ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಿ: ಡಾ| ಪಾಟೀಲ
Team Udayavani, Dec 4, 2019, 11:16 AM IST
ಧಾರವಾಡ: ಇಂದು ರೈತರಿಗೆ ಬೇಕಾದದ್ದು ಬೆಂಬಲ ಬೆಲೆ ಅಲ್ಲ, ಬದಲಾಗಿ ವೈಜ್ಞಾನಿಕ ಬೆಲೆ ನೀತಿ ಎಂದು ಹಿರಿಯ ಚಿಂತಕ, ಹೋರಾಟಗಾರ ಡಾ| ಸಿದ್ದನಗೌಡ ಪಾಟೀಲ ಹೇಳಿದರು.
ಕವಿಸಂನಲ್ಲಿ ದಿ| ಬಸಪ್ಪ ಮುಂದಿನಮನಿ ಸ್ಮರಣೆ ದತ್ತಿ ಅಂಗವಾಗಿ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ “ಕೃಷಿ ಬಿಕ್ಕಟ್ಟು ಹಾಗೂ ಪರಿಹಾರ‘ ಎಂಬ ವಿಷಯ ಕುರಿತು ಅವರು ಮಾತನಾಡಿದರು. ಇಂದು ಕಾರ್ಪೊರೇಟ್ ಕಂಪನಿಗಳು ಲಾಭ ಗಳಿಕೆಯೇ ಮೂಲ ಗುರಿ ಹೊಂದಿವೆ. ಸಬ್ಸಿಡಿ ಕಡಿತ,ರಫ್ತು ಉತ್ತೇಜನ ನೀತಿಯಿಂದ ರೈತರ ಬದುಕು
ದಿವಾಳಿಯಾಗುತ್ತಿದೆ. ರೈತರಿಗೆ ಸರ್ಕಾರ ಬೆಂಬಲ ಬೆಲೆ ನೀಡಿದ್ದು, ಮಾರುಕಟ್ಟೆ ಬೆಲೆಗಿಂತ ಕಡಿಮೆ ಇದೆ. 1991ರ ನವ ಆರ್ಥಿಕ ನೀತಿ ಕೃಷಿ ಬಿಕ್ಕಟ್ಟಿಗೆ ಮಾರಕವಾಗಿದೆ. ಹೀಗಾಗಿ ರೈತ ಪ್ರಜ್ಞೆ ಬಂದಾಗ ಮಾತ್ರ ಕೃಷಿ ಬಿಕ್ಕಟ್ಟು ಪರಿಹಾರವಾಗಬಲ್ಲದು ಎಂದರು.
ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ಗ್ರಾಮೀಣ ಪ್ರದೇಶದ ಯುವಕರು ಕೃಷಿಯಿಂದ ವಿಮುಖರಾಗುತ್ತಿರುವುದು ಕಳವಳಕಾರಿ. ಸರ್ಕಾರ ಸಮಾಜವಾದಿ ತತ್ವದಡಿಯಲ್ಲಿ ಭೂಸುಧಾರಣೆ ಜಾರಿಗೆ ತಂದರೂ ಅದು ಸಮರ್ಪಕವಾಗಿಲ್ಲ. ಹವಾಮಾನ ವೈಪರಿತ್ಯವೂ ಸಹ ಭವಿಷ್ಯದಲ್ಲಿ ಕೃಷಿಗೆ ಮಾರಕವಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಧಾರವಾಡ ಲಾ ಅಕಾಡೆಮಿ ಅಧ್ಯಕ್ಷ ಕೆ.ಬಿ. ನಾವಲಗಿಮಠ ಮಾತನಾಡಿ, ಇಂದು ಕೃಷಿ ಉತ್ಪಾದನಾ ವೆಚ್ಚ ಅಧಿಕಗೊಂಡು ಉತ್ಪನ್ನಗಳ ಬೆಲೆ ಕುಂಠಿತವಾಗಿದ್ದಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಲಿವೆ. ಗಾಂಧೀಜಿಯವರ ಗ್ರಾಮಸ್ವರಾಜದ ಕನಸು ನನಸಾದಾಗ ಕೃಷಿ ಬಿಕ್ಕಟ್ಟಿಗೆ ಪರಿಹಾರವಾಗಬಲ್ಲದು ಎಂದರು.
ದಿ| ಬಸಪ್ಪ ಶಿ. ಮುಂದಿನಮನಿ ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸಲಾಯಿತು. ಶಿವಣ್ಣ ಬೆಲ್ಲದ, ದತ್ತಿದಾನಿ ಸದಾನಂದ ಮುಂದಿನಮನಿ ಇದ್ದರು. ಪ್ರಕಾಶ ಉಡಿಕೇರಿ ಸ್ವಾಗತಿಸಿದರು. ಕೃಷ್ಣ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಪ್ರಶಾಂತ ಕುಲಕರ್ಣಿ ಪ್ರಾರ್ಥಿಸಿದರು. ಶಾಂತೇಶ ಗಾಮನಗಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.