ಹುಬ್ಬಳ್ಳಿಯಲ್ಲಿ ಪೈಲಟ್ ತರಬೇತಿ ಕೇಂದ್ರ: ಪ್ರಹ್ಲಾದ್ ಜೋಷಿ
Team Udayavani, Jan 5, 2022, 11:11 PM IST
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ ವಿಮಾನ ಚಾಲನ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಮ್ಮತಿಸಿದ್ದಾರೆ ಎಂದುಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಕೇಂದ್ರ ಸ್ಥಾಪನೆಯಿಂದ ರಾಜ್ಯದ ಎರಡನೇ ರಾಜಧಾನಿಯಾಗಿ ಹೊರಹೊಮ್ಮುತ್ತಿರುವ ಹುಬ್ಬಳ್ಳಿಗೆ ಮತ್ತೂಂದು ಹಿರಿಮೆ ಸಿಕ್ಕಂತಾಗಲಿದೆ. ವಿಮಾನ ಪೈಲಟ್‌ಗಳ ಕೊರತೆ ನೀಗಿಸಲು ಆರು ವಿಮಾನ ತರಬೇತಿ ಸಂಸ್ಥೆಗಳನ್ನು ದೇಶಾದ್ಯಂತ ಕೇಂದ್ರ ಸರಕಾರ ಸ್ಥಾಪಿಸುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಯಾವುದೇ ಶಾಲೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಈ ತರಬೇತಿ ಕೇಂದ್ರ ತಲೆ ಎತ್ತಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಂದೂ ಮಹಿಳೆಯರ ಟಾರ್ಗೆಟ್ ಮಾಡುತ್ತಿದ್ದ ಜಾಲ ಬಯಲಿಗೆ
ಈ ಕುರಿತು ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಸಚಿವರು, ಈ ಹಿಂದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರದೀಪಸಿಂಗ್ ಪುರಿ ಹಾಗೂ ಈಗಿನ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನ ತರಬೇತಿ ಕೇಂದ್ರ ಸ್ಥಾಪಿಸಲು ಆಗ್ರಹಿಸಲಾಗಿತ್ತು. ಇದಕ್ಕೆ ಸಚಿವ ಜ್ಯೋತಿರಾದಿತ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.