ತಂಬಾಕು ವಿರುದ್ಧ ಜನ ಜಾಗೃತಿ ಅಗತ್ಯ: ದೀಪಾ
Team Udayavani, Jun 1, 2020, 8:34 AM IST
ಧಾರವಾಡ: ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಬಳಕೆ ಮಾಡದಂತೆ ಸಮಾಜದಲ್ಲಿ ಹೆಚ್ಚು ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ತಂಬಾಕು ರಹಿತ ದಿನಾಚರಣೆ ಕುರಿತ ಘೋಷವಾಕ್ಯ ಮುದ್ರಿತ ಮಾಸ್ಕ್ಗಳನ್ನು ವಿತರಿಸಿ ಅವರು ಮಾತನಾಡಿದರು. ತಂಬಾಕು ಹಾಗೂ ನಿಕೋಟಿನ್ ಪದಾರ್ಥಗಳನ್ನು ಸೇವಿಸುವುದು ಸಾಮಾಜಿಕ ಪಿಡುಗಾಗಿ ರೂಪುಗೊಂಡಿದೆ. ಇದರ ನಿಯಂತ್ರಣಕ್ಕೆ ಶಾಲೆ-ಕಾಲೇಜು ಸೇರಿದಂತೆ ಹೆಚ್ಚು ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯುವಕರಲ್ಲಿ, ಪಾಲಕರಲ್ಲಿ ತಂಬಾಕು ಸೇವನೆಯಿಂದ ಆಗುವ ಹಾನಿ, ರೋಗಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಸರ್ವೇಕ್ಷಣಾ ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ| ಸುಜಾತಾ ಹಸವಿಮಠ ಮಾತನಾಡಿ, 2019 ಏ. 1ರಿಂದ 2020 ಮಾ. 30ರವರೆಗಿನ ಅವ ಧಿಯಲ್ಲಿ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿದ ಕುರಿತು 1139 ಪ್ರಕರಣಗಳನ್ನು ದಾಖಲಿಸಿ 1,35,770 ರೂ. ದಂಡ ಆಕರಿಸಲಾಗಿದೆ. ತಂಬಾಕು ನಿಯಂತ್ರಣದ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಐದು ತರಬೇತಿ ಶಿಬಿರ ಮತ್ತು ಶಾಲಾ-ಕಾಲೇಜುಗಳಲ್ಲಿ 100ಕ್ಕೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. ಜಿಲ್ಲೆಯ 50ಕ್ಕೂ ಹೆಚ್ಚು ಶಾಲಾ-ಕಾಲೇಜುಗಳು ತಂಬಾಕು ಮುಕ್ತ ಪ್ರದೇಶಗಳಾಗಿವೆ ಎಂದು ತಿಳಿಸಿದರು.
ಸಾರ್ವಜನಿಕರಲ್ಲಿ ತಂಬಾಕು ಸೇವನೆ ಮಾಡದಂತೆ ಮತ್ತು ತಂಬಾಕು ಸೇವನೆಯಿಂದ ಬರುವ ಕ್ಯಾನ್ಸರ್ ದಂತ ರೋಗಗಳ ಬಗೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಐದು ತಾಲೂಕುಗಳಲ್ಲಿ ಸಾರ್ವಜನಿಕರಿಗೆ ಗುಲಾಬಿ ಹೂ ವಿತರಿಸುವ ಮೂಲಕ ತಂಬಾಕು ನಿಯಂತ್ರಣದ ಬಗ್ಗೆ ಗಮನ ಸೆಳೆಯಲಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಯಶವಂತ ಮದೀನಕರ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಸ್.ಎಂ. ಹೊನಕೇರಿ ವಂದಿಸಿದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾ ಧಿಕಾರಿ ಡಾ| ಶಶಿ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|ಕೆ.ಎನ್. ತನುಜಾ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.