ಹೃದಯವಂತಳಾದ ಕಮಲವ್ವ: ಬ್ರೈನ್ ಡೆಡ್ ಆಗಿದ್ದ ಮಹಿಳೆಯ ಅಂಗಾಂಗ ದಾನ
Team Udayavani, Jul 14, 2022, 4:21 PM IST
ಧಾರವಾಡ: ಬ್ರೈನ್ ಡೆಡ್ ಗೆ ಒಳಗಾಗಿದ್ದ ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಸಿಬ್ಬಂದಿ ಎತ್ತಿನಗುಡ್ಡದ ನಿವಾಸಿ ಕಮಲವ್ವ ಕೆಲಗೇರಿ (48) ಎಂಬ ಮಹಿಳೆಯು ಹೃದಯ ಕವಾಟವು ಸೇರಿದಂತೆ ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.
ಜು.12 ರಂದು ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಕಮಲವ್ವ ಅವರಿಗೆ ಉನ್ನತ ಚಿಕಿತ್ಸೆಗಾಗಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ವೈದ್ಯರ ನಿರಂತರ ಚಿಕಿತ್ಸೆ ಫಲಕಾರಿಯಾಗದ ಕಾರಣ ಜು.13 ರಂದು ಮೆದುಳು ನಿಷ್ಕಿಯಗೊಂಡಿದೆ ಎಂಬುದಾಗಿ ತಜ್ಞ ವೈದ್ಯರು ಧೃಡೀಕರಿಸಿದ್ದರು.
ಈ ದು:ಖ ಸಮಯದಲ್ಲಿ ಧೈರ್ಯ ತೆಗೆದುಕೊಂಡ ಕುಟುಂಬ ವರ್ಗದವರು ಕಮಲವ್ವ ಅವರ ದೇಹದ ಅಂಗಾಂಗಗಳನ್ನು ದಾನ ಮಾಡಲು ಸಮ್ಮತಿಸಿದ್ದಾರೆ. ಈ ಹಿನ್ನಲೆಯಲ್ಲಿ ಗುರುವಾರ (ಜು.14 ರಂದು) ಎಸ್‌ಡಿಎಂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆಯಲಾಯಿತು. ನಂತರ ಕರ್ನಾಟಕ ಕಸಿ ಪ್ರಾಧಿಕಾರದ ನಿಯಮದಂತೆ ಒಂದು ಕಿಡ್ನಿಯನ್ನು ಎಸ್‌ಡಿಎಂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಕಸಿ ಮಾಡಲಾಯಿತು.
ಮತ್ತೊಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್ ಇ ಆಸ್ಪತ್ರೆಗೆ ರವಾನಿಸಲಾಯಿತು. ಲಿವರ್‌ನ್ನು (ಯಕೃತ್) ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ನೀಡಲಾಯಿತು. ಮತ್ತು ಹೃದಯ ಕವಾಟವನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ನೀಡಲಾಯಿತು.
ಇದನ್ನೂ ಓದಿ:2002ರಲ್ಲಿ ಕೊಲೆ: ಗೋವಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿ ಬಂಧನ
ಕಿಡ್ನಿ ಕಸಿ ಮಾಡುವ ತಂಡದಲ್ಲಿ ಕ್ರಿಟಿಕಲ್ ಕೇರ್, ನೆಪ್ರೋಲಜಿ, ಯುರೋಲಜಿ, ಪ್ಲಾಸ್ಟಿಕ್ ಸರ್ಜರಿ, ಅನಸ್ತೇಶಿಯಾ ವಿಭಾಗದ ವೈದ್ಯರು ಮತ್ತು ಒ.ಟಿ ಟೆಕ್ನೀಷಿಯನ್, ನರ್ಸಿಂಗ್ ಹಾಗೂ ಪಿ.ಆರ್.ಓ ವಿಭಾಗದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಈ ಅಂಗಾಂಗಗಳನ್ನು ದಾನ ಮಾಡುವ ಪ್ರಕ್ರಿಯೆಯನ್ನು ಜೀವ ಸಾರ್ಥಕತೆಯು (ಕರ್ನಾಟಕ ಕಸಿ ಪ್ರಾಧಿಕಾರ ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಸರಕಾರ ಮತ್ತು ಎಸ್.ಡಿ.ಎಮ್ ಆಸ್ಪತ್ರೆಯ ಸಹಯೋಗದಲ್ಲಿ ನಡೆಸಲಾಯಿತು. ಎಸ್‌ಡಿಎಮ್ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತ್ವರಿತವಾಗಿ ಅಂಗಾಂಗಗಳನ್ನು ತಲುಪಿಸಲು ಗ್ರೀನ್ ಕಾರಿಡಾರ್ (ಸಂಪೂರ್ಣ ಟ್ರಾಫಿಕ್ ನಿಷೇಧಿತ ಮಾರ್ಗ) ವ್ಯವಸ್ಥೆ ಕಲ್ಪಿಸಲಾಯಿತು. ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಸಿಪಿಐ ಮಲ್ಲನಗೌಡ ನಾಯ್ಕರ್ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯವಸ್ಥಾಪಕರು ಮತ್ತು ಅಧಿಕಾರಿಗಳ ಸಹಕಾರ ಹಾಗೂ ಈ ಸಂಯೋಜನೆಗೆ ಎಸ್‌ಡಿಎಮ್ ವೈದ್ಯಕೀಯ ಮಹಾವಿದ್ಯಾಲಯದ ಉಪಕುಲಪತಿ ಡಾ| ನಿರಂಜನ ಕುಮಾರ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸಿದ್ದಾರೆ.
ಸಾವಿನಲ್ಲೂ ಸಾರ್ಥಕತೆ ಜತೆಗೆ ಸಮಾಜಕ್ಕೆ ಮಾದರಿಯಾದ ಕುಟುಂಬದವರ ಕಾರ್ಯಕ್ಕೆ ಎಸ್‌ಡಿಎಂ ವಿವಿಯ ಕುಲಪತಿ ಡಾ|ಡಿ.ವೀರೇಂದ್ರ ಹೆಗ್ಗಡೆ, ಉಪಕುಲಪತಿ ಡಾ|ನಿರಂಜನಕುಮಾರ, ಆಡಳಿತ ನಿರ್ದೇಶಕ ಸಾಕೆತ್ ಶೆಟ್ಟಿ, ವೈದ್ಯಕೀಯ ಅಧಿಕ್ಷಕ ಡಾ|ಕಿರಣ ಹೆಗ್ಡೆ ಸೇರಿದಂತೆ ಎಸ್‌ಡಿಎಂ ವೈದ್ಯಕೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ಸಮಸ್ತ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.