ನರೇಂದ್ರ ಮೋದಿ ಸರ್ಕಾರದಿಂದ ರಾಜಕೀಯ ಭಯೋತ್ಪಾದನೆ: ಎಚ್ಡಿಕೆ
Team Udayavani, Apr 28, 2017, 10:34 AM IST
ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳನ್ನು ಸದೆಬಡಿಯಲು ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮೂಲಕ ರಾಜಕೀಯ ಭಯೋತ್ಪಾದನೆ ಆರಂಭಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜರ್ಮನ್ನಲ್ಲಿ ಹಿಟ್ಲರ್ ಆಳ್ವಿಕೆ ಆರಂಭದಲ್ಲಿ ಇಡೀ ಜನಸಮೂಹವೇ ಹಿಟ್ಲರ್..ಹಿಟ್ಲರ್.. ಎಂದು ಘೋಷಣೆ ಮೂಲಕ ಬೆಂಬಲ ತೋರಿತ್ತು. ಆದರೆ ಜನ ಹಿಟ್ಲರ್ನ ನೈಜ ರೂಪ ಅರಿಯುವುದರೊಳಗೆ ಬಹುದೊಡ್ಡ ಅನಾಹುತವೇ ನಡೆದು ಹೋಗಿತ್ತು. ಇದೀಗ ದೇಶದ ಎಲ್ಲ ಕಡೆಗೂ ಜನ ಮೋದಿ..ಮೋದಿ.. ಎಂದು ಕೂಗುತ್ತಿದ್ದಾರೆ. ಮೋದಿ ಸಹ ಹಿಟ್ಲರ್ ಹಾದಿಯಲ್ಲಿ ಸಾಗುತ್ತಿದ್ದಾರೆ ಎನಿಸುತ್ತಿದೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ 224 ಕ್ಷೇತ್ರಗಳಿಗೂ ಸ್ಪರ್ಧಿಸಲಿದೆ. ಪಕ್ಷದ 120 ಅಭ್ಯರ್ಥಿಗಳ ಪಟ್ಟಿ ಸಿದ್ದ ಇದ್ದು, ಮೇ ಕೊನೇ ಇಲ್ಲವೆ ಜೂನ್ ಮೊದಲ ವಾರ ಹುಬ್ಬಳ್ಳಿಯಲ್ಲಿ ರೈತ ಸಮಾವೇಶದ ಮೂಲಕ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ. ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುವೆ.ಅನಿವಾರ್ಯವಾದರೆ ಖಂಡಿತವಾಗಿಯೂ ಸ್ಪರ್ಧೆ ಮಾಡುವುದಾಗಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.