ಉಪಾಹಾರದಲ್ಲಿ ಹುಳು; ಪೌರಕಾರ್ಮಿಕರ ಆಕ್ರೋಶ
Team Udayavani, Jun 20, 2020, 6:32 AM IST
ಧಾರವಾಡ: ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲೂ ಅವಳಿನಗರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಶುಕ್ರವಾರ ಬೆಳಗ್ಗೆ ನೀಡಿದ ಉಪಾಹಾರದ ಅವಲಕ್ಕಿಯಲ್ಲಿ ಹುಳು ಪತ್ತೆಯಾಗಿದೆ. ನಗರದ ವಾರ್ಡ್ ನಂ.19ರ ಪೌರಕಾರ್ಮಿಕರಿಗೆ ನೀಡಿದ ಅವಲಕ್ಕಿಯಲ್ಲಿ ಹುಳು ಪತ್ತೆಯಾಗಿದ್ದು, ಉಪಾಹಾರ ಪೂರೈಸಿದ ಗುತ್ತಿಗೆದಾರರ ವಿರುದ್ಧ ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.
ಪೌರಕಾರ್ಮಿಕರಿಗೆ ಪೂರೈಸುವ ಆಹಾರದ ಗುಣಮಟ್ಟದ ಬಗ್ಗೆ ಪದೇ ಪದೇ ದೂರುಗಳು ಕೇಳಿಬರುತ್ತಿವೆ. ಕೂಡಲೇ ಎಚ್ಚೆತ್ತು ಉತ್ತಮ ಗುಣಮಟ್ಟದ ಆಹಾರ ಪೂರೈಸುವಂತೆ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘ ಆಗ್ರಹಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದಿಂದಲೂ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದು, ಜೂ. 6 ಹಾಗೂ ಜೂ. 12ರಂದು ನೀಡಿದ ಆಹಾರದಲ್ಲಿ ಹುಳು ಪತ್ತೆ ಆಗಿರುವ ಬಗ್ಗೆ ದೂರು ಬಂದಿತ್ತು. ಈಗ ಮತ್ತೆ ಘಟನೆ ಮರುಕಳಿಸಿದೆ. ಈ ರೀತಿಯ ಘಟನೆ ಪದೇ ಪದೇ ಮರುಕಳಿಸುವಂತಾಗಿದೆ. ಹೀಗಾಗಿ ಸಂಬಂಧಪಟ್ಟ ಗುತ್ತಿಗೆದಾರ/ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.