ಮೀಟರ್ ತೋರಿದ ಪೊಲೀಸರು!
Team Udayavani, Jun 14, 2018, 5:27 PM IST
ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಸಂಜೆ ಪೊಲೀಸರು ಹಠಾತ್ತಾಗಿ ಆಟೋರಿಕ್ಷಾಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಚಾಲಕರ ಸಮವಸ್ತ್ರ, ಚಾಲನಾ ಪರವಾನಗಿ ಪತ್ರ, ಪರ್ಮಿಟ್, ವಿಮೆ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ಪರಿಶೀಲಿಸಿದರಲ್ಲದೆ, 70 ಆಟೋರಿಕ್ಷಾಗಳನ್ನು ಜಫ್ತು ಮಾಡಿದ್ದಾರೆ.
ಡಿಸಿಪಿ ಬಿ.ಎಸ್. ನೇಮಗೌಡ, ಎಸಿಪಿಗಳಾದ ಎಂ.ವಿ. ನಾಗನೂರ, ಎನ್.ಬಿ. ಸಕ್ರಿ ನೇತೃತ್ವದಲ್ಲಿ ನಗರದ ಹಳೆ ಬಸ್ ನಿಲ್ದಾಣ, ಕಿತ್ತೂರ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ದೇಸಾಯಿ ವೃತ್ತ, ದೇಶಪಾಂಡೆ ನಗರ, ಕೇಶ್ವಾಪುರ ಸರ್ವೋದಯ ವೃತ್ತ, ನ್ಯೂ ಇಂಗ್ಲಿಷ್ ಸ್ಕೂಲ್ ವೃತ್ತ, ಹಳೇಹುಬ್ಬಳ್ಳಿ ದುರ್ಗದ ಬಯಲು ವೃತ್ತ, ಇಂಡಿ ಪಂಪ್ ವೃತ್ತ ಸೇರಿದಂತೆ ಇನ್ನಿತರೆ ಪ್ರಮುಖ ರಸ್ತೆಗಳಲ್ಲಿ 20 ತಂಡಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 500ಕ್ಕೂ ಅಧಿಕ ಆಟೋ ರಿಕ್ಷಾಗಳನ್ನು ತಪಾಸಣೆ ನಡೆಸಿದರು.
ಕಾರ್ಯಾಚರಣೆ ವೇಳೆ ಪರ್ಮಿಟ್, ಸಮವಸ್ತ್ರ ಧರಿಸದ, ವಾಹನ ಚಾಲನಾ ಪರವಾನಗಿ ಪತ್ರ ಇಲ್ಲದ, ವಿಮೆ ಮಾಡಿಸದ ಹಾಗೂ ಅಗತ್ಯ ದಾಖಲೆಗಳನ್ನು ಹೊಂದಿರದ ಆಟೋರಿಕ್ಷಾ ಚಾಲಕರಿಗೆ ಸ್ಥಳದಲ್ಲೇ ದಂಡ ಹಾಕಿದರು. ಯಾವುದೇ ದಾಖಲಾತಿ ಹೊಂದಿರದ ಆಟೋರಿಕ್ಷಾ ಚಾಲಕರ 70 ವಾಹನಗಳನ್ನು ಜಫ್ತು ಮಾಡಿ ಕಾರವಾರ ರಸ್ತೆಯ ಹಳೆ ಸಿಎಆರ್ ಮೈದಾನದಲ್ಲಿ ನಿಲ್ಲಿಸಿದರು. ಸ್ಥಳದಲ್ಲೇ ದಂಡ ಕಟ್ಟದ ಚಾಲಕರಿಗೆ ಕೋರ್ಟ್‌ನಲ್ಲಿ ಹಣ ಪಾವತಿಸುವಂತೆ ಸೂಚಿಸಿದರು. ಜಫ್ತು ಮಾಡಿದ ಆಟೋ ರಿಕ್ಷಾಗಳಲ್ಲಿನ ಚಾಲಕರಿಂದ ದಾಖಲಾತಿಗಳನ್ನು ಪರಿಶೀಲಿಸಿ 20 ವಾಹನಗಳನ್ನು ಬಿಟ್ಟರು. ಇನ್ನುಳಿದ ವಾಹನಗಳ ಚಾಲಕರಿಗೆ ದಾಖಲಾತಿ ಹಾಜರುಪಡಿಸುವಂತೆ ಸೂಚಿಸಿದರು. ನಗರದಲ್ಲಿನ ಸಿವಿಲ್ ಹಾಗೂ ಸಂಚಾರ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.