BJP- JDS Alliance; ‘ರಾಜಕಾರಣ ನಿಂತ ನೀರಲ್ಲ..”; ಮೈತ್ರಿ ಬಗ್ಗೆ ಬೊಮ್ಮಾಯಿ ಸಮರ್ಥನೆ
Team Udayavani, Sep 11, 2023, 5:50 PM IST
ಹುಬ್ಬಳ್ಳಿ: ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಗತ್ಯವಿದೆ ಎಂದು ಸಮರ್ಥನೆ ಮಾಡಿಕೊಂಡರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆಡೆ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಮತ್ತೊಂದೆಡೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಒಂದು ಹಿಡಿ ಮಣ್ಣನ್ನು ರಸ್ತೆಗೆ ಹಾಕಲಾರದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ ಎಂದರು.
ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿಪಕ್ಷದ ಜವಾಬ್ದಾರಿ ಆಗಿದೆ. ವಿಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೆ. ಆಗ ಇಬ್ಬರೂ ಅಸಹಾಯಕರಿದ್ದರೆ ಎಂದು ಕುಟುಕಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ವಿಚಾರದ ಕುರಿತು ಮಾಜಿ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನುವುದನ್ನು ವಸ್ತುಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ಇದನ್ನೂ ಓದಿ:Hyderabad: ಬಿರಿಯಾನಿ ಜೊತೆ ರಾಯಿತಾ ಕೇಳಿದ್ದಕ್ಕೆ ಥಳಿತ; ಗ್ರಾಹಕ ಮೃತ್ಯು
ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳ ಅಡ್ಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲವೂ ಕುಂಟುನೆಪ. ಈ ಹಿಂದೆಯು ಇದೇ ನಿಯಮಗಳಿದ್ದವು. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ದುಡ್ಡನ್ನು ಕೊಟ್ಟೆವು. ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟೆವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸಿಲ್ಲ. ರಾಷ್ಟ್ರೀಯ ವಿಪತ್ತಿನ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡುವ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಖಾಸಗಿ ಬಸ್ಸುಗಳ ಮುಷ್ಕರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳುತ್ತಾನೆ ಬಂದರು. ಸುಮ್ಮನೆ ಸಭೆ ಮಾಡಿದರು. ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದರು.
ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ವಿಚಾರ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಆಕಸ್ಮಾತ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.