ಕವಿಸಂ ಕಾರ್ಯ ಚಟುವಟಿಕೆ ಅವಲೋಕನ
Team Udayavani, Oct 8, 2017, 11:42 AM IST
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್. ಆರ್. ವಿಶುಕುಮಾರ ಶನಿವಾರ ಭೇಟಿ ನೀಡಿ ಸಂಘದ ಕಾರ್ಯ ಚಟುವಟಿಕೆ ಅವಲೋಕಿಸಿದರು. ನವೀಕರಣಗೊಂಡ ಸಂಘದ ಪಾರಂಪರಿಕ ಕಟ್ಟಡ, ಗ್ರಂಥಾಲಯ, ರಾ. ಹ. ದೇಶಪಾಂಡೆ ಹಾಗೂ ನಾಡೋಜ ಡಾ| ಪಾಪು ಸಭಾಭವನಗಳನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹಾಗೂ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದ ವಿಶುಕುಮಾರ ಅವರಿಗೆ, ಸಂಘದ ಸಿಬ್ಬಂದಿ ನಿವೃತ್ತ ವೇತನ ಹಾಗೂ ಹಂಗಾಮಿ ಸಿಬ್ಬಂದಿ ಕಾಯಮಾತಿ ಕುರಿತು ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಕೊಳ್ಳುವ ಭರವಸೆ ನೀಡಿದರು.
ಸಂಘದ ಉಪಾಧ್ಯಕ್ಷ ಶಿವಣ್ಣ ಬೆಲ್ಲದ, ಕಾರ್ಯಾಧ್ಯಕ್ಷರಾದ ಡಾ|ಡಿ. ಎಂ. ಹಿರೇಮಠ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸಹ ಕಾರ್ಯದರ್ಶಿ ಶಿವಾನಂದ ಭಾವಿಕಟ್ಟಿ, ಕಾ.ಕಾ. ಸಮಿತಿ ಸದಸ್ಯರಾದ ಬಸವಪ್ರಭು ಹೊಸಕೇರಿ, ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣವರ ಹಾಗೂ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಮತ್ತು ರಂಗನಿರ್ದೇಶಕ ಕೆ. ಜಗುಚಂದ್ರ, ಸಂಘದ ಕಚೇರಿ ಅ ಧೀಕ್ಷಕ ಶಿ. ಮ. ರಾಚಯ್ಯನವರ ಇತರರಿದ್ದರು.
ಸಾಹಿತಿ ನಾಗಮ್ಮನವರ ಚಿಕಿತ್ಸಾ ವೆಚ್ಚ ಪಾವತಿಗೆ ಕ್ರಮ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೋಹನ ನಾಗಮ್ಮನವರ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ವೆಚ್ಚಗಳನ್ನು ತ್ವರಿತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ ಹೇಳಿದರು.
ನಗರದಲ್ಲಿ ಶನಿವಾರ ಸಾಹಿತಿ ಮೋಹನ ನಾಗಮ್ಮನವರ ಅವರ 55ನೇ ಜನ್ಮದಿನದ ಪ್ರಯುಕ್ತ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗಲೆಂದು ಅವರು ಹಾರೈಸಿದರು. ನಾಡು ನುಡಿ, ಗಡಿ ಪ್ರದೇಶ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜನಪರ ರಚನಾತ್ಮಕ ಕಾರ್ಯಗಳಲ್ಲಿ ನಾಗಮ್ಮನವರ ಪಾತ್ರ ಮಹತ್ವದ್ದಾಗಿದೆ.
ಅವರ ಚಿಕಿತ್ಸೆಗೆ ತಗುಲುವ ವೆಚ್ಚವನ್ನು ಸಕಾಲದಲ್ಲಿ ಇಲಾಖೆಯಿಂದ ಪಾವತಿಸಲಾಗುವುದು ಎಂದು ಭರವಸೆ ನೀಡಿದರು. ರಂಗಾಯಣ ಆಡಳಿತಾಧಿಕಾರಿ ಬಸವರಾಜ ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ರಂಗಣ್ಣವರ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.