ಶತಮಾನಗಳಿಂದ ಛಾಪು ಬಿಟ್ಟು ಕೊಡದ ಮೈಸೂರು ಸ್ಯಾಂಡಲ್ ಉತ್ಪನ್ನ
Team Udayavani, Mar 4, 2017, 2:53 PM IST
ಹುಬ್ಬಳ್ಳಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಮೈಸೂರು ಸ್ಯಾಂಡಲ್ ಸೋಪ್ ತನ್ನದೇಯಾದ ಗುಣಮಟ್ಟ ಕಾಯ್ದುಕೊಂಡು ಬಂದಿದ್ದು, ಶತಮಾನಗಳಿಂದ ತನ್ನ ಛಾಪು ಬಿಟ್ಟು ಕೊಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಇಲ್ಲಿನ ದೇಶಪಾಂಡೆ ನಗರದ ಗುಜರಾತ ಭವನದಲ್ಲಿ ಕರ್ನಾಟಕ ಸಾಬೂನು ನಿಗಮ ಆಯೋಜಿಸಿರುವ 11 ದಿನಗಳ ಸಾಬೂನು ಮೇಳವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇನ್ನುಳಿದ ಕಂಪೆನಿಗಳು ರಾಸಾಯನಿಕ ಬಳಸಿ ಸಾಬೂನುಗಳನ್ನು ಉತ್ಪಾದಿಸುತ್ತಿದೆ. ಕರ್ನಾಟಕ ಸಾಬೂನು ನಿಗಮ ಕಳೆದ 2-3 ವರ್ಷಗಳಿಂದ ನೈಸರ್ಗಿಕ, ಸಾವಯವ ಉತ್ಪನ್ನಗಳನ್ನು ಉತ್ಪಾದಿಸುತ್ತಿದೆ. ನಗರದಲ್ಲಿ ಪ್ರತಿವರ್ಷ ಮೇಳ ಆಯೋಜಿಸುವ ಮೂಲಕ ಜನರಿಗೆ ಶೇ. 10ರಿಂದ 20ರಷ್ಟು ರಿಯಾಯ್ತಿ ದರದಲ್ಲಿ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಕರ್ನಾಟಕ ಸಾಬೂನು ನಿಗಮ ನಷ್ಟದಿಂದ ಹೊರ ಬಂದು ಲಾಭದತ್ತ ಸಾಗುತ್ತಿರುವುದು ಹೆಮ್ಮೆಯ ವಿಷಯ. ತಾನು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿದರೆ ಲಾಭ ಹೊಂದಬಹುದು. ಇದಕ್ಕೆ ಬಾಬಾ ರಾಮದೇವ ಅವರೇ ಸಾಕ್ಷಿ.
ಅವರು ಮಾರಕಟ್ಟೆಯಲ್ಲಿ ತಮ್ಮ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಮಾರಾಟ ಮಾಡುವ ಮೂಲಕ ಬಹು ರಾಷ್ಟ್ರೀಯ ಕಂಪೆನಿಗಳ ಉತ್ಪನ್ನಗಳಿಗೆ ಹೊಡೆತ ಕೊಡುತ್ತಿದ್ದಾರೆ. ಅದನ್ನು ನೋಡಿಕೊಂಡು ನಾವು ಮುಂದುವರಿಯಬೇಕು ಎಂದರು. ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಹಾಪೌರ ಮಂಜುಳಾ ಅಕ್ಕೂರ, ಮಾಜಿ ಸಂಸದ ಪ್ರೊ|ಐ.ಜಿ. ಸನದಿ,
ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಲೀನಾ ಮಿಸ್ಕಿನ್, ನಿಗಮದ ಸಹಾಯಕ ಪ್ರಧಾನ ವ್ಯವಸ್ಥಾಪಕ ಅನಿಲ ರಾಮಪಾಲ್, ಮಾರುಕಟ್ಟೆ ವ್ಯವಸ್ಥಾಪಕರಾದ ಶ್ರೀನಿವಾಸ ರೆಡ್ಡಿ, ಉಳ್ಳಯ್ಯ ಮೊದಲಾದವರಿದ್ದರು. ಸಾಬೂನು ಮೇಳದಲ್ಲಿ ಸಾಬೂನು, ಮಾರ್ಜಕ, ಸೌಂದರ್ಯವರ್ಧಕ, ಅಗರಬತ್ತಿ ಸೇರಿದಂತೆ ಸುಮಾರು 38 ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿವೆ. ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆವರೆಗೆ ಮೇಳ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.