ಹಕ್ಕುಪತ್ರ ದೊರಕಿಸಲು ಯತ್ನ: ಶ್ರೀನಿವಾಸ
Team Udayavani, Feb 7, 2017, 12:54 PM IST
ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ಸರಕಾರದಿಂದ ಕೊಳಗೇರಿ ನಿವಾಸಿಗಳಿಗೆಲ್ಲ ಹಕ್ಕುಪತ್ರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ಮೂರುಸಾವಿರ ಮಠ ಹಿಂಭಾಗದ ಜಿ ಅಡ್ಡಾದಲ್ಲಿ ಗುರುದತ್ತ ಸೇವಾ ಮಂಡಳದಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಭಾಗವನ್ನು 1977ರಲ್ಲೆ ಕೊಳಚೆ ಪ್ರದೇಶವೆಂದು ಘೋಷಿಸಲಾಗಿತ್ತು. ಆದರೆ 41 ವರ್ಷಗಳಿಂದ ಈ ಭಾಗದ ನಿವಾಸಿಗಳಿಗೆ ಪರಿಚಯ ಪತ್ರ ನೀಡಿರಲಿಲ್ಲ.
ಇದರಿಂದಾಗಿ ಸ್ಥಳೀಯ ಜನರಲ್ಲಿ ಅಭದ್ರತೆಯ ಆತಂಕ ಮೂಡಿತ್ತು. ಆದರೆ ಇಲ್ಲಿನ ಜನರ ಕಷ್ಟಗಳನ್ನು ಅರಿತ ಯುವ ಮುಖಂಡ ಪ್ರಕಾಶ ಬುರಬುರೆ ಕಳೆದ 3 ವರ್ಷಗಳಿಂದ ಎಲ್ಲ ನಿವಾಸಿಗಳ ಮನೆ-ಮನೆಗೆ ತೆರಳಿ ಈ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಜನರಲ್ಲಿದ್ದ ಅಭದ್ರತೆಯ ಭಯ ನಿವಾರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ.
ಇದರ ಪರಿಣಾಮವಾಗಿ ಹಾಗೂ ಸತತ ಪ್ರಯತ್ನದ ಫಲವಾಗಿ ನಿವಾಸಿಗಳಿಗೆ ಪರಿಚಯ ಪತ್ರ ನೀಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಸೇವಾ ಮಂಡಳದಿಂದ ಪ್ರಕಾಶ ಬುರಬುರೆ ಅವರನ್ನು ಸನ್ಮಾನಿಸಲಾಯಿತು. ಎಂ.ವಿ. ಹಬೀಬ, ರಾಜೇಸಾಬ ಪಿಂಜಾರ, ಮುತವಲ್ಲಿ ಮೆಹಬೂಬಸಾಬ ಗಬ್ಬೂರ, ಭೀಮಣ್ಣ ಕಲಬುರ್ಗಿ, ಮೋಹನಸಾ ಕಠಾರೆ, ಲಕ್ಷ್ಮಣಸಾ ಕಾಟೀಕರ, ಸಂಜು ಸಾಠೆ, ಪ್ರಕಾಶ ಹಬೀಬ, ಎಸ್.ಆರ್. ಕಂಪ್ಲಿ, ಗಡ್ಡಾಪುರಮಠ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.