ಕಳಪೆ ಫಲಿತಾಂಶ; 36 ಶಾಲೆಗಳಿಗೆ ನೋಟಿಸ್
Team Udayavani, May 4, 2019, 11:59 AM IST
ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ 33 ಶಾಲೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಮತ್ತು 3 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಈ ಶಾಲೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಶಿಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ಅವರನ್ನೊಳಗೊಂಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶೇ. 40ಕ್ಕಿಂತ ಕಡಿಮೆ ಫಲಿತಾಂಶ ಸಾಧಿಸಿದ ಪ್ರತಿಯೊಂದು ಶಾಲೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ ವರದಿ ಪಡೆಯಲು ಡಿಡಿಪಿಐ ಅವರಿಗೆ ಸೂಚಿಸಿದರು.
ಮುಖ್ಯ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಅನುತ್ತೀರ್ಣಗೊಂಡ ಎಲ್ಲ ಮಕ್ಕಳಿಗೆ ಶನಿವಾರದಿಂದಲೇ ಪರಿಹಾರ ಬೋಧನೆ ಕೈಗೊಂಡು, ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 6135 ಮಕ್ಕಳು ಅನುತ್ತೀರ್ಣರಾಗಿದ್ದು, ಆಯಾ ವಲಯದಲ್ಲಿ ವಿಶೇಷ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸಿ ವಿಷಯ ಪರಿಣಿತಿಯುಳ್ಳ ಶಿಕ್ಷಕರನ್ನು ತರಗತಿಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಲು ಡಿಸಿ ಸೂಚಿಸಿದರು.
ಜೂ. 21ರಿಂದ ಪ್ರಾರಂಭಗೊಳ್ಳುವ ಪೂರಕ ಪರೀಕ್ಷೆಗಳಿಗೆ ಅನುತ್ತೀರ್ಣಗೊಂಡ ಮಕ್ಕಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವೊಲಿಸಬೇಕು. ಅನುತ್ತೀರ್ಣರಾದ ಮಕ್ಕಳು ಹಾಗೂ ಪಾಲಕರಿಗೆ ಶಿಬಿರ ನಡೆಸಿ ನಿರಂತರವಾಗಿ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಪೂರಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ತುಂಬಬೇಕು ಎಂದರು.
ಡಿಡಿಪಿಐ ಗಜಾನನ ಮನ್ನಿಕೇರಿ ಮಾತನಾಡಿ, ಜಿಲ್ಲೆಯ ಒಟ್ಟು ಫಲಿತಾಂಶ ಶೇ.75.45 ಆಗಿದ್ದು, ರಾಜ್ಯದಲ್ಲಿ 28ನೇ ಸ್ಥಾನದಲ್ಲಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೇ.77.43 ಫಲಿತಾಂಶ ಬಂದಿದ್ದು, ಅನುದಾನ ರಹಿತ ಶಾಲೆಗಳಲ್ಲಿ ಶೇ.76.94, ಅನುದಾನಿತ ಶಾಲೆಗಳಲ್ಲಿ ಶೇ.76.96 ಫಲಿತಾಂಶ ಬಂದಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.