ನಗರದಲ್ಲಿ ಪೊಲೀಸ್ ಬಂದೋಬಸ್ತ್
Team Udayavani, Dec 20, 2019, 10:58 AM IST
ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆಯುಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು. ಬಂದ್ ಹಾಗೂ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣದಿಂದ ಮಹಾನಗರದಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಗಸ್ತು ವಾಹನಗಳು ಸೇರಿದಂತೆ ಹಿರಿಯ ಅಧಿಕಾರಿಗಳು ವಿವಿಧ ಬಡಾವಣೆಗಳಲ್ಲಿ ಗಸ್ತಿನಲ್ಲಿದ್ದರು. ಪ್ರಮುಖವಾಗಿ ಕಿತ್ತೂರುಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರಿದ್ದರು. ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆಯುವ ಸೂಚನೆಯಿದ್ದ ಕಾರಣ ಆಯ್ದ ಸ್ಥಳಗಳಲ್ಲಿ ಬಿಗಿ ಭದ್ರತೆ ನೀಡಲಾಗಿತ್ತು. ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾನ ಮನಸ್ಕರ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಗೆ ಮುಂದಾಗಿರುವುದರನ್ನು ಹೊರತುಪಡಿಸಿದರೆ ನಗರದಲ್ಲಿ ಯಾವುದೇ ಹೋರಾಟಗಳು ನಡೆದಿಲ್ಲ. ಸ್ಥಳೀಯ ಪೊಲೀಸರೊಂದಿಗೆ ಸಿಎಆರ್, ಕೆಎಸ್ ಆರ್‌ಪಿ ತುಕಡಿಗಳನ್ನು ಬಂದೋಬಸ್ತಿಗೆ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.