ಹುಬ್ಬಳ್ಳಿ ನೂತನ ನ್ಯಾಯಾಲಯ ಸಂಕೀರ್ಣ ದೇಶಕ್ಕೆ ಮಾದರಿ


Team Udayavani, Apr 19, 2017, 3:14 PM IST

hub5.jpg

ಹುಬ್ಬಳ್ಳಿ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಹುಬ್ಬಳ್ಳಿ ತಾಲೂಕು ನ್ಯಾಯಾಲಯಗಳ ಸಂಕೀರ್ಣದ ಕಟ್ಟಡ ಸಂಪೂರ್ಣ ಕೇಂದ್ರೀಕೃತ ಹವಾನಿಯಂತ್ರಿತ ವ್ಯವಸ್ಥೆ ಹೊಂದಲಿದ್ದು, ಇಂತಹ ಸೌಕರ್ಯ ಇರುವ ದೇಶದ ಮೊದಲ ನ್ಯಾಯಾಲಯ ಕಟ್ಟಡವಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ ಹೇಳಿದರು. 

ಮಂಗಳವಾರ ಇಲ್ಲಿನ ವಿದ್ಯಾನಗರದ ಎಂ. ತಿಮ್ಮಸಾಗರದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಮಾತನಾಡಿದ ಅವರು, 5 ಎಕರೆ 15 ಗುಂಟೆ ಜಾಗದಲ್ಲಿ ಅಂದಾಜು 129 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತಗಳಲ್ಲಿ ಸುಸುಜ್ಜಿತ ಕಟ್ಟಡವು 24525 ಚ.ಮೀ ವಿಸ್ತೀರ್ಣದಲ್ಲಿ ಬಿ+ಜಿ+5 ಅಂತಸ್ತು ಮಾದರಿಯಲ್ಲಿ ನಿರ್ಮಾಣವಾಗುತ್ತಿದೆ.

ಕಟ್ಟಡದ ಸಿವಿಲ್‌ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇಲೆಕ್ಟ್ರಿಕಲ್‌ ವರ್ಕ್‌, ಹೀಟಿಂಗ್‌ ವೆಂಟಿಲೇಟರ್‌ ಎಸಿ, ಲೈಟಿಂಗ್‌, ಕಟ್ಟಡ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಇನ್ನಿತರೆ ಕೆಲಸ ಬಾಕಿಯಿದೆ. ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಲು  ಗುತ್ತಿಗೆದಾರರಿಗೆ ಸಮಯ ನಿಗದಿ ಪಡಿಸಲಾಗಿದೆ ಎಂದರು. ಕಾಮಗಾರಿಯನ್ನು ಹೈದರಾಬಾದ್‌  ನ ಕೆಎಂವಿ ಪ್ರೊಜೆಕ್ಟ್ ಸಂಸ್ಥೆಯವರು ಕೈಗೆತ್ತಿಕೊಂಡಿದ್ದಾರೆ.

2014ರ ಮಾರ್ಚ್‌ನಲ್ಲಿ  ಆರಂಭವಾದ ಈ ಕಾಮಗಾರಿಯನ್ನು 2016ರಲ್ಲಿ ಮುಗಿಸಲು ಸೂಚಿಸಲಾಗಿತ್ತು. ಅದಕ್ಕಾಗಿ 1ನೇ ಹಂತದಲ್ಲಿ 75 ಕೋಟಿ ರೂ. ಬಿಡುಗಡೆಯಾಗಿತ್ತು. ಕೇಂದ್ರೀಕೃತ ಎಸಿ ಸೇರಿಸಿದ ಮೇಲೆ ಪರಿಷ್ಕೃತವಾಗಿ 98 ಕೋಟಿ ರೂ. ಆಯಿತು. 20 ಕೋರ್ಟ್‌ ಹಾಲ್‌, ಕಕ್ಷಿದಾರರ ವಿಶ್ರಾಂತಿ ಕೊಠಡಿ ಮತ್ತು ಕುಳಿತುಕೊಳ್ಳಲು ಸ್ಥಳ, ವಿಶಾಲವಾದ ವಾಹನ ನಿಲುಗಡೆ ಸೌಲಭ್ಯ ಸೇರಿದಂತೆ ಇನ್ನಿತರೆ ಎಲ್ಲ ಸೌಕರ್ಯ ಸಂಕೀರ್ಣದಲ್ಲಿದೆ.

1ನೇ ಹಂತದ ಕಾಮಗಾರಿ ಪೂರ್ಣಗೊಂಡಿದೆ. 2ನೇ ಹಂತದಲ್ಲಿ 24 ಕೋಟಿ ರೂ. ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿ ವಕೀಲರ ಸಂಘದ ಕಟ್ಟಡವನ್ನು ಈಗ ನಿರ್ಮಿಸಲಾದ ಕ್ಯಾಂಟೀನ್‌ ಕಟ್ಟಡದ ಮೇಲೆ ನಿರ್ಮಿಸಲಾಗುವುದು. ಅದಕ್ಕಾಗಿ 9 ಕೋಟಿ ರೂ. ಅಂದಾಜು ಪತ್ರಿಕೆ ಸಿದ್ಧಪಡಿಸಲಾಗಿದೆ.

ಕೋರ್ಟ್‌ ಸಂಕೀರ್ಣ ಜೊತೆ ವಕೀಲರ ಸಂಘವು ಉದ್ಘಾಟನೆಗೊಂಡರೆ ಪರಿಪೂರ್ಣ ನ್ಯಾಯಾಲಯ ಸಂಕೀರ್ಣವಾಗಲಿದೆ. ಆದಷ್ಟು ಬೇಗ ಕಟ್ಟಡ ಉದ್ಘಾಟನೆಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ನ್ಯಾಯಾಧೀಶರೊಂದಿಗೆ ಸಮಾಲೋಚನೆ ಮಾಡಲಾಗುವುದು. ಉದ್ಘಾಟನೆ ದಿನ ನಿಗದಿಗೆ ಮುಂದಾಗಲಾಗುವುದು ಎಂದರು. 

ಟಾಪ್ ನ್ಯೂಸ್

1-udu

Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ

1-BINIL

Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Alnavar: ಬೈಕ್ – ಕಾರು ಅಪಘಾತ; ಬೈಕ್ ಸಹಸವಾರ ಸಾವು

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Dharwad: Seven children sick after eating audala fruit: Admitted to district hospital

Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mahakumbaha1

Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ

1-udu

Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ

1-palak

ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್‌

suicide (2)

Kota ಸರಣಿ ಸುಸೈ*ಡ್‌ ಬೆನ್ನಲ್ಲೇ ಐಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹ*ತ್ಯೆ!

1-BINIL

Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.