ಕಳಪೆ ಕಾಮಗಾರಿಗೆ ಆಕ್ರೋಶ
ತಹಶೀಲ್ದಾರ್ ವಿರುದ್ಧ ಹರಿಹಾಯ್ದ ತಾಪಂ ಸದಸ್ಯರು
Team Udayavani, Sep 22, 2019, 9:21 AM IST
ಕುಂದಗೋಳ: ಸರ್ಕಾರಿ ಕಾರ್ಯಕ್ರಮಕ್ಕೆ ನಮ್ಮನ್ನು ಏಕೆ ಕರೆಯುತ್ತಿಲ್ಲ ಎಂದು ತಾಪಂ ಸರ್ವ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಭೂ ಸೇನಾ ನಿಗಮ ಕೈಗೊಂಡ ಕಾಮಗಾರಿ ಕಳಪೆಯಿಂದ ಕೂಡಿದ್ದು, ಅವಧಿಗೆ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಭೂ ಸೇನಾ ನಿಗಮದ ಅಧಿ ಕಾರಿ ಲಕ್ಷ್ಮಣ ನಾಯ್ಕ ತಮ್ಮ ಇಲಾಖೆ ವರದಿ ವಿವರಿಸುತ್ತಿರುವಾಗ ಗುಡಗೇರಿ ಸದಸ್ಯ ಬಸನಗೌಡ ಕರೇಹೊಳಪ್ಪಗೌಡ್ರ ಮಧ್ಯ ಪ್ರವೇಶಿಸಿ ಗುಡಗೇರಿಯಲ್ಲಿ ನಿರ್ಮಿಸಿದ ಪಶು ಚಿಕಿತ್ಸಾಲಯವು ಉದ್ಘಾಟನೆ ಪೂರ್ವದಲ್ಲಿಯೇ ಬಿರುಕು ಬಿಟ್ಟಿದೆ. ನೆಲಕ್ಕೆ ಹಾಕಿದ ಟೈಲ್ಸ್ ಕೀಳುತ್ತಿವೆ ಎಂದು ಕಿಡಿಕಾರಿದರು. ತಹಶೀಲ್ದಾರ್ ಬಸವರಾಜ ಮೆಳವಂಕಿ ಮಾತನಾಡಿ, ಮಳೆ ಹಾನಿಯಿಂದ ಒಟ್ಟು 3 ಸಾವಿರ 2 ನೂರಾ 14 ಮನೆ ಹಾನಿಗೊಂಡಿದ್ದು, ಇದರಲ್ಲಿ 2 ಸಾವಿರ 8 ನೂರಾ 12 ಮನೆ ಹಾನಿಗೊಳಗಾದವರಿಗೆ ಜಿಪಿಎಸ್ ಮಾಡಲಾಗಿದೆ.
ಇನ್ನೂ 402 ಮನೆ ಮಾಲೀಕರು ನೀಡಿರುವ ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿ ದೋಷ ಇರುವುದರಿಂದ ಜಿಪಿಎಸ್ ಮಾಡಲಾಗಿಲ್ಲ. ಇನ್ನೂ 316 ಮನೆ ಬಿದ್ದವರು ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದು, ಇವರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.
ಪಶು ಇಲಾಖೆ ಅ ಧಿಕಾರಿ ಡಾ| ಮುಲ್ಕಿ ಪಾಟೀಲ ತಮ್ಮ ಇಲಾಖೆ ವರದಿಯನ್ನು ಮಂಡಿಸುತ್ತಿರುವಾಗ ಪಶುಭಾಗ್ಯ ಯೋಜನೆಯಡಿಯಲ್ಲಿ ನಮಗೂ ಸಹ 5 ಫಲಾನುಭವಿಗಳನ್ನು ಆಯ್ಕೆ ಮಾಡಲು ಹಕ್ಕು ನೀಡಿ ಎಂದು ಕೇಳಿದಾಗ ಇದಕ್ಕೆ ಶಾಸಕರೇ ಅಧ್ಯಕ್ಷರಾಗಿರುತ್ತಾರೆ. ಅವರ ಗಮನಕ್ಕೆ ತಿಳಿಸುವುದಾಗಿ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತಮ್ಮ ಇಲಾಖೆ ವರದಿ ಮಂಡಿಸುತ್ತಿರುವಾಗ ಅಧ್ಯಕ್ಷೆ ರಾಧಿಕಾ ಮೈಸೂರ ಮಧ್ಯ ಪ್ರವೇಶಿಸಿ ತರ್ಲಘಟ್ಟ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಮಕ್ಕಳ ಮೇಲೆ ಹಲ್ಲೆ ಮಾಡಿದವರಾರು ಎಂದು ಪ್ರಶ್ನಿಸಿದಾಗ ತಬ್ಬಿಬ್ಬುಗೊಂಡ ಅಧಿಕಾರಿ ನನ್ನ ಗಮನಕ್ಕೆ ಬಂದಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದರಿಂದ ಸದಸ್ಯರು ಆಕ್ರೋಶಗೊಂಡರು. ಶಿಕ್ಷಣ ಇಲಾಖೆ ಹಾಗೂ ಲೋಕೊಪಯೋಗಿ ಇಲಾಖೆ ಜಿಲ್ಲಾ ಪಂಚಾಯತಿ ಅ ಧಿಕಾರಿಗಳು ಮಳೆಯಿಂದ ಹಾನಿ ಆಗಿರುವುದರ ಬಗ್ಗೆ ವಿವರಿಸಿದರು. ತಾಪಂ ಉಪಾಧ್ಯಕ್ಷೆ ಕುಸುಮವ್ವ ಕಲ್ಲಣ್ಣವರ, ತಾಪಂ ಇಒ ಎಮ್.ಎಸ್. ಮೇಟಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.