ಡೆಂಘೀ-ಚಿಕೂನ್‌ಗುನ್ಯಾ ವೈರಾಣುವಿಗೆ ಜನ ಹೈರಾಣ
•7 ತಿಂಗಳಲ್ಲಿ 28ಕ್ಕೂ ಅಧಿಕ ಜನರಲ್ಲಿ ಡೆಂಘೀ ದೃಢ•ವೈರಲ್ ಫೀವರ್‌ನಿಂದ ಬಳಲಿದ ಜನಜೀವನ
Team Udayavani, Jul 30, 2019, 9:10 AM IST
ಹುಬ್ಬಳ್ಳಿ: ಪಾಲಿಕೆ ವ್ಯಾಪ್ತಿಯಲ್ಲಿ ಜನೆವರಿಯಿಂದ ಜುಲೈ ಮಧ್ಯ ಅವಧಿ ವರೆಗೆ 300ಕ್ಕೂ ಅಧಿಕ ಜನರು ಶಂಕಿತ ಡೆಂಘೀ-ಚಿಕೂನ್‌ಗುನ್ಯಾದಿಂದ ಬಳಲುತ್ತಿದ್ದಾರೆ. ಅವರಲ್ಲಿ 28ಕ್ಕೂ ಅಧಿಕ ಜನರಲ್ಲಿ ಡೆಂಘೀ ಹಾಗೂ 10ಕ್ಕೂ ಹೆಚ್ಚು ಜನರಲ್ಲಿ ಚಿಕೂನ್‌ಗುನ್ಯಾ ದೃಢಪಟ್ಟಿದೆ. ಓರ್ವರು ಡೆಂಘೀಯಿಂದ ಮೃತಪಟ್ಟಿದ್ದಾರೆ.
ನಗರದಲ್ಲಿ ಕೆಲದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ಮಕ್ಕಳು, ಜನರ ಮೇಲೆ ಆಗುತ್ತಿದೆ. ತಗ್ಗು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಕಾಟ ವಿಪರೀತವಾಗುತ್ತಿದೆ. ಹಲವರು ಜ್ವರ, ಕೆಮ್ಮು, ನೆಗಡಿ ಹಾಗೂ ಮೈ-ಕೈ, ಕೀಲು ನೋವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹೆಚ್ಚಾಗಿ ಸಮಸ್ಯೆ ಅನುಭವಿಸುತ್ತಿದ್ದಾರೆ.
ಜ್ವರದಿಂದ ಬಳಲುತ್ತಿರುವವರು ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ದಾಖಲಾದರೆ, ಅವರು ಡೆಂಘೀಯಿಂದ ಬಳಲುತ್ತಿದ್ದಾರೆಂದು ಸಂಶಯ ಬಂದರೆ ಅಂಥವರ ರಕ್ತದ ಮಾದರಿ ಸಂಗ್ರಹಿಸಿ ಕಿಮ್ಸ್ ಆಸ್ಪತ್ರೆ, ಎಸ್‌ಡಿಎಂ ಆಸ್ಪತ್ರೆ, ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗುತ್ತದೆ. ಇಲ್ಲಿ ಭಾರತ ಸರಕಾರದ ನಿರ್ದೇಶನದಂತೆ ಎಲಿಸಾ ಎಂಟಿಜೆನ್ ಪರೀಕ್ಷೆ ಮಾಡಲಾಗುತ್ತದೆ. ಅದರಲ್ಲಿ ರೋಗಿಯ ಜ್ವರದಲ್ಲಿ ಡೆಂಘೀ ಲಕ್ಷಣ ಕಂಡುಬಂದರೆ ಮಾತ್ರ ಅದನ್ನು ದೃಢಪಡಿಸುತ್ತಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ರೋಗಿಯು ಖಾಸಗಿ ಆಸ್ಪತ್ರೆ ಸೇರಿದಂತೆ ಇನ್ನಿತರೆಡೆ ದಾಖಲಾಗಿದ್ದರೆ, ಆಸ್ಪತ್ರೆಯವರು ರೋಗಿಯು ಡೆಂಘೀಯಿಂದ ಬಳಲುತ್ತಿರಬಹುದೆಂದು ಶಂಕೆ ಮೇಲೆ ಅವರ ರಕ್ತದ ಮಾದರಿ ಸಂಗ್ರಹಿಸಿ, ಅದನ್ನು ಕಿಮ್ಸ್ ಆಸ್ಪತ್ರೆ ಇಲ್ಲವೆ ಖಾಸಗಿ ಲ್ಯಾಬ್‌ಗಳಲ್ಲಿ ಪರೀಕ್ಷೆಗೊಳಪಡಿಸಿ ಖಚಿತ ಪಡಿಸಿಕೊಳ್ಳುತ್ತಾರೆ. ಅದಕ್ಕನುಗುಣವಾಗಿ ಚಿಕಿತ್ಸೆ ನೀಡುತ್ತಾರೆ. ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ರೋಗಿಗಳಲ್ಲಿ ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ವೈದ್ಯರು ಬಿಳಿ ರಕ್ತಕಣ ಕೊಡದೆ, ಜ್ವರ ಕಡಿಮೆಯಾಗುವಂತೆ ಮಾತ್ರೆ ಕೊಟ್ಟು, ಎನ್‌ಎಸ್1 ಪಾಸಿಟಿವ್ ಬರುವಂತೆ ಚಿಕಿತ್ಸೆ ನೀಡಿ, ಪ್ಲೇಟ್ಲೆಟ್ಸ್ ಕೌಂಟರ್ ಡ್ರಾಪ್ ಮಾಡಿ ಗುಣಮುಖ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.