ಸ್ವಯಂ ಉದ್ಯೋಗಿಗಳಾಗಲು ಅಪಾರ ಅವಕಾಶ
ಅರ್ಹತೆಗೆ ಪೂರಕವಾಗಿ ಕೌಶಲ್ಯ ಗಳಿಸಿಕೊಳ್ಳಿ
Team Udayavani, Apr 22, 2022, 11:27 AM IST
ಧಾರವಾಡ: ಐಟಿಐ ಹಾಗೂ ಇತರೆ ಕೈಗಾರಿಕಾ ತರಬೇತಿ ಪಡೆದ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಪೂರಕವಾಗಿ ಕೌಶಲ್ಯ ಗಳಿಸಿಕೊಂಡು ದೇಶ-ವಿದೇಶಗಳ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಪ್ರಯತ್ನಶೀಲರಾಗಬೇಕು. ಉದ್ಯಮಶೀಲತೆ ಅಳವಡಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಅಪಾರ ಅವಕಾಶಗಳಿವೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಅವ್ವಪ್ಪಣ್ಣ ಅತ್ತಿಗೇರಿ ಐಟಿಐ ಸಹಯೋಗದಲ್ಲಿ ಲಿಂಗಾಯತ ಟೌನ್‌ಹಾಲ್‌ನಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ರಾಷ್ಟ್ರೀಯ ಶಿಶಿಕ್ಷು (ಅಪ್ರಂಟಿಸ್) ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಶಿಶಿಕ್ಷು ಮೇಳದಲ್ಲಿ ಸರ್ಕಾರದ ಇಲಾಖೆಗಳು, ಐಟಿಐ ಸಂಸ್ಥೆಗಳು, ವಿದ್ಯಾರ್ಥಿಗಳು, ಉದ್ಯೋಗದಾತರು ಒಂದೆಡೆ ಸೇರಿರುವುದು ಉದ್ಯೋಗ ಸ್ನೇಹಿ ವಾತಾವರಣ ನಿರ್ಮಿಸಿದೆ. ವಿದ್ಯಾರ್ಥಿಗಳು ಅನುಭವ, ಕೌಶಲ್ಯ ಗಳಿಸಿಕೊಂಡು ದೇಶ-ವಿದೇಶಗಳ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಪಡೆಯುವಂತೆ ಬೆಳೆಯಬೇಕು. ಅಗತ್ಯವಿರುವ ಪಾಸ್‌ಪೋರ್ಟ್ ಮತ್ತಿತರೆ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವ ಮಾಹಿತಿ ಪಡೆಯಬೇಕು ಎಂದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ಸಿದ್ಧಣ್ಣ ಮಾತನಾಡಿ, ಉದ್ಯೋಗ ಮೇಳಗಳ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಯುವಶಕ್ತಿ ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ಮೇಳಗಳು ಸಹಕಾರಿ ಎಂದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಾ|ಚಂದ್ರಪ್ಪ ಮಾತನಾಡಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೌಶಲ್ಯಾಧಾರಿತ ಶಿಕ್ಷಣ, ತರಬೇತಿ ನೀಡಲು ಆದ್ಯತೆ ನೀಡಿ ಪೂರಕ ವಾತಾವರಣ ನಿರ್ಮಿಸುತ್ತಿವೆ ಎಂದರು.
ಶಿಶಿಕ್ಷು ಮೇಳದ ನೋಡಲ್ ಅಧಿಕಾರಿ ರವೀಂದ್ರ ಪಿ.ದ್ಯಾಬೇರಿ ಮಾತನಾಡಿ, ಶಿಶಿಕ್ಷು ಮೇಳಕ್ಕೆ ಸುಮಾರು ಒಂದು ಸಾವಿರ ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. 89 ಉದ್ಯೋಗದಾತರು ಮೇಳದಲ್ಲಿ ಭಾಗವಹಿಸಿದ್ದಾರೆ. ಕೌಶಲ್ಯ ಹೊಂದಿದ ಯುವಜನರಿಗೆ ಉದ್ಯೋಗ ಒದಗಿಸುವ ಪ್ರಯತ್ನ ಇದಾಗಿದೆ. ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಐಟಿಐ, ಜಿಟಿಟಿಸಿ ಸಂಸ್ಥೆಗಳ ಮೂಲಕ ಪ್ರತಿವರ್ಷ ಸುಮಾರು 3 ಸಾವಿರ ವಿದ್ಯಾರ್ಥಿಗಳು ಹೊರ ಬರುತ್ತಿದ್ದಾರೆ. ಅವರಿಗೆ ಉದ್ಯೋಗ ದೊರಕಿಸಲು ಇಂತಹ ಮೇಳಗಳನ್ನು ಪ್ರತಿವರ್ಷ ಆಯೋಜಿಸಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಭಾಗೀಯ ಶಿಶಿಕ್ಷು ಸಲಹೆಗಾರ, ಕೈಗಾರಿಕಾ ಮತ್ತು ತರಬೇತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಪಿ.ರಮೇಶ ಮಾತನಾಡಿ, ಒಂದು ದೇಶ ಒಂದು ಶಿಶಿಕ್ಷು ಮೇಳ ಎಂಬ ಧ್ಯೇಯದೊಂದಿಗೆ ದೇಶದ ಎಲ್ಲಾ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಇಂದು ಏಕಕಾಲದಲ್ಲಿ ಮೇಳಗಳು ನಡೆಯುತ್ತಿವೆ ಎಂದರು.
ಲಿಂಗಾಯತ ವಿದ್ಯಾಭಿವೃದ್ದಿ ಸಂಸ್ಥೆಯ ಉಪಾಧ್ಯಕ್ಷ ವಿ.ಬಿ.ಯಳಲಿ ಮಾತನಾಡಿದರು. ಎಲ್‌ಇಎ ಸಂಸ್ಥೆಯ ಎಸ್.ಎಂ.ಅಗಡಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಉಪನಿರ್ದೇಶಕ ಎನ್. ಎಂ. ಭೀಮಪ್ಪ, ಜಿಲ್ಲಾ ಸಹಾಯಕ ಶಿಶಿಕ್ಷು ಸಲಹೆಗಾರ ಈಶ್ವರಪ್ಪ ದ್ಯಾಮನಗೌಡ್ರ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿ.ಆರ್.ಘೋಡಕೆ ಸ್ವಾಗತಿಸಿದರು. ಮುಜಾವರ್ ನಿರೂಪಿಸಿದರು. ಸಂಜಯ್ ತ್ರಾಸದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.