಂಗಾಗಿ ಅವರನ್ನು ನೋಡಿಕೊಂಡು ನಿಂತು ಬಿಟ್ಟರು. ಏಕಾಏಕಿ ಕೆಟ್ಟ ಶಬ್ದಗಳು ಕಿವಿಗೆ ಬೀಳುತ್ತಿದ್ದಂತೆ, ಸದಸ್ಯರು ಪರಸ್ಪರ ಮುಖ ನೋಡಿಕೊಂಡು ಮುಜುಗರ ಪಟ್ಟುಕೊಳ್ಳಬೇಕಾಯಿತು.

ಕೊನೆಗೆ ಅದರಗುಂಚಿ ಜಿ.ಪಂ. ಸದಸ್ಯ ಸುರೇಶಗೌಡ ಪಾಟೀಲ ಮಧ್ಯ ಪ್ರವೇಶಿಸಿ ಇಬ್ಬರೂ ಅಧಿಕಾರಿಗಳಿಗೆ ಜಗಳ ನಿಲ್ಲಿಸುವಂತೆ ತಾಕೀತು ಮಾಡಿದರು. ಜೊತೆಗೆ ಸಿಇಒ ಸ್ನೇಹಲ್‌ ಕೂಡ ಇಬ್ಬರು ಅಧಿಕಾರಿಗಳನ್ನು ಸುಮ್ಮನಿರುವಂತೆ ಸೂಚಿಸಿದಾಗ ಗಲಾಟೆ ತಣ್ಣಗಾಯಿತು.  

ರಾಜೀ ಸಭೆ ವಿಫಲ: ಜಿ.ಪಂ. ಸಭಾಂಗಣದಲ್ಲಿನ ಇಬ್ಬರು ಅಧಿಕಾರಿಗಳ ಗಲಾಟೆ ಕೊನೆಗೆ ಜಿ.ಪಂ. ಸಿಇಒ ಅವರ ಕಚೇರಿಗೆ ಸ್ಥಳಾಂತರಗೊಂಡಿತು. ಇಲ್ಲಿ ಇಬ್ಬರು ಅಧಿಕಾರಿಗಳ ಮಧ್ಯ ಸಂಧಾನಕ್ಕೆ ಜಿ.ಪಂ. ಸಿಇಒ ಯತ್ನಿಸಿದರು. ಇಬ್ಬರು ಅಧಿಕಾರಿಗಳಿಗೆ ಬುದ್ದಿ ಕೂಡ ಹೇಳಿದರು. ಆದರೂ ಪ್ರಯೋಜನವಾಗದೇ ಅವರ ಎದುರಿನಲ್ಲಿಯೇ ಮತ್ತೂಮ್ಮೆ ವಾಕ್‌ ಸಮರ ನಡೆಯಿತು. ಕೊನೆಗೂ ಅವರು ಕೂಡ ತಮ್ಮ ಕಚೇರಿಯಿಂದ ಎದ್ದು ಹೊರ ನಡೆದರು.  

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.