Hubli; ಕಾಂಗ್ರೆಸ್ ನ ಸುಳ್ಳುಗಳನ್ನು ನಂಬುವಂತಹ ಮನಸ್ಥಿತಿ ಜನರಲ್ಲಿಲ್ಲ: ಪ್ರಹ್ಲಾದ ಜೋಶಿ
Team Udayavani, Apr 6, 2024, 2:10 PM IST
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ನ್ಯಾಯ ಯೋಜನೆಗಳಿಗೆ ಮಹತ್ವ ನೀಡುವ ಅವಶ್ಯಕತೆಯಿಲ್ಲ. ಇನ್ನು ನ್ಯಾಯ ಒದಗಿಸುವುದು ಹೇಗೆ ಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.
ಶನಿವಾರ ಇಲ್ಲಿಯ ಕಾರವಾರ ರಸ್ತೆ ಅರವಿಂದ ನಗರದ ನೂತನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪಕರ ದಿನಾಚಣೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಕಾಂಗ್ರೆಸ್ ನಾಯಕರು ಮತ ಬ್ಯಾಂಕ್ ಹಾಗೂ ಅಧಿಕಾರಕ್ಕಾಗಿ ಇಂತಹ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಕಳೆದ ಬಾರಿಯೂ ಸಹ ಇಂತಹ ಅನೇಕ ಯೋಜನೆ ಘೋಷಿಸಿದ್ದರು ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ನಾಯಕರು ಇಲ್ಲಿವರೆಗೆ ಸುಳ್ಳು ಹೇಳಿಕೊಂಡೇ ಅಧಿಕಾರ ಮಾಡಿದ್ದಾರೆ. ಇಂತಹ ಸುಳ್ಳುಗಳನ್ನು ಪದೇಪದೆ ನಂಬುವಂತ ಮನಸ್ಥಿತಿ ಜನರಲ್ಲಿಲ್ಲ. ದೇಶದ ಜನರಿಗೆ ಇವರು ಸುಳ್ಳು ಹೇಳುವುದರ ಬಗ್ಗೆ ಗೊತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ವಸತಿ, ಕುಡಿಯುವ ನೀರು ಸೇರಿದಂತೆ ಅನೇಕ ಯೋಜನೆ ನೀಡಿದ್ದಾರೆ. ಕಾಂಗ್ರೆಸ್ ಕಳೆದ ಬಾರಿ ದೇಶದಲ್ಲಿ 52 ಸ್ಥಾನ ಗೆದ್ದಿದ್ದರು. ಈ ಬಾರಿ ಅಷ್ಟು ಸಹ ಬರುವುದಿಲ್ಲ. ರಾಜ್ಯದಲ್ಲಿ ಕೇವಲ ಎರಡು ಸ್ಥಾನ ಗೆಲ್ಲುತ್ತಾರೆ ಎಂಬ ಸಮೀಕ್ಷೆಯಲ್ಲಿ ಬಂದಿದೆ. ನನಗೆ ತಿಳಿದ ಪ್ರಕಾರ ಅಷ್ಟು ಗೆಲ್ಲುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.