ಧನಾತ್ಮಕ ಚಿಂತನೆಗಳು ಸಾಧನೆಗೆ ರಹದಾರಿ: ಪ್ರೊ| ವಿಜಯಲಕ್ಷೀ
Team Udayavani, Jul 15, 2017, 11:55 AM IST
ಧಾರವಾಡ: ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಅಳವಡಿಸಿಕೊಂಡರೆ ಜೀವನದಲ್ಲಿ ಏನನ್ನಾದರೂ ಸಾ ಧಿಸಬಹುದು ಎಂದು ಕವಿವಿಯ ಸಮಾಜ ನಿಖಾಯದ ಡೀನ್ ಪ್ರೊ| ವಿಜಯಲಕ್ಷ್ಮೀ ಅಮ್ಮಿನಬಾವಿ ಹೇಳಿದರು.
ಕರ್ನಾಟಕ ಕಲಾ ಮಹಾವಿದ್ಯಾಲಯದ ಫ್ಯಾರೇನ್ ಸಭಾಂಗಣದಲ್ಲಿ 2017-18ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈ ಹಂತದಲ್ಲಿ ಮನಸ್ಸು ತುಂಬಾ ಸೂಕ್ಷ್ಮತೆಯಿಂದ ಕೂಡಿದ್ದು, ಅದನ್ನು ನಿಯಂತ್ರಿಸಬೇಕಾದರೆ ನಮ್ಮ ಆಲೋಚನೆಗಳು ಧನಾತ್ಮಕವಾಗಿರಬೇಕು ಎಂದರು.
ಮನುಷ್ಯನಲ್ಲಿರುವ ಸಂವೇದನೆಗಳು ಹಿಡಿತದಲ್ಲಿ ಇದ್ದಾಗ ಮಾತ್ರ ಧನಾತ್ಮಕ ಚಿಂತನೆ ಸಾಧ್ಯ. ಆದರೆ, ವಿದ್ಯಾರ್ಥಿಗಳು ಇಂದು ಹತಾಶೆ ನಿರಾಸೆಯಂತಹ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ಅವರು ಧನಾತ್ಮಕ ಚಿಂತನೆಯನ್ನು ಮೈಗೂಡಿಸಿಕೂಂಡಾಗ ಯಶಸ್ಸು ಗಳಿಸಲು ಸಾಧ್ಯ ಎಂದರು.
ಕರ್ನಾಟಕ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ರಾಜೇಶ್ವರಿ ಮಹೇಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿ ಜರುಗಿದ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಿಯು ಪ್ರಥಮ ಮತ್ತ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಹೂಗುತ್ಛ ನೀಡಿ ಸತ್ಕರಿಸಲಾಯಿತು.
ಕರ್ನಾಟಕ ಕಲಾ ಮಹಾವಿದ್ಯಾಲಯವು ಶತಮಾನೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ| ರಾಜೇಶ್ವರಿ ಮಹೇಶ್ವರಯ್ಯ ರಚಿಸಿದ ಕೆಸಿಡಿ ಜಯಗೀತೆಯನ್ನು ಗಾಯಕಿ ಸುಜಾತಾ ಗುರವ ಪ್ರಸ್ತುತಪಡಿಸಿದರು.
ಡಾ| ಎಮ್.ಬಿ. ದಳಪತಿ, ಡಾ| ಅರುಣಾ ಹಳ್ಳಿಕೇರಿ, ಡಾ| ವಿ. ಶಾರದಾ, ಡಾ| ಸ್ಟೇಲ್ಲಾ ಸ್ಟಿವನ್, ಡಾ| ವಿಭಾ ಕುಲಕರ್ಣಿ ಇದ್ದರು. ಮನೋವಿಜ್ಞಾನದ ಮುಖ್ಯಸ್ಥ ಡಾ| ಎಸ್.ಜಿ. ಜಾಧವ್ ಪರಿಚಯಿಸಿದರು. ಡಾ| ರಜನಿ ಎಚ್. ನಿರೂಪಿಸಿದರು. ಡಾ| ವಾಮದೇವ ತಳವಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.