ಕೋವಿಡ್ ಸಂಕಷ್ಟದಲ್ಲಿ ರಾಜಕೀಯ ರಂಪಾಟ ನಾಚಿಕೆಗೇಡು: ಹೊರಟ್ಟಿ
Team Udayavani, May 31, 2020, 12:18 PM IST
ಹುಬ್ಬಳ್ಳಿ: ಕೋವಿಡ್ ಸೋಂಕಿನಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ನಾಯಕತ್ವದ ಬದಲಾವಣೆ ಹೇಳಿಕೆ, ಶಾಸಕರ ರಾಜೀನಾಮೆ ವಿಚಾರಗಳು ರಾಜಕಾರಣಿಗಳ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದೆ. ಇದು ಜವಾಬ್ದಾರಿಯುತ ರಾಜಕಾರಣಿಗಳ ನಡೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅಧಿಕಾರಕ್ಕಾಗಿ ಕಚ್ಚಾಡುವ ಸಂದರ್ಭವಲ್ಲ. ಪಕ್ಷಭೇದ ಮರೆತು ಕೋವಿಡ್-19 ವಿರುದ್ಧ ಹೋರಾಡಬೇಕು. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ, ಶಾಸಕರ ರಾಜೀನಾಮೆ ನಾಚಿಕೆಗೇಡಿನ ವಿಚಾರ.ಸಂಕಷ್ಟದ ಸಂದರ್ಭದಲ್ಲಿ ರಾಜಕಾರಣಕ್ಕೆ ಒತ್ತು ನೀಡಿದರೆ ಜನರು ತಕ್ಕ ಶಾಸ್ತಿ ಮಾಡುವುದು ಖಚಿತ. ಪರಿಸ್ಥಿತಿ ಅರಿತು ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಜೂ. 4ರಂದು ಪಕ್ಷಾಂತರ ನಿಷೇಧ ವಿಚಾರವಾಗಿ ಸಭೆ ನಡೆಯಲಿದ್ದು, ಒಮ್ಮೆ ಚುನಾಯಿತನಾದ ವ್ಯಕ್ತಿ ರಾಜೀನಾಮೆ ನೀಡಿದರೆ ಅವಧಿ ಪೂರ್ಣಗೊಳ್ಳುವವರೆಗೂ ಯಾವುದೇ ಸ್ಥಾನಮಾನ ನೀಡುವಂತಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.
ಇತ್ತೀಚೆಗೆ ಬಿಜೆಪಿಗೆ ಹೋಗಿ ಸೋತಿರುವ ಶಾಸಕರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿದರೆ ಪಕ್ಷದಲ್ಲಿ ಇದುವರೆಗೆ ದುಡಿದುಕೊಂಡು ಬಂದಿರುವವರ ಪಾಡೇನು. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ರಾಜೀನಾಮೆ ಕೊಡಿಸಿ ಮಂತ್ರಿ ಸ್ಥಾನ ಕೊಡುವುದು ಪಕ್ಷಕ್ಕೆ ದೊಡ್ಡ ಗಂಡಾಂತರ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸೂಕ್ತ ನಿರ್ಧಾರ ಕೈಗೊಳ್ಳುವುದು ಉತ್ತಮ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.