ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ: ಸ್ವಾದಿ ಜೈನ ಶ್ರೀ
ಧರ್ಮ ಕಾರ್ಯಗಳು ಸಮಾಜವನ್ನು ಒಗ್ಗೂಡಿಸುತ್ತವೆ.
Team Udayavani, Mar 3, 2022, 6:15 PM IST
ಧಾರವಾಡ: ಇಡೀ ವಿಶ್ವವೇ ಹಿಂಸೆಯಿಂದ ನಲುಗಿ ಹೋಗಿರುವ ಈ ಸಮಯದಲ್ಲಿ ಅಹಿಂಸೆ, ಅಪರಿಗ್ರಹ ಇಂದಿನ ಅವಶ್ಯಕತೆಗಳಾಗಿವೆ ಎಂದು ಸ್ವಾದಿ ಜೈನ ಮಠದ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
ನಗರದ ಸನ್ಮತಿ ಜಿನ ಮಂದಿರದಲ್ಲಿ ಜರುಗಿದ ನೂತನ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ ಜಿನಬಿಂಬ ಪ್ರತಿಷ್ಠಾನ ಮಹೋತ್ಸವದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಧರ್ಮಾಚರಣೆಯಿಂದ ಮನಸ್ಸಿಗೆ ಶಾಂತಿ ಪ್ರಾಪ್ತಿಯಾಗಿ ನಮ್ಮಲ್ಲಿರುವ ಕೆಟ್ಟ ವಿಚಾರಗಳನ್ನು ದೂರವಿಡಬಹುದು. ಆಗ ಸಮಾಜದಲ್ಲಿ ಶಾಂತಿ, ಸಾಮರಸ್ಯ ಉಂಟಾಗುತ್ತದೆ. ಜೈನ ಧರ್ಮದ ಜೀವಾಳವೇ ಅಹಿಂಸೆ. ಮಕ್ಕಳಲ್ಲಿ ಯುವಕರಲ್ಲಿ ಧಾರ್ಮಿಕ ಮನೋಭಾವನೆ ಬೆಳೆಸಬೇಕಾಗಿದೆ. ನಮಗೆ ಸಾಧ್ಯವಾದಷ್ಟು ದಾನ ಧರ್ಮ ಮಾಡುವದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರು.
ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಮಾತನಾಡಿ, ನಾಮ ಸ್ತಂಭ ಮನಸ್ಸಿನಲ್ಲಿರುವ ಕಷಾಯಗಳನ್ನು ದೂರ ಮಾಡುತ್ತದೆ. ಮನಸ್ಸಿನಲ್ಲಿರುವ ಕಷಾಯಗಳನ್ನು ಹೊರಗೆ ಬಿಟ್ಟು ಜಿನದರ್ಶನ ಮಾಡಬೇಕು ಎಂದು ಹೇಳಿದರು.
ಜೆಎಸ್ಸೆಸ್ ಕಾರ್ಯದರ್ಶಿ ಡಾ| ನ. ವಜ್ರಕುಮಾರ ಮಾತನಾಡಿ, ಧರ್ಮ ಕಾರ್ಯಗಳು ಸಮಾಜವನ್ನು ಒಗ್ಗೂಡಿಸುತ್ತವೆ. ಪ್ರೀತಿ ಗೌರವಗಳನ್ನು ಹಂಚುತ್ತವೆ. ದುಷ್ಟ ವಿಚಾರಗಳನ್ನು ದೂರ ಇಡುತ್ತವೆ. ಮಾನಸಿಕ ನೆಮ್ಮದಿಗೆ ಇಂತಹ ಆಚರಣೆಗಳು ಅವಶ್ಯ ಎಂದರು.
ಅಶೋಕ ಬಾಗಿ ಅಧ್ಯಕ್ಷತೆ ವಹಿಸಿದ್ದರು. ಮಾನ ಸ್ತಂಭ ನಿರ್ಮಾಣಕ್ಕೆ ಧನಸಹಾಯ ಮಾಡಿದ ಪಿ.ಸಿಂಹಸೇನ ದಂಪತಿ, ಡಾ| ನ. ವಜ್ರಕುಮಾರ ಮತ್ತು ಸುಮನಾ ವಜ್ರಕುಮಾರ, ಡಾ|ಅಜಿತ ಪ್ರಸಾದ ಮತ್ತು ವಾಣಿಶ್ರೀ ಪ್ರಸಾದ, ನೇಮಿನಾಥ ಪತ್ರಾವಳಿ ಮತ್ತು ರೀಟಾ ಪತ್ರಾವಳಿ ಅವರನ್ನು ಸನ್ಮಾನಿಸಲಾಯಿತು.
ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನಕುಮಾರ ಹಾಗೂ ಪದ್ಮಲತಾ ನಿರಂಜನಕುಮಾರ, ಚಾವುಂಡರಾಯ ಪ್ರಶಸ್ತಿ ಪುರಸ್ಕೃತ ಡಾ| ಶಾಂತಿನಾಥ ದಿಬ್ಬದ, ಕವಿಸಂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಡಾ| ಜಿನದತ್ತ ಹಡಗಲಿ, ಸಂಗೀತ ಕಾರ್ಯಕ್ರಮ ನಡೆಸಿದ ಜಯಶ್ರೀ ದಂಪತಿ, ಅಶೋಕ ಬಾಗಿ, ಚಾರುದತ್ತ ಬಾಗಿ ದಂಪತಿಯನ್ನು ಗೌರವಿಸಲಾಯಿತು. ಮಹಾವೀರ ಉಪಾದ್ಯೆ ನಿರೂಪಿಸಿದರು. ಜಿನೇಂದ್ರ ಕುಂದಗೋಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.