ಅವರ್‌ ಲೇಡಿ ಆಫ್ ಲೂಡ್ಸ್‌ ಚರ್ಚ್‌ ಉದ್ಘಾಟನೆ

• ಪ್ರತಿಯೊಬ್ಬರಲ್ಲೂ ಕ್ರಿಸ್ತರನ್ನು ಕಾಣಬೇಕು •ಪ್ರತಿಯೊಬ್ಬರನ್ನೂ ಗೌರವಿಸಬೇಕು • ಭಗವಂತನ ಪ್ರಾರ್ಥಿಸಲು ಪ್ರಾರ್ಥನಾ ಮಂದಿರ ಬೇಕು

Team Udayavani, May 3, 2019, 10:23 AM IST

hubali-3-tdy..

ಹುಬ್ಬಳ್ಳಿ: ಇಲ್ಲಿನ ಮಂಟೂರ ರಸ್ತೆಯಲ್ಲಿ ಕ್ಯಾಥೋಲಿಕ್‌ ಸಮುದಾಯದ ನೂತನ 'ಅವರ್‌ ಲೇಡಿ ಆಫ್‌ ಲೂಡ್ಸ್‌' ಚರ್ಚ್‌

ಹುಬ್ಬಳ್ಳಿ: ಇಲ್ಲಿನ ಮಂಟೂರ ರಸ್ತೆಯ ಮಿಲ್ಲತ್‌ ನಗರ ಸಮೀಪ ಕ್ಯಾಥೋಲಿಕ್‌ ಸಮುದಾಯದ ನೂತನ ‘ಅವರ್‌ ಲೇಡಿ ಆಫ್‌ ಲೂಡ್ಸ್‌’ ಚರ್ಚ್‌ ಉದ್ಘಾಟನೆ ಗುರುವಾರ ನಡೆಯಿತು.

ಕಾರವಾರ ಬಿಷಪ್‌ ಮೊಸ್ಟ್‌ ರೆವರೆಂಡ್‌ ಡೆರೆಕ್‌ ಫರ್ನಾಂಡಿಸ್‌ ಚರ್ಚ್‌ ಉದ್ಘಾಟಿಸಿ ಮಾತನಾಡಿ, ನಾವು ಪ್ರತಿಯೊಬ್ಬರಲ್ಲೂ ಕ್ರಿಸ್ತರನ್ನು ಕಾಣಬೇಕು. ಪ್ರತಿಯೊಬ್ಬರನ್ನೂ ಗೌರವಿಸಬೇಕು ಎಂದರು.

ಭಗವಂತನ ಪ್ರಾರ್ಥನೆ ಮಾಡಲು ಪ್ರಾರ್ಥನಾ ಮಂದಿರ ಅವಶ್ಯಕತೆಯಿದೆ. ನಮ್ಮ ಮನಸ್ಸಿನ ದುಃಖಗಳನ್ನು ದೇವನ ಮುಂದೆ ಹೇಳಿಕೊಳ್ಳಲು ಪಾಪಗಳನ್ನು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಪ್ರಾರ್ಥನಾ ಮಂದಿರಗಳು ಬೇಕು ಎಂದರು.

ಕೆಲವರು ದೇವರನ್ನು ಗುಡ್ಡಗಳಲ್ಲಿ ಹುಡುಕಿದರು, ಇನ್ನೂ ಕೆಲವರು ಗುಡುಗು-ಮಿಂಚುಗಳಲ್ಲಿ ಹುಡುಕಿದರು. ಹಲವರು ದಟ್ಟ ಕಾಡಿನಲ್ಲಿ ಹುಡುಕಿದರು. ಆದರೆ ಎಲ್ಲೂ ದೇವರು ಸಿಗಲಿಲ್ಲ. ಆದರೆ ಮನೆಯ ಕೋಣೆಯಲ್ಲಿ ಏಕಾಂಗಿಯಾಗಿ ಕುಳಿತು ಕೈಜೋಡಿಸಿ ತಲೆ ತಗ್ಗಿಸಿ ಕುಳಿತರೆ ದಯಾಮಯ ದೇವರು ನಮ್ಮೊಂದಿಗೆ ಮಾತನಾಡುತ್ತಾನೆ ಎಂದರು.

ಕ್ರಿಸ್ತನ ಪವಿತ್ರ ಪೆಟ್ಟಿಗೆ ಹಾಗೂ ಕ್ರಿಸ್ತ ಪ್ರಾಣ ತ್ಯಾಗ ಮಾಡಿದ ಶಿಲುಬೆ ನಮಗೆ ಪವಿತ್ರ. ಶಿಲುಬೆಯ ಮೇಲೆ ತಮ್ಮನ್ನು ಸಮರ್ಪಿಸಿಕೊಂಡ ಸಂದರ್ಭದಲ್ಲಿಯೂ ಏಸು ಕ್ರಿಸ್ತ, ಎಲ್ಲರ ಒಳಿತನ್ನು ಬಯಸಿದಂಥ ಮಹಾನುಭಾವರು ಎಂದು ಅಭಿಪ್ರಾಯಪಟ್ಟರು.

ನಾವೆಲ್ಲರೂ ಪವಿತ್ರಾತ್ಮನ ದೇಗುಲಗಳು. ನಮ್ಮೆಲ್ಲರ ಹೃದಯಗಳಲ್ಲಿ ಪರಮಾತ್ಮ ವಾಸ ಮಾಡುತ್ತಿದ್ದಾರೆಂಬ ನಂಬಿಕೆ ನಮ್ಮಲ್ಲಿರಬೇಕು. ನಾವೆಲ್ಲರೂ ಪವಿತ್ರಾತ್ಮರಾಗಿದ್ದರೆ, ನಮ್ಮದು ಪವಿತ್ರಾತ್ಮಭರಿತ ಸಮುದಾಯವಾಗುತ್ತದೆ ಎಂದರು.

ದೇವರು ನಮ್ಮೆಲ್ಲರಲ್ಲಿಯೂ ಇದ್ದಾರೆ. ಪ್ರಾರ್ಥನೆ ಇದ್ದಲ್ಲಿ ವಾಸ ಮಾಡುವುದಾಗಿ ಏಸುಕ್ರಿಸ್ತರೇ ಹೇಳಿದ್ದಾರೆ. ದೇವರ ಬಗ್ಗೆ ನಂಬಿಕೆ ಇದ್ದರೆ ಮಾತ್ರ ದೇವಾಲಯ ಕಟ್ಟಿದ್ದು ಸಾರ್ಥಕವಾಗುತ್ತದೆ ಎಂದು ನುಡಿದರು.

ಬೆಳಗಾವಿ ಡಯಾಸಿಸ್‌ ಆಡಳಿತಾಧಿಕಾರಿ ಇಜಿಬಿಯಾ ಫರ್ನಾಂಡಿಸ್‌, ರೆ.ಫಾ. ಹೆನ್ರಿ ಥಾಮಸ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.