ಶ್ರಮಪಟ್ಟು ದುಡಿದರೆ ನೆಮ್ಮದಿ
Team Udayavani, May 4, 2018, 5:26 PM IST
ಗದಗ: ಕಾರ್ಮಿಕರು ಪರಿಶ್ರಮ ಜೀವಿಗಳು. ಅವರ ಮನಃಪೂರ್ವಕ, ಪ್ರಾಮಾಣಿಕ ಹಾಗೂ ನಿಸ್ವಾರ್ಥವಾಗಿ ಮಾಡುವ ಶ್ರಮಕ್ಕೆ ಪರಮಾತ್ಮನ ಆಶೀರ್ವಾದ ದೊರಕುತ್ತದೆ ಎಂದು ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ಅಕ್ಕನವರು ಹೇಳಿದರು. ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಕಾರ್ಮಿಕನ ಮನಸ್ಸು ಆರೋಗ್ಯ ಪೂರ್ಣವಾಗಿರುವುದರ ಜೊತೆಗೆ ಶರೀರವು ಆರೋಗ್ಯ ಪೂರ್ಣವಾಗಿರುತ್ತದೆ. ಶ್ರಮಪಟ್ಟು ಕೆಲಸ ಮಾಡುವುದರಿಂದ ಕಾರ್ಮಿಕ ರೋಗ ಮುಕ್ತನಾಗಿರುತ್ತಾನೆ. ಅದರೊಂದಿಗೆ ಅವರ ಮನಸ್ಸು ಯೋಗಯುಕ್ತವಾಗಿರಬೇಕು ಎಂದು ಹೇಳಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಶ್ರಮಪಟ್ಟು ದುಡಿಯುವವರಿಗೆ ರಾಜಯೋಗದ ಅಭ್ಯಾಸದಿಂದ ಆಂತರಿಕ ಶಕ್ತಿ ಮತ್ತು ನೆಮ್ಮದಿ ವೃದ್ಧಿಸುತ್ತದೆ. ಕಾರ್ಮಿಕರೊಂದಿಗೆ ಮಾಲೀಕರು ಗೌರವ ಮತ್ತು ಪ್ರೀತಿಯಿಂದ ನಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಮಿಕ ಶೇಖರಪ್ಪ ರೇವಡಿಹಾಳ, ಕಾರ್ಮಿಕ ಈರಪ್ಪ ಬೇಲೇರಿ ಮಾತನಾಡಿ, ಲಕ್ಕುಂಡಿ ಈಶ್ವರೀಯ ವಿಶ್ವ ವಿದ್ಯಾಲಯದ ಕಟ್ಟಡವನ್ನು ಕಟ್ಟಲು ಇಂಜಿನಿಯರ್ ನನಗೆ ಜವಾಬ್ದಾರಿ ಕೊಟ್ಟರು. ಅಲ್ಲಿಯ ಬ್ರಹ್ಮಕುಮಾರಿ ಅಕ್ಕಂದಿರು, ನನ್ನಲ್ಲಿ ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಿದರು ಎಂದರು.
ಅಬ್ದುಲ್ ಹುಮನಾಬಾದ್, ಮಹೇಶ ವಡ್ಡರ, ಪರಶುರಾಮ ಡೊಳ್ಳಿ, ಗಣೇಶ ಹಳ್ಳಿಕೇರಿ ಮೊಹಮ್ಮದ್ ಶಾರುಕ್, ಮಲ್ಲಿಕ್ ಕುಂದಗೋಳ, ಸತೀಶ ಕುರಬರ, ತಿಮ್ಮಣ್ಣ ಹಳ್ಳಕೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.