ಕೆರೂರಿನಲ್ಲಿ ಅರೆ ಸೇನಾ ಪಡೆಯಿಂದ ಪಥ ಸಂಚಲನ
Team Udayavani, Apr 18, 2018, 5:47 PM IST
ಕೆರೂರ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೂಕ್ಷವಾಗಿ ಶಾಂತಿ, ಸುವ್ಯವಸ್ಥೆ ನಿರ್ವಹಣೆ, ರಕ್ಷಣೆ ನೀಡಲು ಆಗಮಿಸಿರುವ ಕೇಂದ್ರದ ಅರೆ ಸೇನಾ ಪಡೆಯ ಸುಮಾರು 60 ಹೆಚ್ಚು ಯೋಧರು ಮತ್ತು ಸ್ಥಳೀಯ ಪೊಲೀಸರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಯಿತು.
ಪೊಲೀಸ್ ಠಾಣೆಯ ಆವರಣದಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಗುಂಟ ಮೇಗಾಡಿ, ಹೊಸಪೇಟೆ, ಕಿಲ್ಲಾಪೇಟೆ ಹಳಪೇಟೆ ಹಾಗೂ ಬಸ್ ನಿಲ್ದಾಣ ಮುಂತಾದ ಪ್ರಮುಖ ಪ್ರದೇಶಗಳ ರಸ್ತೆಗಳಲ್ಲಿ ಯೋಧರು, ಪೊಲೀಸರು ಶಿಸ್ತಿನ ಪಥ ಸಂಚಲನದಿಂದ ನ್ಯಾಯ ಸಮ್ಮತ ಚುನಾವಣೆಗೆ ರಕ್ಷಣೆಗೆ ನಾವಿದ್ದೇವೆ ಎಂಬ ಸಂದೇಶ ಬೀರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಬಾದಾಮಿ ಸರ್ಕಲ್ ಇನ್ಸಪೆಕ್ಟರ್ ಕೆ.ಎಸ್. ಹಟ್ಟಿ, ಕೆರೂರ ಹೋಬಳಿ ಪ್ರದೇಶ ಬಾದಾಮಿ ಮತ್ತು ಬೀಳಗಿ (ಗ್ರಾಮೀಣ) ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹರಿದು ಹಂಚಿ ಹೋಗಿದ್ದು ಚುನಾವಣೆ ಕಾಲಕ್ಕೆ ಸೂಕ್ತ ರಕ್ಷಣೆಗಾಗಿ ಅರೆಸೇನಾ ಪಡೆ ಯೋಧರು ಆಗಮಿಸಿದ್ದಾರೆ ಎಂದರು. ಪಿಎಸ್ಐ ಧರ್ಮಾಕರ ಧರ್ಮಟ್ಟಿ, ಎಎಸ್ಐ ಐ.ಎಂ. ಹಿರೇಗೌಡ್ರ, ಎನ್. ಎಸ್. ಹೊಸಮನಿ, ಎನ್.ಎಸ್. ಸೀಮಾಣಿ ಹಾಗೂ ಪೊಲೀಸ್ ಪೇದೆಗಳು ಭಾಗವಹಿಸಿದ್ದರು.
ಮಹಾಲಿಂಗಪುರ: ಮೇ 12ರ ವಿಧಾನಸಭಾ ಚುನಾವಣೆಯ ನಿಮಿತ್ತ ಅರೆ ಸೇನಾ ಪಡೆ ಮತ್ತು ಪೊಲೀಸರಿಂದ ಪಟ್ಟಣದಲ್ಲಿ ಪಥ ಸಂಚಲನ ನಡೆಯಿತು.
ಜಮಖಂಡಿ ಡಿವೈಎಸ್ಪಿ ರಾಮನಗೌಡ ಹಟ್ಟಿ ಮಾತನಾಡಿ, ಚುನಾವಣೆಯಲ್ಲಿ ನಿರ್ಭಯವಾಗಿ ಸಾರ್ವಜನಿಕರು ಮತದಾನ ಮಾಡುವಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಯಾರು ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪಟ್ಟಣದ ಪ್ರತಿಯೊಂದು ಬೂತ್ನಲ್ಲಿ ಅಗತ್ಯ ಸಿಬ್ಬಂದಿ ನಿಯೋಜನೆ ಮೂಲಕ ನಿರಾತಂಕವಾಗಿ ಮತದಾನ ನಡೆಯಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು. ಪಥ ಸಂಚಲನವು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಪ್ರಾರಂಭವಾಗಿ ಪಟ್ಟಣದಾದ್ಯಂತ ಪಥ ಸಂಚಲನ ನಡೆಸಲಾಯಿತು. ಪಿಎಸೈ ರವಿಕುಮಾರ ಧರ್ಮಟ್ಟಿ, ಸಿಪಿಐ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.