Hubballi: ಮೀಸಲಾತಿ ಕುರಿತು ರಾಹುಲ್ ಹೇಳಿಕೆಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ
Team Udayavani, Sep 11, 2024, 8:46 PM IST
ಹುಬ್ಬಳ್ಳಿ: ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಓಡಾಡುವುದು, ಆದರೆ ಮನಸ್ಸಿನಲ್ಲಿ ವಿರೋಧ ಮನಸ್ಥಿತಿ ಹೊಂದಿರುವುದು ಈಗ ಹೊರ ಬಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೀಸಲಾತಿ ಕುರಿತಾದ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.
ಬುಧವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ನೋಡಿದರೆ ಎಂದಿಗೂ ಆವರು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳು. ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಅವರ ಭಾಷಣಗಳು ಹಾಗೂ ಲೋಕಸಭೆಯಲ್ಲಿ ಅಧಿಕೃತವಾಗಿ ಮಾತನಾಡಿರುವುದನ್ನು ನೋಡಿದರೆ ಇವರು ಮೀಸಲಾತಿ ವಿರೋಧಿಗಳು ಎಂಬುವುದು ಸ್ಪಷ್ಟವಾಗುತ್ತವೆ. ಸಂವಿಧಾನಾತ್ಮಕ ಮೀಸಲಾತಿ ಕಲ್ಪಿಸಿದ ಡಾ| ಬಿ.ಆರ್.ಅಂಬೇಡ್ಕರ್ ಅವರನ್ನು ಘೋರವಾಗಿ ಅವಮಾನ ಮಾಡಿದ್ದು ಇದೇ ಕಾಂಗ್ರೆಸ್. ೧೯೯೦ ರವರೆಗೆ ಇವರಿಗೆ ಭಾರತರತ್ನ ಪುರಸ್ಕಾರ ನೀಡಲಿಲ್ಲ. ಹಿಂದೆ ಚುನಾವಣೆಯಲ್ಲಿ ಸೋಲಿಸಿದರು ಎಂದರು.
ದಲಿತರಿಗೆ ಅನ್ಯಾಯ ಮಾಡುವ ಹಾಗೂ ಮೀಸಲಾತಿಗೆ ವಿರೋಧ ಮಾಡುವ ಪಕ್ಷವಿದು. ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡಿದ್ದಾರೆ. ೧೯೮೪ ರಲ್ಲಿ ಸಿಖ್‌ರ ಕೊರಳಿಗೆ ಟೈಯರ್ ಹಾಕಿ ಸುಟ್ಟವರು ಇದೀಗ ಅವರ ಪೇಟದ ಬಗ್ಗೆ ಮಾತನಾಡುತ್ತಾರೆ. ಅಧಿಕಾರಕ್ಕಾಗಿ ದೇಶದ ಭದ್ರತೆಗೆ ದಕ್ಕೆ ತರುವಂತೆ ಪಕ್ಷ ಹಾಗೂ ಪಕ್ಷದ ನಾಯಕರು ಕಾಂಗ್ರೆಸ್‌ನಲ್ಲಿದ್ದಾರೆ. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಅಪ್ರಬುದ್ಧ ಹೇಳಿಕೆಯನ್ನು ನಾವು ತಿರಸ್ಕಾರ ಮಾಡಿದ್ದೇವೆ ಎಂದರು.
ಇದನ್ನೂ ಓದಿ: Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್.ಕೆ.ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.