ಬಿಜೆಪಿ ಅಪಪ್ರಚಾರಕ್ಕೆ ಸಂಘಟಿತ ಪ್ರತ್ಯುತ್ತರ
Team Udayavani, Mar 6, 2017, 1:00 PM IST
ಹುಬ್ಬಳ್ಳಿ: ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯವರು ಮಾಡುತ್ತಿರುವ ಅಪಪ್ರಚಾರಕ್ಕೆ ನಾವು ಸಂಘಟಿತ ಪ್ರತ್ಯುತ್ತರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿ ರವಿವಾರ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಉತ್ತಮ ಆಡಳಿತ ನೀಡಲಾಗುತ್ತಿದೆ. ಆದರೆ ಬಿಜೆಪಿಯವರು ವಿನಾಕಾರಣ ರಾಜ್ಯ ಸರಕಾರದ ವಿರುದ್ಧ ಆರೋಪಕ್ಕೆ ಮುಂದಾಗಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎನ್ನುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟ ಹಾಗೂ ದೇಶಕ್ಕಾಗಿ ಕಾಂಗ್ರೆಸ್ ಸಾಕಷ್ಟು ತ್ಯಾಗ ಮಾಡಿದೆ. ಇವರೇನು ಮಾಡಿದ್ದಾರೆ ಎಂಬುದನ್ನು ಜನರ ಮುಂದಿಡಬೇಕಾಗಿದೆ ಎಂದರು.
ಇಷ್ಟು ದಿನಗಳ ಕಾಲ ಮಹಾತ್ಮಾ ಗಾಂಧೀಜಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದ ಕೆಲವರು, ಅಧಿಕಾರ ಬಂದ ಮೇಲೆ ಅವರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಭಗತಸಿಂಗ್, ಸುಖದೇವಸಿಂಗ್, ಚಂದ್ರಶೇಖರ ಆಜಾದ ಇವರಿಗೆ ಅವರಿಗೆ ಸಂಬಂಧವೇ ಇಲ್ಲ. ಆದರೆ ಅವರೆಲ್ಲರೂ ನಮ್ಮವರೇ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾ ತಿರುಗುತ್ತಾರೆ.
ಬಿಜೆಪಿಯವರು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿಗಳಾಗಿದ್ದು, ಅವರೆಂದೂ ಮುಸ್ಲಿಂರನ್ನು ನಂಬುವುದಿಲ್ಲ ಎಂದರು. ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತುರವ ಎಲ್ಲ ಷಡ್ಯಂತ್ರಗಳನ್ನು ಬಿಜೆಪಿಯವರು ನಡೆಸುತ್ತಿದ್ದಾರೆ. ಇದಕ್ಕೆ ನಾವೆಲ್ಲ ಸಂಘಟಿತ ಉತ್ತರ ನೀಡೋಣ.
ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಮಾಡಿರುವ ಸಾಧನೆ ಹಾಗೂ ಅಲ್ಪ ಸಂಖ್ಯಾತರಿಗೆ ನೀಡಿರುವ ಸೌಲಭ್ಯಗಳ ಕುರಿತು ಮನೆ-ಮನೆಗೆ ತೆರಳಿ ಪ್ರಚಾರ ಮಾಡಿ, ಜನರಲ್ಲಿ ಜಾಗೃತಿ ಮೂಡಿಸಿ. ಒಂದು ವರ್ಷದಲ್ಲಿ ಚುನಾವಣೆ ಬರಲಿದ್ದು ಅಷ್ಟರಲ್ಲಿ ಎಲ್ಲೆಡೆ ಪಕ್ಷದ ಸಂಘಟನೆ ಯಶಸ್ವಿಯಾಗಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ನಾಲ್ಕು ವರ್ಷದಲ್ಲಿ ನೀರಾವರಿಗಾಗಿ ಸುಮಾರು 60 ಸಾವಿರ ಕೋಟಿ ಹಣ ಬಳಕೆ ಮಾಡಿದೆ. 1 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ. ಒಂದು ಲಕ್ಷ ಕೃಷಿ ಹೊಂಡ ನಿರ್ಮಾಣದ ಗುರಿ ಹೊಂದಲಾಗಿದೆ, ರಾಜ್ಯದಲ್ಲಿ ನರೇಗಾ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಇದರಿಂದ ಇಂದು ಸಾವಿರಾರು ರೈತರು ಉದ್ಯೋಗ ಕಲ್ಪಿಸಿಕೊಂಡಿದ್ದಾರೆ.
ಪಕ್ಷದ ಕಾರ್ಯಕ್ರಮ, ಯೋಜನೆಗಳ ಕುರಿತು ಹೆಚ್ಚು ಪ್ರಚಾರ ಮಾಡಿ, ಇದಕ್ಕೆ ಬೇಕಾದರೆ ಎಲ್ಲ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳಿ ಎಂದರು. ಯುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಘಟಕಗಳಿದ್ದು ಅವುಗಳಿಗೆ ಉತ್ತೇಜನ ನೀಡಬೇಕಾಗಿದೆ.
ಆದರೆ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ನಲ್ಲಿಯೇ 5-6 ತಂಡಗಳಾಗಿವೆ. ಒಬ್ಬರನ್ನು ಕಂಡರೇ ಮತ್ತೂಬ್ಬರಿಗೆ ಆಗುವುದಿಲ್ಲ. ಈ ರೀತಿ ಗೊಂದಲಗಳಿಂದ ಸಂಘಟನೆಯಲ್ಲಿ ಹಿನ್ನೆಡೆಯಾಗುತ್ತಿದೆ. ಅಂದಿನ ಯುವ ಕಾಂಗ್ರೆಸ್‌ಗೂ ಇಂದಿನ ಯುವ ಕಾಂಗ್ರೆಸ್ ಗೂ ಅಜಗಜಾಂತರ ವ್ಯತ್ಯಾಸವಿದೆ. ಆದ್ದರಿಂದ ಕಾರ್ಯಾಧ್ಯಕ್ಷರು ಇತ್ತ ಗಮನ ಹರಿಸಿ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದರು.
ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಸಯೈದ್ ಅಹ್ಮದ್ ಹಾಗೂ ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ವೀರಣ್ಣ ಮತ್ತಿಕಟ್ಟಿ, ಎಂ.ಖಾದರ್, ಪ್ರೊ| ಐ.ಜಿ ಸನದಿ, ಎ.ಎಂ. ಹಿಂಡಸಗೇರಿ, ಡಾ| ಮಹೇಶ ನಾಲವಾಡ, ದೇವಕಿ ಯೋಗಾನಂದ, ದಾಕ್ಷಾಯಿಣಿ ಬಸವರಾಜ, ಇಸ್ಮಾಯಿಲ್ ತಮಟಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.