ಪಾಂಡಿಚೇರಿ ಪಾಗಲ್ ಪ್ರೇಮಿ ಅಂದರ್
Team Udayavani, Jan 12, 2020, 10:43 AM IST
ಹುಬ್ಬಳ್ಳಿ: ತನ್ನ ಪ್ರೇಯಸಿಯೊಂದಿಗೆ ಮದುವೆ ಮಾಡಿಸಲಿಲ್ಲವೆಂದು ಸಿಟ್ಟಾಗಿ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಪಾಂಡಿಚೇರಿಯ ಯುವಕನನ್ನು ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಕ್ಷವೊಂದರ ಮುಖಂಡನಾದ ಪಾಂಡಿಚೇರಿಯ ರಾಕ್ ಪೆಡ್ರಿಕ್ ಬಂಧಿತನಾಗಿದ್ದಾನೆ. ಈತ ಸಂಬಂಧಿಕರೊಬ್ಬರ ಪುತ್ರಿಯನ್ನು ಪ್ರೀತಿಸುತ್ತಿದ್ದ. ಮನೆಯವರು ಮದುವೆ ಮಾಡಿಕೊಡಲಿಲ್ಲವೆಂದು ಸಿಟ್ಟಾಗಿ ಯುವತಿ ಜೊತೆಗಿನ ಖಾಸಗಿ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ವೆುàಲ್ ಮಾಡುತ್ತಿದ್ದ. ಆದರೆ ತನ್ನ ಮಾತಿಗೆ ಬೆಲೆ ಕೊಡದಿದ್ದಾಗ ಒಂದಿಷ್ಟು ವಿಡಿಯೋ ಹರಿಬಿಟ್ಟಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಕಡೆಯವರು ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು.
ತಾಯಿ ಕಡೆಯಿಂದ ದೂರದ ಸಂಬಂಧವೆಂಬ ಕಾರಣಕ್ಕೆ ರಾಕ್ ಪೆಡ್ರಿಕ್ ಯುವತಿ ಜೊತೆ ಒಡನಾಟ ಹೊಂದಿದ್ದ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡುವಂತೆ ಅನೇಕ ಸಲ ಕೇಳಿದ್ದ. ಆದರೆ, ಸಹೋದರ ಸಂಬಂಧವಾಗುತ್ತದೆ ಎಂದು ಯುವತಿ ಮನೆಯವರು ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ರಾಕ್ನು ಏಕಾಂತದ ಪೋಟೋ, ವಿಡಿಯೋಗಳನ್ನು ಹರಿಬಿಟ್ಟಿದ್ದ ಎಂದು ತಿಳಿದುಬಂದಿದೆ. ಯುವತಿಯ ತಂದೆ ಪಾಂಡಿಚೇರಿ ಮೂಲದವರಾಗಿದ್ದು, ಕೆಲಸ ನಿಮಿತ್ತ ನಗರಕ್ಕೆ ಬಂದಿದ್ದರು. ಇವರ ಬಹುತೇಕ ಕುಟುಂಬ ಪಾಂಡಿಚೇರಿಯಲ್ಲಿ ವಾಸವಾಗಿದೆ. ಆದರೆ, ಈ ಘಟನೆ ನಡೆದ ನಂತರ ಅವರು ಇಲ್ಲಿನ ಮಂಟೂರ ರಸ್ತೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ.
ಸೈಬರ್ ಕ್ರೈಂ ಠಾಣೆ ಇನ್ಸಪೆಕ್ಟರ್ ಡಿ.ಕೆ. ಪ್ರಭುಗೌಡ ನೇತೃತ್ವದಲ್ಲಿ ಶುಕ್ರವಾರ ಪಾಂಡಿಚೇರಿಗೆ ತೆರಳಿ ರಾಕ್ ಪೆಡ್ರಿಕ್ನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.