ನೈಋತ್ಯ ರೈಲ್ವೆಯಿಂದ ಆಪರೇಶನ್ ಖುಷಿ
Team Udayavani, May 30, 2020, 9:01 AM IST
ಹುಬ್ಬಳ್ಳಿ: ಮರುವಲಸೆ ಕಾರ್ಮಿಕರಿಗಾಗಿ ಶ್ರಮಿಕ ರೈಲು ವ್ಯವಸ್ಥೆ ಮಾಡಿದ್ದ ರೈಲ್ವೆ ಇಲಾಖೆ ಇದೀಗ ಮತ್ತೂಂದು ಹೆಜ್ಜೆ ಮುಂದಿಟ್ಟಿದ್ದು, ಕಾರ್ಮಿಕರ ಮಕ್ಕಳಿಗೆ ಆಟವಾಡಲು ಗೊಂಬೆ, ಪಾದರಕ್ಷೆ, ಚಾಕೋಲೇಟ್, ಬಣ್ಣದ ಪೆನ್ಸಿಲ್, ಬುಕ್‌ಗಳನ್ನು ನೀಡುವ ನಿಟ್ಟಿನಲ್ಲಿ “ಆಪರೇಶನ್ ಖುಷಿ’ ಆರಂಭಿಸಿದೆ.
ಬೆಂಗಳೂರಿಗೆ ವಲಸೆ ಬಂದು ಇದೀಗ ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಮುಂದಾಗಿರುವ ಕಾರ್ಮಿಕರ ಮಕ್ಕಳಿಗೆ ರೈಲುಗಳಲ್ಲಿ ಆಟವಾಡಿಕೊಂಡು ಹೋಗಲು ಅನುವಾಗುವಂತೆ ಬೆಂಗಳೂರಿನ ರೈಲ್ವೆ ಭದ್ರತಾ ಪಡೆಯವರು ಸ್ವಯಂ ಸೇವಾ ಸಂಸ್ಥೆಯೊಂದರ ನೆರವಿನೊಂದಿಗೆ ಈ ಕಾರ್ಯಕ್ಕೆ ಮುಂದಾಗಿದ್ದಾರೆ.
ಶ್ರಮಿಕ ರೈಲುಗಳ ಮೂಲಕ ವಿವಿಧ ರಾಜ್ಯಗಳಿಗೆ ತೆರಳುತ್ತಿರುವ ಕಾರ್ಮಿಕರ ಮಕ್ಕಳಿಗೆ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸಾಮಗ್ರಿ ಹಂಚಲಾಗುತ್ತಿದೆ. ಸುಮಾರು 5,000 ಪಾದರಕ್ಷೆಗಳು, ಚೆನ್ನಪಟ್ಟಣದ ಗೊಂಬೆಗಳು, ಪುಸ್ತಕಗಳು, ಬಣ್ಣ ಬಣ್ಣದ ಪೆನ್ಸಿಲ್‌ಗಳನ್ನು ನೀಡಲಾಗುತ್ತಿದೆ. ನೈಋತ್ಯ ರೈಲ್ವೆ ವಲಯ ಬೆಂಗಳೂರು ವಿಭಾಗದ ಈ ಕಾರ್ಯಕ್ಕೆ ರೈಲ್ವೆ ಇಲಾಖೆ ಸಚಿವ ಪಿಯೂಷ್ ಗೋಯಲ್ ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಆಪರೇಶನ್ ಖುಷಿ’ ನಿಜವಾಗಿಯೂ ಶ್ರಮಿಕ ರೈಲುಗಳಲ್ಲಿ ಸಂಚರಿಸುವ ಮಕ್ಕಳ ಮೊಗದಲ್ಲಿ ನಗು ತರಿಸಲಿದೆ, ಸಂತಸಕ್ಕೆ ಕಾರಣವಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಎ.ಕೆ. ಸಿಂಗ್ ಅವರೂ ಈ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.