ಪಿಒಪಿ ಗಣೇಶಮೂರ್ತಿ ನಿಷೇಧ ಕಡ್ಡಾಯ ಪಾಲನೆ ಅವಶ್ಯ: ಶೆಟ್ಟರ


Team Udayavani, Sep 6, 2017, 12:58 PM IST

hub2.jpg

ಹುಬ್ಬಳ್ಳಿ: ಪಿಒಪಿ ಗಣೇಶ ಮೂರ್ತಿ ಇನ್ನೊಂದು ವರ್ಷ ಎಂದು ಹೇಳುತ್ತಾ ಹೋಗಲಾಗುತ್ತಿದೆ. ಪಿಒಪಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಈ ಬಾರಿ ನೀಡಿದ ಅವಕಾಶ ಮುಂದಿನ ವರ್ಷ ಯಾವುದೇ ಕಾರಣಕ್ಕೂ ಮುಂದುವರಿಸಬಾರದು. ಸಂಪೂರ್ಣ ಮಣ್ಣಿನಿಂದ ನಿರ್ಮಿಸಿದ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಾಗಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. 

ಹುಬ್ಬಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಮಹಾಮಂಡಳದಿಂದ 11 ದಿನದ ಸಾರ್ವಜನಿಕ  ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪಿಒಪಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರ ಹಾನಿಯಾಗುತ್ತಿದ್ದು, ಈ ಕುರಿತು ಎಲ್ಲರಿಗೂ ಮಾಹಿತಿ ಇದ್ದರೂ ಕೂಡಾ ಪದೇ ಪದೇ ತಪ್ಪು ಮಾಡುತ್ತಿದ್ದೇವೆ. 

ಆದ್ದರಿಂದ ಮುಂದಿನ ಬಾರಿ ನಗರದ ಎಲ್ಲ ಮಂಡಳದವರು ಸಂಪೂರ್ಣ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಬೇಕು ಎಂದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಗಣೇಶ ಹಬ್ಬ ನಮ್ಮ ಸಂಪ್ರದಾಯದ  ಪ್ರತೀಕವಾಗಿದೆ. ಇನ್ನು ಹೆಚ್ಚು ಕಳೆಗಟ್ಟುವಂತೆ ನಾವೆಲ್ಲರೂ ಆಚರಣೆ ಮಾಡಬೇಕು.

ಮಣ್ಣೆತ್ತಿನ ಅಮಾವಾಸ್ಯೆಯಿಂದ ಹಿಡಿದು ಗಣೇಶ ಹಬ್ಬದವರೆಗೆ ಮಣ್ಣಿಗೆ ವಿಶೇಷ ಪೂಜೆ  ಸಲ್ಲಿಸುವ ಮೂಲಕ ನಮ್ಮ ಸಂಪ್ರದಾಯ ಆಚರಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡದೇ ಭೂ ತಾಯಿಗೆ ನಮನ ಸಲ್ಲಿಸಬೇಕು ಎಂದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಸಮಿತಿ ಗೌರವಾಧ್ಯಕ್ಷ ಮೋಹನ ಲಿಂಬಿಕಾಯಿ ಮಾತನಾಡಿದರು. 

ಈ ಸಂದರ್ಭದಲ್ಲಿ ಮಹಾಪೌರ ಡಿ.ಕೆ. ಚವ್ಹಾಣ, ವಿಧಾನ ಪರಿಷತ್‌ ಸದಸ್ಯ ಸೋಮಣ್ಣ ಬೇವಿನಮರದ, ಮಲ್ಲಿಕಾರ್ಜುನ ಸಾವುಕಾರ, ಪಾಲಿಕೆ ಸದಸ್ಯ ಮಹೇಶ ಬುರ್ಲಿ, ಉದ್ಯಮಿ ಜಿತೇಂದ್ರ ಮಜೇಥಿಯಾ, ಪಿ.ಎಂ. ಹೂಲಿ, ಎಸ್‌.ಎಸ್‌. ಕಮಡೊಳ್ಳಿಶೆಟ್ರಾ, ಚನ್ನಬಸಪ್ಪ ಧಾರವಾಡಶೆಟ್ರಾ ಇದ್ದರು. ಶ್ರೀಶೈಲಪ್ಪ ಶೆಟ್ಟರ ಸ್ವಾಗತಿಸಿದರು. ಅಮರೇಶ ಹಿಪ್ಪರಗಿ ನಿರೂಪಿಸಿದರು. ಅಲ್ತಾಫ್ ಕಿತ್ತೂರ ವಂದಿಸಿದರು.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.