ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ: ತಪ್ಪಿತಸ್ಥರ ವಿರುದ್ಧಕ್ರಮಕ್ಕೆ ಪ್ರಕಾಶ ರಾಠೋಡ ಆಗ್ರಹ
Team Udayavani, May 26, 2021, 4:39 PM IST
ವಿಜಯಪುರ : ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗ್ರಾಮವೊಂದರಲ್ಲಿ ದಲಿತ ವರ್ಗದ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಕುರಿತು ದಾಖಲಾಗಿರುವ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರರಾದ ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಕರಣದಲ್ಲಿ ಯುವಕನ ಹೆಸರನ್ನು ಬಾಲಕಿಯರ ಪೊಷಕರು ದಿ.:14-5-2021ರಂದು ನೀಡಿರುವ ದೂರು ದಾಖಲಿಸಿದ್ದಾರೆ. ಇಬ್ಬರು ಬಾಲಕಿಯವರು ಕಣ್ಮರೆಯಾಗಿ, ನಂತರ ಶವವಾಗಿ ಪತ್ತೆಯಾಗಿದ್ದಾರೆ. ಸದರಿ ಕೃತ್ಯ ಮಯಾ೯ದೆ ಹತ್ಯೆ ಎಂದು ಮೇಲ್ನೊಟಕ್ಕೆ ಕಂಡುಬಂದಿದೆ. ಐದಾರು ತಿಂಗಳಿಂದ ಬಾಲಕಿಯೊಬ್ಬಳ ಹಿಂದೆ ಬಿದ್ದಿದ್ದ ಆರೋಪಿಯೊಬ್ಬ ಪ್ರೀತಿಸುವಂತೆ ಪೀಡಿಸಿ, ಕಿರುಕುಳ ನೀಡಿರುವುದು ಕಂಡುಬಂದಿದೆ. ಪದೇ ಪದೇ ಈ ರೀತಿ ಘಟನೆ ನಡೆಯುತ್ತಿರುವುದರಿಂದ, ಸದರಿ ವಿಷಯವನ್ನು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಮತ್ತು ಸದರಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಡುಪಿ : ಎಪಿಎಂಸಿ ಪ್ರಾಂಗಣದಲ್ಲಿ ಬುಧವಾರ ನಡೆಯುತ್ತಿದ್ದ ವಾರದ ಸಂತೆ ರದ್ದು
ಇದೇ ವಿಷಯವಾಗಿ ಬುಧವಾರ ಪೊಲೀಸ್ ಮಹಾನಿದೇ೯ಶಕ ಹಾಗೂ ಪೊಲೀಸ್ ಮಹಾನಿರೀಕ್ಷರನ್ನು ತಾವು ಕಾಂಗ್ರೆಸ್ ಮುಖಂಡರಾದ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಸೈಯದ್ ನಾಸೀರ್ ಹುಸೈನ್ ಅವರೊಂದಿಗೆ ಭೇಟಿಯಾಗಿ ದೂರು ನೀಡಿದ್ದಾಗಿ ಪ್ರಕಾಶ ರಾಠೋಡ ತಿಳಿಸಿದ್ದಾರೆ.
ಇದಲ್ಲದೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ವಿಜಯಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಎಸ್ಪಿ ಅವರು ಭರವಸೆ ನೀಡಿದ್ದಾರೆ.
ಪೊಲೀಸ್ ಅಧೀಕ್ಷಕರು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು, ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ನೀಡುವುದಾಗಿಯೂ ಆಶ್ವಾಸನೆ ನೀಡಿದ್ದಾರೆ.
ಇದೇ ಸಂದಭ೯ದಲ್ಲಿ ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ ವಿಜಯಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರೊಂದಿಗೆ ಮತ್ತು ಬಸವನ ಬಾಗೇವಾಡಿಯ ಸಿಪಿಐ ಅವರೊಂದಿಗೆ ಮಾತನಾಡಿದಾಗ ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ಕ್ರಮ ಕೈಗೊಂಡು ತಪ್ಪಿತಸ್ಥರ ವಿರುದ್ಧ ದೌಜ೯ನ್ಯ ಕೃತ್ಯ ಕ್ರಮ ತೆಗೆದುಕೊಳ್ಳುವ ಆಶ್ವಾಸನೆ ನೀಡಿದ್ದಾಗಿ ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ ತಿಳಿಸಿದ್ದಾರೆ ರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.